ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!
– ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮ
– ಡಿ.3ರಂದು ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ
NAMMUR EXPRESS NEWS
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು,
02.12.2024ರ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 03.12.2024 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು(1-12ನೇ ತರಗತಿವರೆಗೆ) ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.