ಕರಾವಳಿ ಶಾಲೆ ಕಾಲೇಜುಗಳಿಗೆ ಜು.7ಕ್ಕೆ ರಜೆ!
– ಭಾರೀ ಮಳೆ: ಹಲವೆಡೆ ಅನಾಹುತ
– ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ರಜೆ
– ಕರಾವಳಿಗೆ ಪ್ರವಾಸಿಗರ ಸಂಖ್ಯೆ ಕಡಿಮೆ
ಉಡುಪಿ/ಮಂಗಳೂರು/ಕಾರವಾರ!: ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಲವು ಅವಾಂತರ ಸೃಷ್ಟಿ ಮಾಡಿದೆ.
ಕಟ್ಟಡಗಳು, ರಸ್ತೆ, ಧರೆ ಕುಸಿತ ಸಂಭವಿಸಿದೆ.
ನದಿ, ಹಳ್ಳ ಕೊಳ್ಳಗಳು ತುಂಬಿ ಅಪಾಯದ ಹಂತದಲ್ಲಿವೆ.
ಅತಿಯಾದ ಮಳೆ ಹಿನ್ನೆಲೆ ಉಡುಪಿ ಹಾಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ7 ರಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಉಡುಪಿ, ಮಂಗಳೂರು ನಗರದಲ್ಲಿ ಮಳೆ ಹಲವು ಅನಾಹುತ ಸೃಷ್ಟಿ ಮಾಡಿದೆ. ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ಉಡುಪಿ ನಗರ ಕೃಷ್ಣಮಠದ ಪಾರ್ಕಿಂಗ್ ಪ್ರದೇಶ ಸಂಪೂರ್ಣವಾಗಿ ಜಲಾವೃತವಾಗಿದೆ. ಕುಂದಾಪುರ, ಬೈಂದೂರು, ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೀಗ ಅಪಾಯದ ಸೂಚನೆ ಇದೆ. ಜನ ಎಚ್ಚರ ವಹಿಸಬೇಕಿದೆ.
ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..ಕಾಳು ಮೆಣಸು ದರ ಎಷ್ಟು?
HOW TO APPLY : NEET-UG COUNSELLING 2023