ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಆಸ್ಪತ್ರೆ ಎದುರು ಧರಣಿ
– ಮಗ ಆತ್ಮಹತ್ಯೆ; ಮನನೊಂದ ತಂದೆಯೂ ಆತ್ಮಹತ್ಯೆ
– ಮೂಡಬಿದರೆ: ಒಮಿನಿ ಗ್ಯಾಸ್ ಟ್ಯಾಂಕರ್ ಅಲ್ಲಿ ಬೆಂಕಿ
– ಮಂಗಳೂರು: ಮಾದಕ ವಸ್ತು ಮಾರಾಟಗಾರರ ಸೆರೆ
– ಬೈಂದೂರು: ಕೆಲಸಕ್ಕೆ ಬಂದ ಯುವತಿ ನಾಪತ್ತೆ!
NAMMUR EXPRESS NEWS
ಪುತ್ತೂರು: ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಮೃತಪಟ್ಟಿರುವುದಾಗಿ ಆರೋಪ. ಮಾಡಿ ಶವವಿಟ್ಟು ಆಸ್ಪತ್ರೆ ಮುಂಭಾಗ ಧರಣಿ ನಡೆಸಿದ ಘಟನೆ ನಡೆದಿದೆ. ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ ಆಸ್ಪತ್ರೆ ಮುಂಭಾಗ ಶವವಿಟ್ಟು ಪ್ರತಿಭಟನೆಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕನನ್ನು ಕೊನೆಯುಸಿರೆಳೆದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಪೋಷಕರು, ಕುಟುಂಬಸ್ಥರು
ಪುತ್ತೂರಿನ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರ ನೇತೃತ್ವದಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆ ಎದುರು ಧರಣಿ ನಡೆಸಿದರು ಮೃತರನ್ನು ಸುಳ್ಯದ ಕಸಬಾ ಗ್ರಾಮದ ಶ್ರೀಜಿತ್ (17) ಎಂದು ಗುರುತಿಸಲಾಗಿದೆ. ಆ.14ರಂದು ನಡೆದ ಬಾಲಕನ ಸಾವಿಗೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಲಿಸುತ್ತಿದ್ದ ಓಮ್ನಿ ಕಾರಿನ ಗ್ಯಾಸ್ ಟ್ಯಾಂಕ್ ಸ್ಫೋಟ!
ಮೂಡುಬಿದಿರೆ ತಾಲೂಕು ಹಂಡೇಲು ಬಳಿಯಲ್ಲಿ ಚಲಿಸುತ್ತಿದ್ದ ಕಾರಿನ ಗ್ಯಾಸ್ ಟ್ಯಾಂಕ್ ಸ್ಫೋಟಗೊಂಡು, ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರಲ್ಲಿ ಮಾದಕ ವಸ್ತು ಮಾರಾಟಗಾರರ ಸೆರೆ
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಅವರಿಂದ ಸುಮಾರು 15 ಲ.ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದಾರೆ. ನಾಲ್ವರನ್ನು ಬಂಧಿಸಿದ ಪೊಲೀಸರು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ.
ಬೆಂಗಳೂರಿನಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿಕೊಂಡು ತಂದು ಮಂಗಳೂರು ನಗರದ ಉತ್ತರ ಠಾಣಾ ವ್ಯಾಪ್ತಿಯ ಫಳೀರ್ ಪರಿಸರದಲ್ಲಿ ಕಾರಿನಲ್ಲಿ ಮೂವರು ವ್ಯಕ್ತಿಗಳು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾದಕ ವಸ್ತುವನ್ನು ಸಹಿತ ಇತರ ಸೊತ್ತುಗಳೊಂದಿಗೆ ನಾಲ್ವರನ್ನು ಬಂಧಿಸಿದ್ದಾರೆ.
ಮೊದಲ ಪ್ರಕರಣದಲ್ಲಿ 100 ಗ್ರಾಂ ತೂಕದ ರೂ. 5,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು ನಗದು ರೂ. 4000, ಕಾರು-1, ಮೊಬೈಲ್ ಫೋನುಗಳು-3, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 10,94,500 ರೂ.ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ನಾಪತ್ತೆ : ತಂದೆಯಿಂದ ದೂರು
ಉದ್ಯೋಗಕ್ಕೆಂದು ಮಂಗಳೂರಿಗೆ ಬಂದಿದ್ದ ಯುವತಿ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೊನ್ನಾವರದ ಸೋನಿಯಾ ರೋಡ್ರಿಗಸ್ (23) ನಾಪತ್ತೆಯಾಗಿರುವ ಯುವತಿಯಾಗಿದ್ದಾಳೆ.ಈಕೆ ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದು, ಸೋನಿಯಾ ಬೆಂದೂರಿನ ಅಪಾರ್ಟ್ಮೆಂಟ್ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು. ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್ ಮೆಂಟ್ನ ನಿವಾಸಿಗಳು ಹೇಳಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ನಾಪತ್ತೆ ಪ್ರಕರಣ ದಾಖಲಾಗಿದೆ.
ಮಗ ಆತ್ಮಹತ್ಯೆ; ಮನನೊಂದ ತಂದೆಯೂ ಆತ್ಮಹತ್ಯೆ
ಉಳ್ಳಾಲ: ಪುತ್ರನ ಅಗಲುವಿಕೆಯಿಂದ ಮನನೊಂದ ತಂದೆ 32 ದಿನಗಳ ನಂತರ ಆತ್ಮಹತ್ಯೆ ಶರಣಾದ ಮನಕಲುಕುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಆ.14 ರಂದು ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ.
ಪುತ್ರ ರಾಜೇಶ್ (26) ಕಳೆದ ಜು. 10 ರಂದು ನಾಪತ್ತೆಯಾಗಿದ್ದು, ಬಳಿಕ ರಾಜೇಶ್ ನ ಮೃತದೇಹ 12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಂತ್ಯಕ್ರಿಯೆ ಕಳೆದ ಬಳಿಕ ತಂದೆ ಲೋಕೇಶ್ ನೊಂದುಕೊಂಡಿದ್ದು, ಅಲ್ಲದೆ ಮಗನ ಸಾವಿನ ಬಳಿಕ ಮಾನಸಿಕವಾಗಿ, ಕುಗ್ಗಿ ಹೋಗಿದ್ದರು. ಆ.13 ರಂದು ಬೆಳಗ್ಗೆ 9.00 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ ಮೂಲಕ ವಾಟ್ಸಪ್ ಸಂದೇಶ ಕಳುಹಿಸಿ “ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು” ನಾನು ಮೊಬೈಲ್ ಕೊಂಡು ಹೋಗುವುದಿಲ್ಲ ಮನೆಯಲ್ಲಿ ಇಟ್ಟು ಹೋಸ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು.
ವಾಟ್ಸಪ್ ಸಂದೇಶ ಕೇಳಿದ ಕೂಡಲೇ ಪರಿಸರದವರು ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಆಗ ಮನೆ ಮಂದಿ ಲೋಕೇಶ್ ರವರು ಮೊಬೈಲ್ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದರು. ಲೋಕೇಶ್ ಅವರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ. ಬಳಿಕ ಮೃತದೇಹವನ್ನು ಉಳ್ಳಾಲ ಪೊಲೀಸರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಮನೆಯವರಿಗೆ ಬಿಟ್ಟು ಕೊಟ್ಟರು. ಪ್ರಕರಣ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.