Categories
ಕರಾವಳಿ

ಕರಾವಳಿ ಟಾಪ್ ನ್ಯೂಸ್

ಕರಾವಳಿ ಟಾಪ್ ನ್ಯೂಸ್
– ಮಂಗಳೂರು: ವೇಶ್ಯಾವಾಟಿಕೆ ದಂಧೆ ಆರೋಪ, ರಾಮ ಸೇನೆ ಕಾರ್ಯಕರ್ತರ ದಾಳಿ!
–
ಮೂಡಬಿದಿರೆ: ಮಹಿಳೆಯ ಮೇಲೆ ಬಸ್ ಚಾಲಕನ ಹಲ್ಲೆ, ಏನಿದು ಘಟನೆ?
– ಕಾರ್ಕಳ : ಟೆಂಪೋ, ಕೆಎಸ್ ಆರ್ ಟಿಸಿ ಮುಖಾಮುಖಿ, 10ಕ್ಕೂ ಹೆಚ್ಚು ಜನಕ್ಕೆ ಗಾಯ

NAMMUR EXPRESS NEWS
ಮಂಗಳೂರು:
ಮಂಗಳೂರಿನ ಕೆಎಸ್ ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರು ಜ. 23 ಗುರುವಾರ ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಆರೋಪಿಸಿದ್ದಾರೆ.  ಜ. 23ಕ್ಕೆ ಮಧ್ಯಾಹ್ನ ಬಿಜೈ ಕೆಎಸ್ ಆರ್ ಟಿಸಿ ಬಳಿಯಿರುವ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ರಾಮ ಸೇನೆ ಕಾರ್ಯಕರ್ತರು ಮಸಾಜ್ ಸೆಂಟರ್ ನ ಗಾಜುಗಳನ್ನು ಪುಡಿಗೈದು, ಪೀಠೋಪಕರಣ ಮತ್ತು ಕಂಪ್ಯೂಟರ್ ಗಳನ್ನು ಧ್ವಂಸಗೊಳಿಸಿದ್ದು, ಅಲ್ಲಿದ್ದ ಕೆಲವು ಹುಡುಗಿಯರಿಗೆ ನೀವು ವೈಶಾವಾಟಿಕೆ ದಂಧೆ ನಡೆಸುತ್ತಿದ್ದೀರಿ ಎಂದು ಆವಾಜ್ ಹಾಕಿದ್ದಾರೆ.
ಈ ವೇಳೆ ಹುಡುಗಿಯರು ಕೈಮುಗಿದು ನಮ್ಮ ಮೇಲೆ ಹಲ್ಲೆ ಮಾಡಬೇಡಿ ಎಂದು ಬೇಡಿಕೊಳ್ಳುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.  ರಾಮ ಸೇನೆ ಕಾರ್ಯಕರ್ತರೇ ತಾವು ದಾಳಿ ನಡೆಸಿದ ಕೃತ್ಯವನ್ನು ವಿಡಿಯೋ ಮಾಡಿ, ಬಿಡುಗಡೆ ಮಾಡಿದ್ದಾರೆ. ಅಲ್ಲದೆ . ಮಂಗಳೂರು ನಗರದಾದ್ಯಂತ ಇರುವ ಮಸಾಜ್ ಸೆಂಟರ್​ಗಳ‌ನ್ನು ಮುಚ್ಚುವಂತೆ ರಾಮ ಸೇನಾ ಆಗ್ರಹಿಸಿದ್ದಾರೆ. ‘ಮಸಾಜ್​ ಸೆಂಟರ್​ನಲ್ಲಿ ಡ್ರಗ್ಸ್ ನೀಡಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. 16, 17 ವರ್ಷದ ಹೆಣ್ಣುಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಕಾರ್ಯಕರ್ತನ ಸಂಬಂಧಿ ಯುವತಿ ಇದರಲ್ಲಿ ಸಿಲುಕಿದ್ದಾಳೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದೇವೆ ಎಂದು ಪ್ರಸಾದ್ ಅತ್ತಾವರ ಹೇಳಿದ್ದಾರೆ.

* ಮೂಡಬಿದಿರೆ: ಮಹಿಳೆಯ ಮೇಲೆ ಬಸ್ ಚಾಲಕನ ಹಲ್ಲೆ, ಏನಿದು ಘಟನೆ?

ಮೂಡಬಿದಿರೆ: ಮಹಿಳೆಯ ಮೇಲೆ ಬಸ್ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ಮೂಡಬಿದರೆಯಲ್ಲಿ ನಡೆದಿದೆ. ಶಾಲೋಮ್ ಬಸ್ಸಿನ ನಿರ್ವಾಹಕ ಪ್ರಶಾಂತ್ ಪೂಜಾರಿ ಹಲ್ಲೆ ಮಾಡಿದ ಬಸ್ ಚಾಲಕ ಬಂಧಿಸಲಾಗಿದೆ.  ಮಹಿಳೆಯರು ಪ್ರತಿನಿತ್ಯ ಶಾಲೊಮ್ ಬಸ್ಸಿನಲ್ಲಿ ಕೆಲಸಕ್ಕೆ ಬರುತ್ತಿದ್ದರು.ಕೆಲವೊಮ್ಮೆ ಬೇರೆ ಬಸ್ ಗಳಲ್ಲಿ ಸಂಚರಿಸುತ್ತಿದ್ದರು. ಈ ನಡುವೆ ಬಸ್ ಕಂಡಕ್ಟರ್ ಪ್ರಶಾಂತ್ ಪೂಜಾರಿ ಪ್ರತಿ ದಿನ ಇದೇ ಬಸ್ಸಿನಲ್ಲಿ ಬರದಿದ್ದರೆ ರಿಯಾಯಿತಿ ದರದಲ್ಲಿ ಟಿಕೆಟ್ ನೀಡಲು ಆಗದು ಎಂದು ನಿರಾಕರಿಸಿದ್ದಾನೆ. ಇದೇ ವಿಚಾರಕ್ಕೆ ಮಹಿಳಾ ಪ್ರಯಾಣಿರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ವಿಷಯಕ್ಕೆ ಮಹಿಳೆ ಜತೆ ವಾಗ್ವಾದ ನಡೆಸಿದ್ದ ನಿರ್ವಾಹಕ ಆಕೆಗೆ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿದೆ ಎನ್ನಲಾಗಿದೆ.  ಆರೋಪಿಯನ್ನು ಬಂಧಿಸಲಾಗಿದೆ. ಆತನ ವಿರುದ್ಧ ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

* ಕಾರ್ಕಳ : ಟೆಂಪೋ, ಕೆಎಸ್ ಆರ್ ಟಿಸಿ ಮುಖಾಮುಖಿ, 10ಕ್ಕೂ ಹೆಚ್ಚು ಜನಕ್ಕೆ ಗಾಯ

ಕಾರ್ಕಳ: ಟೆಂಪೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಸಾಣೂರು ರಾಮ ಮಂದಿರ ಬಳಿ ನಡೆದಿದೆ. ಚಿಕ್ಕೋಡಿ ಡಿಪೊಗೆ ವಿಭಾಗದ ಕೆಎಸ್ ಆರ್ ಟಿ ಬಸ್ ಬೆಳಗಾವಿ ಕಡೆಯಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದಾಗ ಸಾಣೂರು ರಾಮ ಮಂದಿರದ ಬಳಿ ನಿಂತಿದ್ದ ಟೆಂಪೊಗೆ ಡಿಕ್ಕಿ ಹೊಡೆದಿದೆ. ಅಪಘಾತ ಪರಿಣಾಮ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಹಲವು ಪ್ರಯಾಣಿಕರು ಮತ್ತು ಚಾಲಕ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.