ಕರಾವಳಿಯಲ್ಲಿ ಧರ್ಮಸ್ಥಳ ಪರ ಹೋರಾಟ!
– ಸೌಜನ್ಯ ತಾಯಿ ವಿರುದ್ಧ ಧಿಕ್ಕಾರ, ಹಲ್ಲೆಗೆ ಯತ್ನ?
– ರಾಜ್ಯದ ಮೂಲೆ ಮೂಲೆಯಿಂದ ಆಗಮಿಸುತ್ತಿರುವ ಭಕ್ತರು
NAMMUR EXPRESS NEWS
ಉಜಿರೆ: ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪರವಾಗಿ ಬೃಹತ್ ಹೋರಾಟ ಶುರುವಾಗಿದೆ.
ಪ್ರತಿಭಟನೆ ವೇಳೆ ಸ್ಥಳಕ್ಕಾಗಮಿಸಿದ ಸೌಜನ್ಯ ತಾಯಿಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ನಿರಪರಾಧಿ ಎಂದು ಸಿಬಿಐ ಕೋರ್ಟ್ನಿಂದ ವರದಿ ಬಂದ ಬೆನ್ನಲ್ಲೇ ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ ಬಂದಿದ್ದು, ಜಸ್ಟಿಸ್ ಫಾರ್ ಸೌಜನ್ಯ ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಮದ್ರ ಹೆಗ್ಗಡೆ ಕುಟುಂಬದ ವಿರುದ್ಧ ಅಪಪ್ರಚಾರಗಳು ಕೇಳಿ ಬರುತ್ತಿರುವ ಹಿನ್ನೆಲೆ ಶುಕ್ರವಾರ ಧರ್ಮಸ್ಥಳ ಪರವಾಗಿ ಉಜಿರೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನಾ ಸ್ಥಳಕ್ಕೆ ಜಸ್ಟೀಸ್ ಫಾರ್ ಸೌಜನ್ಯಾ ಭಿತ್ತಿಪತ್ರ ಹಿಡಿದು ಬಂದಿದ್ದ ಸೌಜನ್ಯಾ ತಾಯಿ ಮತ್ತು ಇತರ ಮಹಿಳೆಯರಿಗೆ ಮುತ್ತಿಗೆ ಹಾಕಿದ ಪ್ರತಿಭಟನಕಾರರು ವೇದಿಕೆ ಹತ್ತಲು ಬಿಡದೇ ದಿಕ್ಕಾರ ಘೋಷಣೆ ಕೂಗಿದ್ದಾರೆ. ಉಜಿರೆಯಲ್ಲಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಶ್ರೀ ಜನಾರ್ದನ ಸ್ವಾಮಿ ದೇವಾಲಯದ ಮುಂಭಾಗದ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನಾ ಸಮಾವೇಶಕ್ಕೆ ಭಕ್ತರು ಆಗಮಿಸಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೈಕಾರ ಕೂಗಿದ್ದಾರೆ.
ಇತ್ತ ಮರು ತನಿಖೆಗೆ ಕುಟುಂಬದ ಪಟ್ಟು
ಸೌಜನ್ಯ ಪರವಾಗಿ ಅವರು ಹೋರಾಟ ಮಾಡುತ್ತಿಲ್ಲ. ಇದೆಲ್ಲಾ ನೆಪವಷ್ಟೇ. ನನ್ನ ಮಗಳ ಹೆಸರನ್ನು ಬಳಸಿ ಹೋರಾಟ ಮಾಡುತ್ತಿದ್ದಾರೆ ಹೊರತು ನನ್ನ ಮಗಳ ಪರವಾಗಿ ಅಲ್ಲ. ನಾವು ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರುತನಿಖೆ ಆಗಲೇ ಬೇಕು. ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಆಗಬೇಕು ಎಂದುಸೌಜನ್ಯ ತಾಯಿ ಕುಸುಮಾವತಿ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ : ಯುವ ನಿಧಿ ಗ್ಯಾರಂಟಿ ಯೋಜನೆಗೆ ಯಾರು ಅರ್ಹರು?
HOW TO APPLY : NEET-UG COUNSELLING 2023