ಕರಾವಳಿ ಟಾಪ್ ನ್ಯೂಸ್
ಪೆಟ್ರೋಲ್ ಕಾರಿಗೆ ಡೀಸೆಲ್ ತುಂಬಿದರು!
– ಮಂಗಳೂರು: ಇಂಜಿನ್ ಹಾಳಾಗಿ ಲಕ್ಷಾಂತರ ರೂ. ನಷ್ಟ
– ಕೋರ್ಟ್ ಏನು ಹೇಳುತ್ತೆ..? ಮಾಲೀಕ ಹೇಳಿದ್ದೇನು?
ಸೈಕಲ್ ರಿಪೇರಿಗೆ ಹಠ ಹಿಡಿದು 8ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ!
– ಉಪ್ಪಿನಂಗಡಿಯಲ್ಲಿ ನಡೆದ ಘಟನೆ
NAMMUR EXPRESS NEWS
ಮಂಗಳೂರು: ಪೆಟ್ರೋಲ್ ಬಂಕ್ ಸಿಬ್ಬಂದಿ ಮಾಡಿದ ಎಡವಟ್ಟಿನಿಂದ ಕಾರಿನ ಮಾಲೀಕರು ಲಕ್ಷಾಂತರ ರೂ. ನಷ್ಟ ಅನುಭವಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾರಿಗೆ ಇಂಧನ ಹಾಕಲು ಬಂದ ವೇಳೆ ಬಂಕ್ ಸಿಬ್ಬಂದಿ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ. ಕಾರು ಮಾಲಕ ಹೋಟೆಲ್ ಉದ್ಯಮಿ ಜೀವನ್ ಶೆಟ್ಟಿ ಅವರು ಗ್ರಾಹಕ ನ್ಯಾಯಾಲಯದ ಮೊರೆ ಹೋಗಲು ಮುಂದಾಗಿದ್ದಾರೆ.
ಆಗಿದ್ದೇನು…?
ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ. ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಸಿಬಂದಿಯ ಎಡವಟ್ಟಿನಿಂದಾಗಿ ಕಾರಿನ ಎಂಜಿನ್ ಸಂಪೂರ್ಣ ಸೀಜ್ ಆಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಆರೋಪಿಸಲಾಗಿದೆ.
ಆರಂಭದಲ್ಲಿ ಪಂಪ್ ಮಾಲಕರು ವೆಚ್ಚ ಭರಿಸುವ ಭರವಸೆ ನೀಡಿದ್ದರು. ಬಳಿಕ ಪೆಟ್ರೋಲ್ ಪಂಪ್ ಮಾಲಕರು ನಷ್ಟ ತುಂಬಿಸಿಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಅವರು ದೂರಿದ್ದಾರರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.
ಸೈಕಲ್ ರಿಪೇರಿಗೆ ಹಠ ಹಿಡಿದು 8ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆ!
ಉಪ್ಪಿನಂಗಡಿ: ಕ್ಲುಲಕ ಕಾರಣಕ್ಕೆ ಹಠ ಹಿಡಿದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.೧೮ರ ಸಂಜೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿಯಾಗಿದ್ದ ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ನಂದನ್ (13) ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ ರೋಹಿತ್ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದು, ಪತಿ ನಿಧನ ಬಳಿಕ ರಮ್ಯಾ ತವರು ಮನೆ ಉಪ್ಪಿನಂಗಡಿ ದುಗಲಾಡಿಯಲ್ಲೇ ಇದ್ದು ಮಕ್ಕಳು ಅಲ್ಲೇ ಶಾಲೆ ಕಲಿಯುತ್ತಿದ್ದರು. ಶುಕ್ರವಾರದಂದು ತನ್ನ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ನಂದನ್ ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ.
ಮನೆಯ ಇನ್ವರ್ಟರ್ ರಿಪೇರಿಗೆ ಜನ ಬಂದಿರುವುದರಿಂದ ಇಂದು ಬೇಡ ನಾಳೆ ಸೈಕಲ್ ರಿಪೇರಿ ಮಾಡೋಣ ಎಂದು ಮನೆಯವರು ತಿಳಿಸಿದ್ದರೆನ್ನಲಾಗಿದೆ. ಇದರಿಂದ ಸಮಾಧಾನ ಹೊಂದಿದ್ದ. ಆದರೆ ಕೆಲ ಹೊತ್ತಿನ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿಕೊಂಡು ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ನಂದನ್ ತಂದೆಯೂ ಕೆಲ ವರ್ಷಗಳ ಹಿಂದೆ ಆತ್ಮಹತ್ಯೆಗೆ ಶರಣಾಗ್ ಇದ್ದರು. ಮೃತ ಬಾಲಕ ತಾಯಿ, ಸಹೋದರ ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.