ಕರಾವಳಿ ಶಾಲೆ-ಕಾಲೇಜುಗಳಿಗೆ ಮುಂದುವರಿದ ರಜೆ!
– ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜಿಗೆ ರಜೆ
– ದಿನ ದಿನವೂ ಹೆಚ್ಚಾಗುತ್ತಿರುವ ಮಳೆ ಅಬ್ಬರ
– ಬರಲಾಗದ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್
NAMMUR EXPRESS NEWS
ಉಡುಪಿ/ ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜಿಲ್ಲೆಯಲ್ಲಿ ಬುಧವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಜಿಲ್ಲಾಧಿಕಾರಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ಕಳೆದ ಎರಡು ದಿನಗಳಿಂದಲೂ ಜಿಲ್ಲಾಡಳಿತ ರಜೆ ಘೋಷಿಸಿತ್ತು. ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಕಾಪು, ಕಾರ್ಕಳ, ಹೆಬ್ರಿ, ಬ್ರಹ್ಮಾವರ, ಉಡುಪಿ ತಾಲೂಕುಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 28ರ ವರೆಗೆ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಜಿಲ್ಲೆಯ ಜೀವನದಿಗಳು ತುಂಬಿ ಹರಿಯುತ್ತಿರುವುದರಿಂದಾಗಿ ಬಹುತೇಕ ಕಡೆಗಳಲ್ಲಿ ಕೃತಕ ನೆರೆ ಆವರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದೆ. ಮುನ್ನೆಚರಿಕಾ ಕ್ರಮವಾಗಿ ಬುಧವಾರ ಕೂಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜು, ಕಾಲೇಜು, ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಗ್ರಾಮೀಣ ಹಾಗೂ ದೂರದ ಊರುಗಳಿಂದ ಬರುವ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಅನಾನುಕೂಲವಾಗುವ ಸಂದರ್ಭದಲ್ಲಿ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಪಟ್ಟ ವಿದ್ಯಾರ್ಥಿಗಳು ಅವಕಾಶ ಕಲ್ಪಿಸಬೇಕು. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ.
ಇದನ್ನೂ ಓದಿ : ತೀರ್ಥಹಳ್ಳಿ ಹುಡುಗನ ಅನುಮಾನಾಸ್ಪದ ಸಾವು!
HOW TO APPLY : NEET-UG COUNSELLING 2023