ಅಣ್ಣನ ಜೀವ ವಾಪಸ್ ಕೊಡೋಕ್ಕಾಗಲ್ಲ, ಪರಿಹಾರನಾದ್ರೂ ನೀಡಿ..!
– ನಾವು ಕಷ್ಟದಲ್ಲಿದ್ದೇವೆ,ಸ್ವಂತ ಮನೆಯಾಗಬೇಕು
– ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಒತ್ತಾಯ
NAMMUR EXPRESS NEWS
ಉಡುಪಿ: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎದುರು ಶರಣಾಗಲಿರುವ ಕರ್ನಾಟಕದ ಮೋಸ್ಟ್ ವಾಂಟೆಡ್ ಆರು ಜನ ನಕ್ಸಲರ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಎನ್ಕೌಂಟರ್ ಗೆ ಬಲಿಯಾದ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಸುಗುಣ, ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ. ಪರಿಹಾರ ಆದರೂ ನೀಡಿ ಎಂದು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ನಾವು ಕಷ್ಟದಲ್ಲಿದ್ದೇವೆ ಸ್ವಂತ ಮನೆಯಾಗಬೇಕು, ಒಂದು ದಿನ ಕೆಲಸಕ್ಕೆ ಹೋಗದೆ ಇದ್ದರೆ ನಮ್ಮ ದಿನ ಸಾಗೋದಿಲ್ಲ. ಶರಣಾಗುವವರಿಗೆ ನೀಡೊ ಪರಿಹಾರ ನಮಗೂ ಕೊಡಿ ಸಾಕು. ನನ್ನ ಅಣ್ಣನ ಜೀವ ಕೊಡಲು ಸಾಧ್ಯವಿಲ್ಲ. ಎನ್ಕೌಂಟರ್ ಆಗಿದೆ ಅವರ ಜೀವ ಹೋಗಿಯಾಗಿದೆ. ಉಳಿದವರಿಗೆ ಕೊಡೊ ಪರಿಹಾರ ನಮಗೆ ಕೊಟ್ರೆ ಸಾಕು ನಾವು ಕಷ್ಟದಲ್ಲಿದ್ದೇವೆ,ಜೀವನಕ್ಕೆ ನೆರವಾಗುತ್ತದೆ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.