ಉಡುಪಿ ಜಿಲ್ಲೆಯಾದ್ಯಂತ ಜು. 6ಕ್ಕೆ ಶಾಲಾ-ಕಾಲೇಜುಗಳಿಗೆ ರಜೆ
– ಭಾರೀ ಮಳೆ ಹಿನ್ನೆಲೆ: ಶಾಲೆ, ಜಿಲ್ಲಾಡಳಿತ ಘೋಷಣೆ
– ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ
NAMMUR EXPRESS NEWS
ಉಡುಪಿ: ಕರಾವಳಿಯಲ್ಲಿ ಮಳೆಯ ಆರ್ಭಟ ಜೋರಾಗಿರುವ ಹಿನ್ನಲೆಯಲ್ಲಿ ನಾಳೆ(ಜು.6ರಂದು) ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ. ಈ ಮೊದಲು ಕುಂದಾಪುರ ಹಾಗೂ ಬ್ರಹ್ಮಾವರ ಎರಡು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿತ್ತು. ಆದರೆ, ಶನಿವಾರ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಭಾರೀ ಮಳೆಯ ಮುನ್ಸೂಚನೆಯಿರುವ ಕಾರಣ ಉಡುಪಿಯ ಎಲ್ಲ ತಾಲೂಕುಗಳಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜುಗಳವರೆಗೆ ಇದೀಗ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಡಳಿತದಿಂದ ಆದೇಶ ಹೊರಡಿಸಲಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು. 06 ರಂದು ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಹೊರಡಿಸಿದ್ದಾರೆ.
ಎಲ್ಲಾ ಸುದ್ದಿಗಳಿಗಾಗಿ nammurexpress.in ವೀಕ್ಷಿಸಿ.