Categories
ಕರಾವಳಿ

ಕರಾವಳಿ ಟಾಪ್ ನ್ಯೂಸ್

ಕರಾವಳಿ ಟಾಪ್ ನ್ಯೂಸ್
– ಕೊಲ್ಲೂರು: ಯುವತಿ ರೇಪ್, ಓರ್ವ ಅರೆಸ್ಟ್!
– ಕಡಬ: ಸಿಡಿಲಿಗೆ ಓರ್ವ ಸಾವು; ಇಬ್ಬರು ಗಂಭೀರ!
– ಕಾಸರಗೋಡು: ಸರ ಕದ್ದ ಉಲ್ಲಾಳದ ವ್ಯಕ್ತಿ ಬಂಧನ

NAMMUR EXPRESS NEWS
ಬೈಂದೂರು: ಯುವತಿಯೊಬ್ಬಳ ಮೇಲೆ ಕಾಮುಕನೊಬ್ಬ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕೊಲ್ಲೂರಿನಲ್ಲಿ ನಡೆದಿದೆ. ಉಡುಪಿ ಸಮೀಪದ ಮಂಜುನಾಥ್‌(24) ಬಂಧಿತ ಆರೋಪಿಯಾಗಿದ್ದಾನೆ. ಈ ಸಂಬಂಧ ಸಂತ್ರಸ್ತ ಯುವತಿಯೇ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೋರ್ಟಗೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಮಂಜುನಾಥ್‌ಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯು ಆಕೆಯ ಮೇಲೆ ಅತ್ಯಾಚಾರ ನಡೆಸುವ ಜತೆಗೆ ಆ ಕುರಿತ ಫೋಟೊಗಳನ್ನು ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಮಾನ ಹಾನಿಗೆ ಯತ್ನಿಸಿರುವುದಾಗಿಯೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಡಬದಲ್ಲಿ ಸಿಡಿಲು ಬಡಿದು ಓರ್ವ ಸಾವು!

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಇಲ್ಲಿನ ಇಚಿಲಂಪಾಡಿ ಎಂಬಲ್ಲಿ ಶನಿವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಇಚಿಲಂಪಾಡಿಯ ಕುರಿಯಾಳ ಕೊಪ್ಪ ಎಂಬಲ್ಲಿ ನದಿಯಲ್ಲಿ ಮರಳು ತೆಗೆದು ಶೆಡ್ ನಲ್ಲಿ ಮೂವರು ಕುಳಿತಿದ್ದ ವೇಳೆ ಸಿಡಿಲು ಬಡಿದಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಾಸರಗೋಡಿನಲ್ಲಿ ಸರಗಳ್ಳತನ: ಉಳ್ಳಾಲ ವ್ಯಕ್ತಿಯ ಬಂಧನ

ಕಾಸರಗೋಡು: ಪೈವಳಿಕೆಯಲ್ಲಿನ ಕಟ್ಟದ ಮನೆಯ ಕೃಷಿಕರಾದ ಗೋಪಾಲಕೃಷ್ಣ ಭಟ್ ಅವರ ಕುತ್ತಿಗೆಯಿಂದ ಹಾಡಹಗಲೇ ಎರಡೂವರೆ ಪವನ್ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲತಃ ಉಳ್ಳಾಲದ ಹಾಗೂ ಪ್ರಸ್ತುತ ಬದಿಯಡ್ಕ ನೆಲ್ಲಿಕಟ್ಟೆ ಚೆನ್ನಡ್ಕ ಮುಹಮ್ಮದ್ ಸುಹೈಲ್ (32) ಎಂದು ಗುರುತಿಸಲಾಗಿದೆ. ದರೋಡೆ, ಲೂಟಿ ಸೇರಿದಂತೆ 20ಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿರುವ ಈತನನ್ನು ವಯನಾಡಿನಲ್ಲಿ ಬಂಧಿಸಲಾಗಿದೆ. ಈತನ ಜತೆಗಿದ್ದ ಇನ್ನೋರ್ವ ತಲೆಮರೆಸಿಕೊಂಡಿದ್ದಾನೆ.

ಏ.23ರಂದು ಬೆಳಿಗ್ಗೆ ತೋಟಕ್ಕೆ ತೆರಳುತ್ತಿದ್ದ ಗೋಪಾಲಕೃಷ್ಣ ಭಟ್ ಅವರ ಕುತ್ತಿಗೆಯಿಂದ ಸರವನ್ನು ಬೈಕ್ ನಲ್ಲಿ ಬಂದಿದ್ದ ಸುಹೈಲ್ ತನ್ನ ಸಹಚರನ ಜತೆ ಕಿತ್ತು ಪರಾರಿಯಾಗಿದ್ದರು. ಈ ಬಗ್ಗೆ ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸಿಸಿಟಿವಿ ದೃಶ್ಯ ಕಲೆಹಾಕಿದ್ದ ಪೊಲೀಸರು ಆರೋಪಿಗಳಿಗಾಗಿ ತನಿಖೆ ನಡೆಸಿದ್ದರು. ಈ ನಡುವೆ ವಯನಾಡಿನ ಕೋಳಿ ಮಾಂಸ ಮಾರಾಟ ಮಳಿಗೆಯಲ್ಲಿ ಈತ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.