ಜ. 11ಕ್ಕೆ ಲವ-ಕುಶ ಜೋಡುಕರೆ ನರಿಂಗಾನ ಕಂಬಳೋತ್ಸವ!
– ವಿಶೇಷ ಆಕರ್ಷಣೆಯಾಗಿ ಸಿಎಂ ಸಿದ್ದರಾಮಯ್ಯ ಅವರ ಆಗಮನ!
– ಜ. 13ಕ್ಕೆ ನಾನಾ ಸ್ಪರ್ಧೆಗಳ ಸಹಿತ ನರಿಂಗಾನ ಗ್ರಾಮೋತ್ಸವ
NAMMUR EXPRESS NEWS
ಮಂಗಳೂರು: ವಿಧಾನಸಭಾ ಸ್ಪೀಕರ್, ಶಾಸಕ ಯು.ಟಿ.ಖಾದರ್ ನೇತೃತ್ವದ ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಸಹಕಾರದಲ್ಲಿ ನರಿಂಗಾನ ಗ್ರಾಮದ ಮೋರ್ಲ-ಬೋಳದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ನರಿಂಗಾನ ಕಂಬಳೋತ್ಸವ ಜ.11ರಂದು ಬೆಳಗ್ಗೆ 8.30ರಿಂದ ಆಯೋಜಿಸಲಾಗಿದೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ಸಿಎಂ ಸಿದ್ದರಾಮಯ್ಯ ಅವರು ಸಂಜೆ 4.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸ್ಪರ್ಧಾ ಕೂಟದಲ್ಲಿ ಭಾಗವಹಿಸಿದ ಕೋಣದ ಯಜಮಾನರಿಗೆ ಬೆಳ್ಳಿಯ ಪದಕ ಹಾಗೂ ಟ್ರೋಫಿ ಕೊಟ್ಟು ಗೌರವಿಸಲಾಗುವುದು. ವಿಜೇತ ಕೋಣಗಳನ್ನು ಓಡಿಸಿದ ಓಟಗಾರರಿಗೆ ಪ್ರಶಸ್ತಿ ಪತ್ರದೊಂದಿಗೆ ಬಹುಮಾನ ನೀಡಿ ಗೌರವಿಸಲಾಗುವುದು ಎಂದರು.
– ಜ. 13ಕ್ಕೆ ನಾನಾ ಸ್ಪರ್ಧೆಗಳ ಸಹಿತ ನರಿಂಗಾನ ಗ್ರಾಮೋತ್ಸವ
ಜ.13ರಂದು ಸ್ನೇಹ ಸಮ್ಮಿಲನ, ಪ್ರತಿಭಾ ಪುರಸ್ಕಾರ, ಜಿಲ್ಲೆಯ ಪ್ರಸಿದ್ದ ಕಲಾವಿದರಿಂದ ನತ್ಯ ವೈಭವ, ನಾನಾ ಸ್ಪರ್ಧೆಗಳ ಸಹಿತ ನರಿಂಗಾನ ಗ್ರಾಮೋತ್ಸವ ನಡೆಯಲಿದೆ.
ತುಳುವಿಗೆ 2ನೇ ಸ್ಥಾನ ಸಿಎಂ ಸಂವಾದ ತುಳು ಭಾಷೆಗೆ ರಾಜ್ಯದ ಎರಡನೇ ಭಾಷೆ ಸ್ಥಾನ ನೀಡುವ ಕುರಿತು ಎಲ್ಲ ವರದಿ ತರಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ಕರಾವಳಿಯ ಸಾಹಿತಿ, ಕಲಾವಿದರ ಜತೆ ಶೀಘ್ರ ಸಂವಾದ ಏರ್ಪಡಿಸಲಾಗುವುದು. ಉಳ್ಳಾಲ ಕ್ಷೇತ್ರ ಒಂದು ಸಾವಿರ ಕೋಟಿಯ ನಾನಾ ಯೋಜನೆಗಳ ಶಿಲಾನ್ಯಾಸ ಸಂದರ್ಭದಲ್ಲಿ ಸಿಎಂ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.