Categories
ಕರಾವಳಿ

ಶಿಕ್ಷಣ ಕ್ಷೇತ್ರದಲ್ಲಿ ಎಕ್ಸೆಲ್ ಗುರುವಾಯನಕೆರೆ ಹೊಸ ಹೆಜ್ಜೆ!

ಶಿಕ್ಷಣ ಕ್ಷೇತ್ರದಲ್ಲಿ ಎಕ್ಸೆಲ್ ಗುರುವಾಯನಕೆರೆ ಹೊಸ ಹೆಜ್ಜೆ!
– ಇನ್ಮುಂದೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆ ಆಡಳಿತ ಎಕ್ಸೆಲ್ ವಿದ್ಯಾ ಸಂಸ್ಥೆ
– ಶಿಕ್ಷಣ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡುತ್ತಿರುವ ಸುಮಂತ್ ಕುಮಾರ್ ಜೈನ್ ನೇತೃತ್ವದ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆ

NAMMUR EXPRESS NEWS
ಮಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಎಕ್ಸೆಲ್ ಗುರುವಾಯನಕೆರೆ ಮತ್ತೊಂದು ಹೊಸ ಹೆಜ್ಜೆ ಇಟ್ಟಿದೆ. ಇನ್ಮುಂದೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆ ಆಡಳಿತ ಎಕ್ಸೆಲ್ ವಿದ್ಯಾ ಸಂಸ್ಥೆಗೆ ಸೇರಿದೆ.
ಶಿಕ್ಷಣ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡುತ್ತಿರುವ ಸುಮಂತ್ ಕುಮಾರ್ ಜೈನ್ ನೇತೃತ್ವದ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆ ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಮಟ್ಟದ ಸಾಧನೆ ಮಾಡಿದೆ. ರಾಜ್ಯದ ಶೈಕ್ಷಣಿಕ ಭೂಪಟದಲ್ಲಿ ಅನನ್ಯ ಸ್ಥಾನಗಳಿಸಿಕೊಂಡಿರುವ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳು, ವೇಣೂರಿನ 150 ವರ್ಷಗಳಿಗೂ ಮಿಕ್ಕಿ ಇತಿಹಾಸವಿರುವ ವಿದ್ಯೋದಯ ವಿದ್ಯಾ ಸಂಸ್ಥೆಗಳ ಆಡಳಿತವನ್ನು ವಹಿಸಿ ಕೊಂಡಿದೆ. ಸಾವಿರಾರು ಪ್ರತಿಭಾವಂತರನ್ನು ಸಮಾಜಕ್ಕೆ ಸಮರ್ಪಿಸಿದ ವೇಣೂರಿನ ವಿದ್ಯೋದಯ ವಿದ್ಯಾಸಂಸ್ಥೆಗಳಲ್ಲಿ ಎಲ್ ಕೆ ಜಿ, ಯು ಕೆ ಜಿ, ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ನಡೆಯುತ್ತಿವೆ.

ಅತ್ಯುತ್ತಮ ಸೌಲಭ್ಯ: ಗುಣಮಟ್ಟದ ಶಿಕ್ಷಣ

ಬಾಲಕ – ಬಾಲಕಿಯರಿಗೆ ಪ್ರತ್ಯೇಕ ವಸತಿನಿಲಯಗಳಿವೆ. 24×7 ಬಿಸಿ ನೀರಿನ ವ್ಯವಸ್ಥೆಯಿದೆ. ಸ್ಥಳೀಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬಸ್ ಸೌಲಭ್ಯವಿದೆ. ಒಂದುಕಾಲದಲ್ಲಿ ಇಲ್ಲಿನ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ನಾಡಿನಲ್ಲೇ ಹೆಸರಾಗಿದ್ದವು.

ರಾಜ್ಯದಲ್ಲಿ ಅತ್ಯುತ್ತಮ ಶಾಲೆ ಮಾಡುವ ಕನಸು: ಸುಮಂತ್ ಕುಮಾರ್ ಜೈನ್

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು ಶ್ರೇಷ್ಠ ವಿದ್ಯಾ ಕೇಂದ್ರಗಳಾಗಿದ್ದವು. ಸ್ವತಃ ನನ್ನ ತಂದೆ, ದೊಡ್ಡಪ್ಪ, ಚಿಕ್ಕಪ್ಪ ಎಲ್ಲರೂ ವಿದ್ಯೋದಯ ವಿದ್ಯಾ ಸಂಸ್ಥೆಗಳಲ್ಲಿ ಓದಿದ್ದರು. ತನ್ನ ತಂದೆಯವರಾದ ಬೊಳ್ಳೂರು ಗುತ್ತು ಸತೀಶ್ ಕುಮಾರ್ ಆರಿಗ ಅವರು ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳಲ್ಲಿ ಓದಿದ್ದು ಅವರ ಅಭಿವೃದ್ಧಿ ಕನಸು ನನಸು ಮಾಡುವೆ ಎಂದಿದ್ದಾರೆ,
ಎಕ್ಸೆಲ್ ವೇಣೂರಿನಲ್ಲಿ ಎಲ್ ಕೆ ಜಿ, ಯು ಕೆ ಜಿ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಮುನ್ನಡೆಸುವುದರ ಜೊತೆಗೆ ಗತ ವೈಭವದ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯನ್ನು ಪುನರಾರಂಭಿಸಿ, ರಾಜ್ಯದ ಉನ್ನತ ಶಾಲೆಯನ್ನಾಗಿ ರೂಪಿಸಲಾಗುವುದು. ನಾಡು – ನುಡಿ, ನೆಲ – ಜಲದ ಬಗೆಗೆ ಸದಾ ಜಾಗೃತವಾಗಿರುವ ಎಕ್ಸೆಲ್ ವಿದ್ಯಾ ಸಂಸ್ಥೆಗಳು ವಿಶ್ವ ವಿಖ್ಯಾತ ಹಸನ್ಮುಖಿ ಗೊಮ್ಮಟೇಶ್ವರ ನೆಲೆನಿಂತ ವೇಣೂರಿನಲ್ಲಿ ರಾಜ್ಯದ ಶ್ರೇಷ್ಠ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಸ್ಥಾಪಿಸಿ, ಪ್ರತಿಭಾವಂತರಿಗೆ ಉಚಿತ ಶಿಕ್ಷಣ ಕೊಡುವ ಇರಾದೆ ಹೊಂದಿದೆ ಎಂದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.