ಕರಾವಳಿಯ ಎರಡು ಜಿಲ್ಲೆಯಲ್ಲಿ ಸ್ವಾತಂತ್ರ್ಯದ ಹಬ್ಬ!
– ಉಡುಪಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಧ್ವಜಾರೋಹಣ
– ಮಂಗಳೂರಲ್ಲಿ ದಿನೇಶ್ ಗುಂಡೂರಾವ್ ಧ್ವಜ ವಂದನೆ
NAMMUR EXPRESS NEWS
ಸ್ವಾತಂತ್ರ ದಿನವನ್ನು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಸಂಭ್ರಮ ಸಡಗರದಿಂದ ಜನತೆ ಆಚರಣೆ ಮಾಡಿದರು. ಹಳ್ಳಿ ಹಳ್ಳಿಯಲ್ಲೂ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಕಂಡು ಬರುತ್ತಿದೆ. ವಿವಿಧ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪ್ರತಿ ಮನೆ ಮನೆಯಲ್ಲೂ ಹರ್ ಘರ್ ತಿರಂಗಾ ಹಾರಿಸಲಾಯಿತು.
ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಜಿಲ್ಲಾಧಿಕಾರಿಗಳು, ತಹಸೀಲ್ದಾರ್, ಆಯಾ ಕ್ಷೇತ್ರದ ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಹಾಜರಿದ್ದರು.
ಉಡುಪಿಯಲ್ಲಿ ಸ್ವಾತಂತ್ರ್ಯದ ಸಂಭ್ರಮ
ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ವಾತಂತ್ರೋತ್ಸವದ ಸಂದೇಶ ನೀಡಿದರು. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಪಥ ಸಂಚಲನ ಆಕರ್ಷಕವಾಗಿತ್ತು. ಸರ್ಕಾರದ ಯೋಜನೆಗಳಡಿ ಪಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು. ಸ್ಥಳೀಯ ಶಾಸಕರು, ಅಧಿಕಾರಿಗಳು, ಇದ್ದರು.
ದಕ್ಷಿಣ ಕನ್ನಡದಲ್ಲಿ ಸ್ವಾತಂತ್ರ್ಯ ದಿನದ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುತ್ತೈ ಮುಗಿಲನ್ ಎಂ.ಪಿ. ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಕಂಡ್, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಅಧಿಕಾರಿಗಳು ಹಾಗೂ ಇತರ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಸೌಹಾರ್ದ ಕೆಡಿಸುವ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದ ಕೆಡಿಸುವ ವಿಚ್ಚಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತಿದೆ. ಮತೀಯ ಗೂಂಡಾಗಿರಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಕಡಿವಾಣ ಹಾಕುವ ಮೂಲಕ ಸಮಾಜದಲ್ಲಿ ಸಾಮರಸ್ಯದ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
‘ರಾಷ್ಟ್ರೀಯ ವಿಪತ್ತು ಉಪಶಮನ ನಿಧಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಐದು ಜಿಲ್ಲೆಗಳಲ್ಲಿ ಭೂಕುಸಿತ ಹಾಗೂ ನೆರ ಅಪಾಯ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು’ ಎಂದರು. ‘ಸಸಿಹಿತ್ತು ಕಿನಾರೆಯನ್ನು ಅಂತರರಾಷ್ಟ್ರೀಯ ಸರ್ಫಿಂಗ್ ತಾಣವನ್ನಾಗಿಸುವುದಕ್ಕಾಗಿ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಕರಾವಳಿಯ ಕಿನಾರ ಪ್ರವಾಸೋದ್ಯಮ ಅಭಿವೃದ್ಧಿಗೆ ಕಾರ್ಯಪಡೆ ರಚಿಸಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇಳು ಸಂಕೀರ್ಣದ ಬಾಕಿ ಕಾಮಗಾರಿಗಳನ್ನು ಈ ವರ್ಷವೇ ಪೂರ್ಣಗೊಳಿಸಿ, ಎಲ್ಲಾ ಸರ್ಕಾರಿ ಸೇವೆಗಳನ್ನು ಒಂದೇ ಸೂರಿನಲ್ಲಿ ಒದಗಿಸಲಾಗುವುದು’ ಎಂದರು. ‘ರಾಜ್ಯದ ಪವಿತ್ರ ತೀರ್ಥಕ್ಷೇತ್ರವಾದ ಧರ್ಮಸ್ಥಳದಲ್ಲಿ ಪುಟ್ಟ ವಿಮಾನ ನಿಲ್ದಾಣ ( ಏರ್ ಸ್ಟ್ರಿಪ್) ನಿರ್ಮಿಸಲಿದ್ದೇವೆ’ ಎಂದರು.
ಇದನ್ನೂ ಓದಿ : ತೀರ್ಥಹಳ್ಳಿ ರೆಸಾರ್ಟ್ ಅಲ್ಲಿ ಸಿಕ್ತು ವಿದೇಶಿ ಮದ್ಯ, ಪ್ರಾಣಿಗಳ ಕೊಂಬು!
HOW TO APPLY : NEET-UG COUNSELLING 2023