Categories
ಕರಾವಳಿ ಮಂಗಳೂರು

ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಭಾರೀ ನಿಂದನೆ!

ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಭಾರೀ ನಿಂದನೆ!
– ಆರೋಪಿ ಪೊಲೀಸ್ ವಶಕ್ಕೆ!
– ತನಿಖೆ ನಡೆಸುತ್ತಿರುವ ಸುರತ್ಕಲ್ ಪೊಲೀಸರು!

NAMMUR EXPRESS NEWS
ಮಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರನ್ನು ನಿಂದಿಸಿ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅಜ್ಜರಣಿ ನಿವಾಸಿ, ಸುರತ್ಕಲ್ ನಲ್ಲಿ ವಾಸವಾಗಿರುವ ಟೂರಿಸ್ಟ್ ಕಾರು ಚಾಲಕ ಅನಿಲ್ ಕುಮಾರ್ ಎಂದು ತಿಳಿದು ಬಂದಿದೆ. ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯುವ ಸಲುವಾಗಿ ತನ್ನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಲು ಯತ್ನಿಸಿದ್ದು ವಿವಿಧ ಸಮಸ್ಯೆಗಳಿಂದ ಕಳೆದ 3 ತಿಂಗಳಿಂದ ಸೇರಿಸಲು ಸಾಧ್ಯವಾಗಲಿಲ್ಲ. ಇದರಿಂದ ಕೋಪಗೊಂಡು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸುರತ್ಕಲ್ ಪೊಲೀಸರು ಆರೋಪಿ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.