Categories
ಕರಾವಳಿ

ದಕ್ಷಿಣ ಕನ್ನಡ ಡಿಸಿ ವರ್ಗಾವಣೆ!

ಕರಾವಳಿ ಟಾಪ್ ನ್ಯೂಸ್

ದಕ್ಷಿಣ ಕನ್ನಡ ಡಿಸಿ ವರ್ಗಾವಣೆ!
– ಮಂಗಳೂರಿನಲ್ಲಿ ಡಿವೈಡರ್ ಗುದ್ದಿದ ಕಾರು, ಇಬ್ಬರು ಸಾವು
– ಮಹಿಳೆಯರ ಎದುರು ಅಶ್ಲೀಲ ವರ್ತನೆ, ಆರೋಪಿಯ ಬಂಧನ

NAMMUR EXPRESS NEWS
ಮಂಗಳೂರು: ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮ೦ಗಳವಾರದಂದು ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯಕ್ತ ದರ್ಶನ್ ಎಚ್.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿಯಾಗಿ ನೇಮಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇದುವರೆಗೆ ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ ಜಿಲ್ಲಾಧಿಕಾರಿಗಳಾಗಿ ನೇಮಿಸಲಾಗಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಅವರನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕಾರ್ಯದರ್ಶಿಯಾಗಿ ವರ್ಗಾಯಿಸಿದ್ದು ಪ್ರಭಾರ ಹುದ್ದೆಯಲ್ಲಿದ್ದ ಡಾ.ಆರ್. ವಿಶಾಲ್ ಅವರನ್ನು ಬಿಡುಗಡೆಗೊಳಿಸಲಾಗಿದೆ.
ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರನ್ನು ಸಮಗ್ರ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕಿಯಾಗಿ ವರ್ಗಾಯಿಸಿದ್ದು ಡಾ.ಕೆ.ವಿ.ತ್ರಿಲೋಕ್‌ಚಂದ್ರ ಅವರನ್ನು ಹೆಚ್ಚುವರಿ ಹೊಣೆಗಾರಿಕೆಯಿಂದ ಬಿಡುಗಡೆ ಮಾಡಿದೆ. ಜತೆಗೆ ಬೆಂಗಳೂರು ನಗರ ಜಿಪಂ ಸಿಇಒ ಕೆ.ಎಸ್. ಲತಾಕುಮಾರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿದೆ.

ಮಂಗಳೂರಿನಲ್ಲಿ ಡಿವೈಡರ್ ಗುದ್ದಿದ ಕಾರು, ಇಬ್ಬರು ಸಾವು

ಮಂಗಳೂರು: ಊಟಕ್ಕೆಂದು ಹೋಗಿ ಮರಳಿ ಬರುತ್ತಿದ್ದಾಗ ಕಾರೊಂದು ಡಿವೈಡರ್ ಗೆ ಗುದ್ದಿ ಎನ್‌ಎಸ್ ಯುಐ ಮುಖಂಡ ಸೇರಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಜಪ್ಪಿನಮೊಗರು ನಡುಮುಗೇರ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಕದ್ರಿ ನಿವಾಸಿ ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಮೃತ ದುರ್ದೈವಿಗಳು. ಓಂಶ್ರೀ ಅವರು ಎನ್‌ಎಸ್ ಯುಐ ಮುಖಂಡರಾಗಿದ್ದು ಸಂಘಟನೆಯ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ನಂತರ ಮೋರಿಗೆ ಬಡಿದು ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಮಹಿಳೆಯರ ಎದುರು ಅಶ್ಲೀಲ ವರ್ತನೆ, ಆರೋಪಿಯ ಬಂಧನ

ಮಂಗಳೂರು: ಹಂಪನಕಟ್ಟೆಯ ಕ್ಲಾಕ್ ಟವರ್ ಬಳಿಯ ರಾಜಾಜಿ ಪಾರ್ಕ್‌ನಲ್ಲಿ ಮಹಿಳೆಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ಓರ್ವನನ್ನು ಪಾಂಡೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಉತ್ತರ ಭಾರತ ಮೂಲಕ ಅಕ್ರಮ್ ಪಾಷಾ ಎಂದು ತಿಳಿದು ಬಂದಿದೆ. ಈ ಸಂದರ್ಭ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪಾಂಡೇಶ್ವರ ಠಾಣೆಯ ಸಿಬ್ಬಂದಿ ಆತನನ್ನು ವಿಚಾರಿಸಿ, ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.