Categories
ಕರಾವಳಿ

ತೀವ್ರ ಮಳೆಯಿಂದ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗದೆ ವಿಮಾನಗಳು ಡೈವರ್ಟ್!

ತೀವ್ರ ಮಳೆಯಿಂದ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗದೆ ವಿಮಾನಗಳು ಡೈವರ್ಟ್!

– ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದ್ದ ಎರಡು ವಿಮಾನಗಳು ಬೆಂಗಳೂರಿಗೆ ವಾಪಾಸ್
– ಹಲವೆಡೆ ಮರ ಬಿದ್ದಂತೆ ಅನೇಕ ವಿದ್ಯುತ್ ಕಂಬಗಳಿಗೆ ಹಾನಿ

NAMMUR EXPRESS NEWS
ಮಂಗಳೂರು: ಕೆಲ ದಿನಗಳಿಂದ ಮಂಗಳೂರಿನಲ್ಲಿ ರಣ ಬಿಸಿಲಿನ ವಾತವರಣವಿತ್ತು. ಮಳೆಗಾಗಿ ಕರಾವಳಿಗರು ಪ್ರಾರ್ಥಿಸುತ್ತಿದ್ದರು. ಈ ನಡುವೆ, ನಗರದ ಹಲವೆಡೆ ಮಾ.12 ರಾತ್ರಿ ಏಕಾಏಕಿ ಮಳೆಯಾಗಿದೆ. ಇದರಿಂದಾಗಿ ಬೆಂದಿದ್ದ ಧರೆಯು ಹಾಗೆಯೇ ತಂಪಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯ ಅಬ್ಬರ ಜೋರಾಗಿಯೇ ಇತ್ತು. ಮಂಗಳೂರು ಬಜಪೆ ವಲಯದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದ್ದು, ಲ್ಯಾಂಡ್ ಮಾಡಲು ಸಾಧ್ಯವಾಗದ ಕಾರಣ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ವಿಮಾನಗಳನ್ನು ಕಳುಹಿಸಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದ್ದ ಎರಡು ವಿಮಾನಗಳನ್ನು ವಾಪಾಸ್ ಬೆಂಗಳೂರಿಗೆ ಹಿಂದಿರುಗಿಸಲಾಗಿದೆ. ಮಂಗಳೂರಿನ ಬಜ್ಪೆ, ಕಿನ್ನಿಪದವು ಬಳಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಅಷ್ಟು ಮಾತ್ರವಲ್ಲದೆ, ಹಲವೆಡೆ ಮರ ಬಿದ್ದಂತೆ ಅನೇಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.
ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ, ಕಡಬ ಭಾಗದಲ್ಲಿ ಮಳೆಯಾಗಿದೆ. ಬಿಸಿಲ ಬೇಗೆಯಿಂದ ತತ್ತರಿಸುತ್ತಿದ್ದ ಕರಾವಳಿಯ ಕೆಲವೆಡೆ ಮಳೆಯಾಗಿದೆ. ಭಾರಿ ತಾಪಮಾನದಿಂದ ಬಸವಳಿದಿದ್ದ ಜನರಿಗೆ ಮಳೆ ತಂಪೆರೆದಿದ್ದಾನೆ. ಕಡಬದಲ್ಲಿ ಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.