– ಅಮಲು ಪದಾರ್ಥ ಸೇವಿಸಿ ಅನುಚಿತ ವರ್ತನೆ: ಅರೆಸ್ಟ್
– ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ
– ಬ್ಯಾಟರಿ ಕಳ್ಳರ ಹಿಡಿದ ಮಾಡಿದ ಬಜಪೆ ಪೊಲೀಸರು
– ಕಾರ್ಕಳ : ಗಾಂಜಾ ಸೇವೆನೆ ನಾಲ್ವರ ಬಂಧನ
– ಕಾರವಾರದಲ್ಲಿ ತಪ್ಪಿದ ಬಾರಿ ಅನಾಹುತ
NAMMUR EXPRESS NEWS
ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬೆಳ್ತಂಗಡಿ ಇಳಂತಿಲ ಗ್ರಾಮದ ನಿವಾಸಿ ಮಹಮ್ಮದ್ ಶಾಫಿ(30) ಎನ್ನಲಾಗಿದೆ.ಉಪ್ಪಿನಂಗಡಿ ಸಿ ಎ ಬ್ಯಾಂಕ್ ಬಳಿ ಆರೋಪಿ ಮಹಮ್ಮದ್ ಶಾಫಿ ಅಮಲು ಪದಾರ್ಥ ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿದ್ದ. ಉಪ್ಪಿನಂಗಡಿ ಪೊಲೀಸರು ವಿಚಾರಿಸಿದಾಗ ಮಾದಕದ್ರವ್ಯ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದು, ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಬಂಧಿತ ವ್ಯಕ್ತಿಯಿಂದ ಅಂದಾಜು 5,000/-ಮೌಲ್ಯದ ಮೊಬೈಲ್ನನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಸ್ತೆ ಬದಿಯಲ್ಲೇ ಎಣ್ಣೆ ಮಾರಾಟ: ಬಂಧನ
ರಸ್ತೆ ಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನೆಟ್ಟ ಮುನ್ನೂರು ಗ್ರಾಮದ ಗಣೇಶ್ ನಗರ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಬಂಟ್ವಾಳ ಮುಡೂರು ಗ್ರಾಮದ ನಿವಾಸಿ ಶಶಿಧರ ಶೆಟ್ಟಿ ಎನ್ನಲಾಗಿದೆ. ಆರೋಪಿಯಿಂದ ಅಂದಾಜು ರೂ. 1,516.21/- ಮೌಲ್ಯದ ವಿವಿಧ ಕಂಪೆನಿಯ ಒಟ್ಟು ಪ್ರಮಾಣ 2.880 ಲೀಟರ್ ಅಕ್ರಮ ಮದ್ಯದ ಸ್ಯಾಚೆಟ್ ಗಳು ಹಾಗೂ ಮದ್ಯ ಮಾರಾಟದಿಂದ ಬಂದ ರೂಪಾಯಿ 550/- ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯು ಅನಂತಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿಎಂಬಲ್ಲಿರುವ ಮದಿರಾ ವೈನ್ ಶಾಪ್ನಿಂದ ಮದ್ಯವನ್ನು ಖರೀದಿಸಿ ಹೆಚ್ಚಿನ ಬೆಲೆ ಮಾರಾಟ ಮಾಡುವುದಾಗಿ ಒಪ್ಪಿಕೊಂಡಿದ್ದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಯಾಟರಿ ಕಳ್ಳತನ ಮಾಡುತಿದ್ದ ಕುಖ್ಯಾತ ಕಳ್ಳರ ಬಂಧನ
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡೂರು, ಕೈಕಂಬ ಮತ್ತು ಗುರುಪುರ ಭಾಗದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಲಾರಿ, ಜೆ.ಸಿ.ಬಿ ಮತ್ತು ಇತರ ವಾಹನಗಳಿಂದ ಬ್ಯಾಟರಿಗಳನ್ನು ಕದ್ದವರು ಈಗ ಸಿಕ್ಕಿ ಬಿದ್ದಿದ್ದಾರೆ. ಬಜಪೆ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಈ ಪ್ರಕರಣಗಳಲ್ಲಿ ತನಿಖೆ ನಡೆಸಿದ ಬಜಪೆ ಪೊಲೀಸ್ ನಿರೀಕ್ಷಕರಾದ ಪ್ರಕಾಶ ರವರ ತಂಡ ದಿನಾಂಕ 08-08-2023 ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದ ಕಲ ಎಂಬಲ್ಲಿ ಬ್ಯಾಟರಿಗಳನ್ನು ಕಳವು ಮಾಡಿಕೊಂಡು ಕಾರಿನಲ್ಲಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಗಳಿಂದ ಸರಿ-ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಒಂದು ಕಾರು ಮತ್ತು 1.50 ಲಕ್ಷ ರೂಪಾಯಿ ಮೌಲ್ಯದ ಒಟ್ಟು 17 ಅಮ್ರಾನ್ ಬ್ಯಾಟರಿಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಗಾಂಜಾ ಸೇವನೆ: ನಾಲ್ವರು ಪೊಲೀಸರ ವಶ
ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಹೆಬ್ರಿಯಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆಯ ಕಂಬಳ ನಡೆಯುವ ಸ್ಥಳದ ಬಳಿ ಗಾಂಜಾವನ್ನು ಪೇಪರ್ನಲ್ಲಿ ಸೇರಿಸಿ ಸಿಗರೇಟ್ನಂತೆ ರೋಲ್ ಮಾಡಿ ಸೇದುತ್ತಿದ್ದ ನೆಲ್ಲಿಗುಡ್ಡೆ ಅಡ್ಡರಸ್ತೆಯ ವೇಲುಮುರುಗನ್ ಎಂಬಾತನನ್ನು ಆ. 6ರಂದು ಕಾರ್ಕಳ ನಗರ ಪೊಲೀಸ್ ಪಿಎಸ್ಐ ಸಂದೀಪ್ ಕುಮಾರ್ ಶೆಟ್ಟಿ ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಈತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಕಸಬಾ ಗ್ರಾಮದ ಚತುರ್ಮುಖ ಬಸದಿ ಬಳಿ ಮಾದಕ ವಸ್ತುವನ್ನು ಸುರುಳಿ ಸುತ್ತಿ ಸಿಗರೆಟಿನಂತೆ ಸೇವಿಸುತ್ತಿದ್ದ ವ್ಯಕ್ತಿಯನ್ನು ಆ.7 ರಂದು ಸಂದೀಪ್ಕುಮಾರ್ ಶೆಟ್ಟಿ ಬಂಧಿಸಿದ್ದು, ಆರೋಪಿ ಗಾಂಜಾ ಸೇವಿಸಿದ್ದು ವೈದ್ಯಕೀಯ ಪರೀಕ್ಷೆಯಲ್ಲಿದೃಢಪಟ್ಟಿದೆ. ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಕಸಬಾ ಗ್ರಾಮದ ಆನೆಕೆರೆ ಬಳಿ ಮಂಗಳವಾರ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿಯನ್ನು ಪಿಎಸ್ಐ ಸಂದೀಪ್ ಕುಮಾರ್ ಶೆಟ್ಟಿ ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಆರೋಪಿ ಗಿರೀಶ ಎಂಬಾತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.7 ರಂದು ಖಚಿತ ಮಾಹಿತಿ ಆಧಾರದ ಮೇರೆಗೆ ಹೆಬ್ರಿ ಪೊಲೀಸ್ ಠಾಣೆಯ ಪೊಲಿಸ್ ಉಪನಿರೀಕ್ಷಕ ಸುದರ್ಶನ ದೊಡಮನಿ ದಾಳಿ ನಡೆಸಿ ಬಚ್ಚಪ್ಪು ನಿಲ್ದಾಣದ ಬಳಿ ಗಾಂಜಾ ಸೇವಿಸುತ್ತಿದ್ದ ನಿತೇಶ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆತನನ್ನು ವೈದಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಖಚಿತಗೊಂಡಿರುತ್ತದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೌಕಾನೆಲೆಯಲ್ಲಿ ಬೋಟ್ ಇಂಜಿನ್ಗೆ ಬೆಂಕಿ: ತಪ್ಪಿದ ಅನಾಹುತ
ಬೋಟ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾದ ಘಟನೆ ಕಾರವಾರದ ಕದಂಬ ನೌಕಾನೆಲೆಯಲ್ಲಿ ನಡೆದಿದೆ. ಕಾರವಾರದ ನೌಕಾನೆಲೆಯಲ್ಲಿ ಹಡಗುಗಳನ್ನು ಡಾಕ್ ಯಾರ್ಡ್ ಗೆ ಎಳೆದು ತರುವ ತೇಜ್ ಹೆಸರಿನ ಟಗ್ ಬೋಟ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸಮುದ್ರದಿಂದ ಯುದ್ಧದ ಹಡಗನ್ನು ರಿಪೇರಿಗಾಗಿ ಎಳೆದು ತರಲು ತೆರಳಿದ್ದಾಗ ಬೋಟ್ ಇಂಜಿನ್ನಲ್ಲಿ ಸಮಸ್ಯೆ ಉಂಟಾಗಿದೆ. ಇದರಿಂದ ಇಂಜಿನ್ಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಬೋಟ್ನ ಒಳಭಾಗದ ಇಂಜಿನ್ ಸಂಪೂರ್ಣ ಸುಟ್ಟು ಹೋಗಿದೆ. ಇದರಿಂದಾಗಿ ನೌಕಾ ನೆಲೆಯ ಡಾಕ್ ಯಾರ್ಡ್ನಲ್ಲಿ ಬಾರೀ ಹೊಗೆ ಆವರಿಸಿಕೊಂಡು ಕೆಲ ಕಾಲ ಜನರಲ್ಲಿ ಆತಂಕ ಮನೆ ಮಾಡಿತ್ತು. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಗಿದೆ. ಬಳಿಕ ನೌಕಾ ದಳದ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೋಟ್ನಲ್ಲಿದ್ದ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಭೂತಾನ್ ಅಡಿಕೆ ಬಂದ್ರೂ ತೊಂದರೆ ಇಲ್ಲ- ಆರಗ ಜ್ಞಾನೇಂದ್ರ
HOW TO APPLY : NEET-UG COUNSELLING 2023