15 ದಿನಗಳ ಬಳಿಕ ಮತ್ತೆ ಮಳೆ ಜೋರು!
– ಮಲೆನಾಡು, ಕರಾವಳಿ ಸೇರಿ ರಾಜ್ಯದಲ್ಲಿ ಮಳೆ
– ಬೆಳಿಗ್ಗೆಯಿಂದಲೇ ಶುರುವಾಗಿದೆ ವರುಣನ ಅಬ್ಬರ
NAMMUR EXPRESS NEWS
ಮತ್ತೆ ಮುಂಗಾರು ಚುರುಕುಗೊಂಡಿದ್ದು ಒಂದು ವಾರಗಳ ಕಾಲ ಹೆಚ್ಚು ಮಳೆ ಸಾಧ್ಯತೆ ಇದೆ ಎಂಬ ಹವಾಮಾನ ವರದಿಯಂತೆ ಎರಡು ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಮಲೆನಾಡು ಮತ್ತು ಕರಾವಳಿ ಭಾಗ ಸೇರಿ ರಾಜ್ಯದಲ್ಲಿ ಮಳೆಯ ಸೂಚನೆ ಕಂಡು ಬಂದಿದೆ. ಮಳೆಯ ಅಭಾವದಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಈಗ ಮತ್ತೆ ಮಳೆ ಶುರುವಾಗಿದೆ.
ಮುಂದಿನ ಒಂದು ವಾರಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಆಗಲಿದೆ.
ಆಣೆಕಟ್ಟು, ನದಿಗಳಲ್ಲಿ ನೀರು ಕಡಿಮೆ!
ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ಮತ್ತೆ ಆಣೆಕಟ್ಟು, ನದಿಗಳಲ್ಲಿ ನೀರಿನ ಪ್ರಮಾಣ ಕಡಿಮೆ ಆಗಿದೆ. ಆದ್ದರಿಂದ ರೈತರಿಗೆ ಆತಂಕ ಉಂಟಾಗಿದೆ. ಮಳೆ ಬಾರದಿದ್ರೆ ಉಚಿತ ವಿದ್ಯುತ್ ಯೋಜನೆ ಶಕ್ತಿಗೆ ಸಮಸ್ಯೆ ಆಗಲಿದೆ.