ಕರಾವಳಿ ಟಾಪ್ ನ್ಯೂಸ್
– ಕಡಬ: ಬಾಲಕಿ ಜೊತೆ ಲವ್ವಿ ಡವ್ವಿ ಕೊನೆಗೆ ಅತ್ಯಾಚಾರ!
– ದೈಹಿಕ ಸಂಪರ್ಕ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ಮೇಲ್!
– ಕುಕ್ಕುಂದೂರಿನಲ್ಲಿ ಬಸ್ಗೆ ಆಂಬ್ಯುಲೆನ್ಸ್ ಡಿಕ್ಕಿ: ವಾಹನಗಳು ಜಖಂ!
– ಕಾಪು: ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ, ಕಾರಣ?
NAMMUR EXPRESS NEWS
ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜೊತೆಗೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಆತ ಬಾಲಕಿ ಜೊತೆಗೆ ಸುತ್ತಾಟ ನಡೆಸಿ ವಿಶ್ವಾಸಗಳಿಸಿದ್ದಾನೆ. ನಂತರ ಆತ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಕೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದುಕೊಟ್ಟಿದ್ದ. ಅದರ ಜತೆಗೆ ಖಾಸಗಿ ಕ್ಷಣದ ವೀಡಿಯೋಗಳನ್ನು ತನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಯುವಕ ಬೇರೆ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಆ ವಿಷಯವನ್ನು ಮುಚ್ಚಿಟ್ಟು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾಗಿ ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ದೂರು ಸ್ವೀಕರಿಸಿದ ಕಡಬ ಪೊಲೀಸರು ಸುಳ್ಯದಲ್ಲಿದ್ದ ಯುವಕನನ್ನು ಬಂಧಿಸಿ ಆತನ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
– ಕುಕ್ಕುಂದೂರಿನಲ್ಲಿ ಬಸ್ಗೆ ಆಂಬ್ಯುಲೆನ್ಸ್ ಡಿಕ್ಕಿ: ವಾಹನಗಳು ಜಖಂ!
ಕಾರ್ಕಳ: ಬಸ್ಗೆ ಆಂಬ್ಯುಲೆನ್ಸ್ ಡಿಕ್ಕಿಯಾಗಿ ವಾಹನಗಳೆರಡು ಜಖಂಗೊಂಡ ಘಟನೆ ಜ. 2ರಂದು ಕುಕ್ಕುಂದೂರು ಗ್ರಾಮದಲ್ಲಿ ಸಂಭವಿಸಿದೆ.
ಬಸ್ನ್ನು ಚಾಲಕ ಕುಕ್ಕುಂದೂರು ಗ್ರಾಮದ ದುರ್ಗಾ ಹೈಸ್ಕೂಲ್ ಗ್ಯಾರೇಜ್ ನಿಲ್ದಾಣದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಮುಂದಕ್ಕೆ ತೆರಳುತ್ತಿರುವಾಗ ಅಜೆಕಾರು ಕಡೆಯಿಂದ ಬರುತ್ತಿದ್ದ ಆಂಬ್ಯುಲೆನ್ಸ್ ವಾಹನ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮವಾಗಿ ಬಸ್ನ ಬಲಬದಿ ಹಾಗೂ ಎದುರುಗಡೆಯ ಚಾಲಕನ ಬಾಗಿಲು ಹಾಗೂ ಬಂಪರ್ ಜಖಂಗೊಂಡಿದ್ದು, ಆಂಬ್ಯುಲೆನ್ಸ್ ವಾಹನ ಸಂಪೂರ್ಣ ಜಖಂಗೊಂಡಿರುತ್ತದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
– ಕಾಪು: ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ, ಕಾರಣ?
ಕಾಪು: ಉಡುಪಿ ಕಲ್ಸಂಕ ಆಟೋ ರಿಕ್ಷಾ ನಿಲ್ದಾಣದಲ್ಲಿ ರಾತ್ರಿ ಪಾಳಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದ ರಿಕ್ಷಾ ಚಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಳ್ಳಿಗುಡ್ಡೆ ಕೋಟೆ ನಿವಾಸಿ ದೀಪಕ್ ಆರ್. (34) ಆತ್ಮಹತ್ಯೆಗೆ ಶರಣಾದ ರಿಕ್ಷಾ ಚಾಲಕ. ಅವಿವಾಹಿತನಾಗಿರುವ ದೀಪಕ್ ಆರ್ ಮದ್ಯ ಸೇವನೆ ಚಟವನ್ನು ಹೊಂದಿದ್ದು, ಜ. 1ರಂದು ರಾತ್ರಿ ಪಾಳಯದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಕೋಣೆಯಲ್ಲಿ ಮಲಗಿದ್ದರು. ಸಂಜೆ ತಾಯಿ ಕೋಣೆಗೆ ಹೋಗಿ ನೋಡಿದಾಗ ಒಳಗಿನಿಂದ ಬಾಗಿಲನ್ನು ಲಾಕ್ ಮಾಡಲಾಗಿತ್ತು. ಬಳಿಕ ನೆರೆಹೊರೆಯವರು ಸೇರಿ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ದೀಪಕ್ ಕೋಣೆಯಲ್ಲಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.