ಪುತ್ತೂರಿನ ಖ್ಯಾತ ಡಾಕ್ಟರನ್ನೇ ಯಾಮಾರಿಸಿದ ಸೈಬರ್ ವಂಚಕರು!
– ಬ್ಲ್ಯಾಕ್ ಮೇಲ್ ಮಾಡಿದ್ದು ಹೇಗೆ ? ಡಾಕ್ಟರ್ 16 ಲಕ್ಷ ಗುಳುಂ!
– ಕರಾವಳಿಯಲ್ಲಿ ಹೆಚ್ಚುತ್ತಿದೆ ಸೈಬರ್ ಕ್ರೈಂ!
NAMMUR EXPRESS NEWS
ಪುತ್ತೂರು: ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದು, ಸುಮಾರು 16 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದಾರೆ. ಎರಡು ದಿನದ ಹಿಂದೆ ವೈದ್ಯರಿಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ವಂಚನೆ ನಡೆದಿರುವ ಬಗ್ಗೆ ಪುತ್ತೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪುತ್ತೂರಿನ ಬೊಳ್ವಾರು ನಿವಾಸಿ, ಹಾಗೂ ಖ್ಯಾತ ವೈದ್ಯರಾಗಿರುವ ಡಾ.ಚಿದಂಬರ ಅಡಿಗ ವಂಚನೆಗೊಳದವರು.ಅವರು ನೀಡಿದ ದೂರಿನಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಾ ಅಡಿಗ ಅವರಿಗೆ ದೂರವಾಣಿ ಮೂಲಕ ಮಾ.28 ರಂದು ಬೆಳಿಗ್ಗೆ, ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿದೆ. ಆ ಕರೆಯನ್ನು ಸ್ವೀಕರಿಸಿ ಮಾತನಾಡಿದಾಗ, ಕರೆ ಮಾಡಿದ ವ್ಯಕ್ತಿಯು ನಾನು ದೆಹಲಿಯ ಪೊಲೀಸ್ ಅಧಿಕಾರಿ ಎಂದು ಬಿಂಬಿಸಿಕೊಂಡಿದ್ದಾರೆ.
ಈತ ಬಳಿಕ ” ದೆಹಲಿಯಲ್ಲಿ ಮಾದಕ ವಸ್ತುವಿಗೆ ಸಂಬಂದಿಸಿದಂತೆ ಹಾಗೂ ಅಕ್ರಮ ಹಣ ಹೊಂದಿರುವ ಬಗ್ಗೆ ಮತ್ತು ಮಾನವ ಕಳ್ಳ ಸಾಗಾಣಿಕೆ ಪ್ರಕರಣ ದಾಖಲಾಗಿದೆ. ನಿಮ್ಮನ್ನು ಬಂಧಿಸಲು ಮಾಡಲು ಕೋರ್ಟ್ ನಿಂದ ವಾರಂಟ್ ಬಂದಿದೆ. ಹೀಗಾಗಿ ತಕ್ಷಣ ದೆಹಲಿಯ ಸಿಬಿಐ ಕೋರ್ಟ್ ಗೆ ಹಾಜರಾಗಬೇಕು. ನಿಮಗೆ ಇಲ್ಲಿಗೆ ಬರಲು ಆಗದಿದ್ದರೆ ಈಗ ಆನ್ಲೈನ್ ಮೂಲಕ ಕೋರ್ಟ್ ನ ಕೇಸ್ ನಡೆಸುತ್ತೇವೆ” ಎಂದು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ನೀವು ನಿಮ್ಮ ಬ್ಯಾಂಕ್ ಅಕೌಂಟ್ ನಲ್ಲಿದ್ದ ಹಣವನ್ನು ನಾನು ಹೇಳುವ ಅಕೌಂಟ್ ಗೆ ವರ್ಗಾವಣೆ ಮಾಡಬೇಕು, ನ್ಯಾಯಾಲಯದಲ್ಲಿ ಪ್ರಕರಣ ಮುಗಿದ ಮೇಲೆ ನಿಮಗೆ ನಿಮ್ಮ ಹಣ ವಾಪಾಸು ಸಿಗುತ್ತದೆ ಇಲ್ಲದಿದ್ದರೆ ನಿಮ್ಮ ಮನೆಗೆ ಬಂದು ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ ಎಂಬುದಾಗಿ ತಿಳಿಸಿದ್ದಾರೆ.
ಇಷ್ಟು ಮಾತ್ರವಲ್ಲದೇ , ವೈದರಾಗಿರುವ ಅಡಿಗ ಅವರ ಬಗ್ಗೆ ವಿರುದ್ದ ದೆಹಲಿಯಲ್ಲಿ ಪ್ರಕರಣ ದಾಖಲಾಗಿರುವಂತೆ ಬಿಂಬಿಸುವ ಕೆಲವೊಂದು ದಾಖಲೆಗಳನ್ನು ಅಡಿಗ ರವರ ಮೊಬೈಲ್ ಫೋನ್ ನ ವಾಟ್ಸ್ ಆಪ್ ಗೆ ಕಳುಹಿಸಿ ಪ್ರಕರಣ ನೈಜವೆಂಬಂತೆ ಬಿಂಬಿಸಿದ್ದಾನೆ.
ಅಪರಿಚಿತನ ಮಾತನ್ನು ನಂಬಿ, ಗಾಬರಿಗೊಂಡು,ಅಡಿಗರವರು ಬ್ಯಾಂಕ್ ಖಾತೆಯಿಂದ, RTGS ಮೂಲಕ ಸದರಿ ಅಪರಿಚಿತ ತಿಳಿಸಿದ ಬ್ಯಾಂಕ್ ಖಾತೆಗೆ ರೂ 16,50,000/- ಹಣವನ್ನು ವರ್ಗಾವಣೆ ಮಾಡಿದ್ದರೆ. ಸ್ವಲ್ಪ ಹೊತ್ತಿನ ಬಳಿಕ ಸದ್ರಿ ಅದೇ ವ್ಯಕ್ತಿಯು ಪಿರ್ಯಾದಿದಾರರಿಗೆ ಕರೆಮಾಡಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಾಗ, ಅನುಮಾನ ಬಂದು ದೂರವಾಣಿ ಕರೆ ಕಡಿತಗೊಳಿಸಿದ್ದು, ತನ್ನ ಗೆಳೆಯರೊಂದಿಗೆ ಈ ಬಗ್ಗೆ ತಿಳಿಸಿದಾಗ ಸದರಿ ಆನ್ ಲೈನ್ ಮೋಸದ ಕೃತ್ಯದ ಬಗ್ಗೆ ತಿಳಿದುಬಂದಿರುತ್ತದೆ. ಈ ಬಗ್ಗೆ ದೂರುದಾರರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.