ಕರಾವಳಿಯಲ್ಲಿ ಭಾರೀ ಮಳೆ!
– ಬೆಳಿಗ್ಗೆಯಿಂದಲೇ ಹಲವೆಡೆ ಭಾರೀ ಮಳೆ
– ಆ. 27ರವರೆಗೆ ಮಳೆ ಸಾಧ್ಯತೆ
– ಕರಾವಳಿ ಜಿಲ್ಲೆಗಳ ಜನರೇ ಎಚ್ಚರ ಎಚ್ಚರ
NAMMUR EXPRESS NEWS
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ.
ಕಾರ್ಕಳ, ಹೆಬ್ರಿ, ಮೂಡಬಿದ್ರೆ, ಬೆಳ್ತಂಗಡಿ ಸೇರಿ ಅನೇಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಜುಲೈ ಮಧ್ಯದ ನಂತರ ಮಳೆ ಎಲ್ಲೆಡೆ ಕಾಣೆಯಾಗಿದ್ದು, ಇದೀಗ ಮತ್ತೆ ಮಳೆ ಶುರುವಾಗಿದೆ.
ಕರ್ನಾಟಕದ ಉಳಿದ ಜಿಲ್ಲೆಗಳು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆ.24ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಆ.27ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ.