ಕರಾವಳಿ ಟಾಪ್ ನ್ಯೂಸ್
– ನಿವೃತ್ತ ಅಧಿಕಾರಿ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!
– ಮಣಿಪಾಲದಲ್ಲಿ ನಡೆದ ಘಟನೆ: ತನಿಖೆ ಶುರು
– ಉಡುಪಿಯ ಟೈಲ್ಸ್ ಅಂಗಡಿಗೆ ದಂಡ
– 2 ಕಿ ಮೀ ಕಾರನ್ನೇ ಎಳೆದೊಯ್ದ ಟಿಪ್ಪರ್!
– ಕುಂದಾಪುರ: 9ನೇ ತರಗತಿಯ ವಿದ್ಯಾರ್ಥಿ ನಾಪತ್ತೆ
– ಬ್ರಹ್ಮಾವರ: ಬಸ್ಸಿನಲ್ಲೇ ಬಟ್ಟೆ ಒಣಗಲು ಹಾಕಿದ ಪ್ರಯಾಣಿಕರು!
NAMMUR EXPRESS NEWS
ಮಣಿಪಾಲ: ಕೇಂದ್ರ ಇಲಾಖೆಯ ನಿವೃತ್ತ ಅಧಿಕಾರಿಯೋರ್ವರ ಶವವು ಕೊಳೆತ ಸ್ಥಿತಿಯಲ್ಲಿದೆ.
ಮೃತರನ್ನು ಪೆರ್ಡೂರು ನಿವಾಸಿ 83 ವರ್ಷದ ಗೋಪಾಲ ನಾಯಕ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಮೂರು ದಿನಗಳು ಕಳೆದಿರಬಹುದೆಂಬ ಶಂಕೆ ಇದೆ. ಮೃತರು ದಶರಥ ನಗರದ ವರಸಿಂಗ ದೇವಸ್ಥಾನದ ಬಳಿ ಒಂಟಿಯಾಗಿ ವಾಸವಾಗಿದ್ದರು. ಮಣಿಪಾಲ ಪೋಲಿಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸುತ್ತಿದ್ದಾರೆ. ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು.
ಟೈಲ್ಸ್ ಅಂಗಡಿ, ಕಂಪೆನಿಗೆ 1ಲಕ್ಷ ರೂ.ದಂಡ
ಕಳಪೆ ಗುಣಮಟ್ಟದ ಮಾರ್ಬಲ್ ಪೂರೈಕೆ ಮಾಡಿರುವ ಹಿನ್ನೆಲೆಯಲ್ಲಿ ಉಡುಪಿಯ ಗಣೇಶ್ ಮಾರ್ಬಲ್ಸ್ ಹಾಗೂ ಕಜಾರಿಯ ಕಂಪೆನಿಗೆ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಒಂದು ಲಕ್ಷಕ್ಕೂ ಅಧಿಕ ದಂಡ ವಿಧಿಸುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ. ಸ್ಟೇಟ್ ಬ್ಯಾಂಕ್ ಉದ್ಯೋಗಿ ಪ್ರಕಾಶ್ ಎಂಬವರು ತಮ್ಮ ಹಳೆ ಮನೆಯ ನವೀಕರಣಕ್ಕಾಗಿ ಉಡುಪಿಯ ನಿಟ್ಟೂರು ರಾ.ಹೆ 66 ರ ಬಳಿಯಿರುವ ಗಣೇಶ್ ಮಾರ್ಬಲ್ಸ್ ನಿಂದ ಕಜಾರಿಯ ಕಂಪೆನಿಯ ಸುಮಾರು 81,158 ರೂಪಾಯಿ ಬೆಲೆ ಬಾಳುವ ಟೈಲ್ಸ್ ಗಳನ್ನು ಖರೀದಿ ಮಾಡಿದ್ದರು. ಹೀಗೆ ಖರೀದಿ ಮಾಡಿದ ಟೈಲ್ಸ್ ಗಳ ಪೈಕಿ ಹಾಲ್ ಹಾಗೂ ಬೆಡ್ ರೂಂಗೆ ಅಳವಡಿಸಿದ ಟೈಲ್ಸ್ ಗಳ ಎಲ್ಲಾ ಅಂಚುಗಳು ಮೇಲಕ್ಕೆ ಉಬ್ಬಿಕೊಂಡಿದ್ದು ದೋಷಪೂರಿತವಾಗಿದ್ದವು. ಈ ಬಗ್ಗೆ ಪ್ರಕಾಶ್ ರವರು ಗಣೇಶ್ ಮಾರ್ಬಲ್ಸ್ ರವರನ್ನು ಸಂಪರ್ಕಿಸಿ ವಿಚಾರ ತಿಳಿಸಿ ಬೇರೆ ಟೈಲ್ಸ್ ಗಳನ್ನು ನೀಡುವಂತೆ ಕೇಳಿಕೊಂಡಾಗ ಹಾರಿಕೆಯ ಉತ್ತರ ನೀಡಿದ್ದರು. ನಂತರದ ಕಜಾರಿಯಾ ಕಂಪೆನಿಯನ್ನು ಸಂಪರ್ಕಿಸಿದ್ದರೂ ಕೂಡ ಸರಿಯಾದ ಸ್ಪಂದನೆ ಸಿಗಲಿಲ್ಲ.
ಈ ಹಿನ್ನೆಲೆಯಲ್ಲಿ ಗಣೇಶ್ ಮಾರ್ಬಲ್ಸ್ ಹಾಗೂ ಕಜಾರಿಯ ಕಂಪೆನಿ ವಿರುದ್ಧ ದೋಷಪೂರಿತ ಟೈಲ್ಸ್ ಪೂರೈಕೆ, ನಷ್ಟ ಹಾಗೂ ಮಾನಸಿಕವಾಗಿ ವೇದನೆಯನ್ನು ಉಂಟುಮಾಡುವ ಕುರಿತು 5,60,000 ರೂಪಾಯಿ ಪರಿಹಾರ ನೀಡಲು ಸೂಕ್ತ ನಿರ್ದೇಶನ ಕೋರಿ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದಾವೆ ಹೂಡಿದ್ದರು. ವಾದ, ವಿವಾದ ಆಲಿಸಿದ ಮಾನ್ಯ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಕಮಿಷನರ್ ನೇಮಕ ಮಾಡುವ ಮೂಲಕ ಸ್ಥಳ ಪರಿಶೀಲನೆಯನ್ನು ನಡೆಸಿತ್ತು. ಈ ವೇಳೆಯಲ್ಲಿ ದೋಷಪೂರಿತ ಟೈಲ್ಸ್ ಪೂರೈಕೆ ಮಾಡಿರುವುದು ಸಾಬೀತಾಗಿತ್ತು.ಈ ಹಿನ್ನೆಲೆಯಲ್ಲಿ ಆಯೋಗ ಇದೀಗ ಮಹತ್ವದ ಆದೇಶ ಹೊರಡಿಸಿದೆ.
ಕುಂದಾಪುರ: 9ನೇ ತರಗತಿಯ ವಿದ್ಯಾರ್ಥಿ ನಾಪತ್ತೆ!
ಕುಂದಾಪುರ ತಾಲೂಕಿನ ಕೋಟೇಶ್ವರ ಕಾಗೇರಿಯ ರಾಮಚಂದ್ರ ಅವರ ಮಗ ರಥನ್ (15) ಇವನು ನಾಪತ್ತೆಯಾದ ವಿದ್ಯಾರ್ಥಿ. ಜು.17 ರಂದು ಸೋಮವಾರ ಶಾಲೆಗೆ ಹೋದವನು ವಾಪಸು ಮನೆಗೆ ಬಾರದೆ ನಾಪತ್ತೆ ಆಗಿರುತ್ತಾನೆ. ಇತನ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಹತ್ತಿರದ ಪೊಲೀಸ್ ಸ್ಟೇಷನ್ ತಿಳಿಸಬೇಕಾಗಿ ವಿನಂತಿ. ಅಲ್ಲದೆ ಈ ಕೆಳಗಿನ ಮೊಬೈಲ್ ನಂಬರ್ ಗೆ ಸಂಪರ್ಕಿಸಲು ಕೋರಲಾಗಿದೆ.8867004397, 7795408970
ಡಿಕ್ಕಿ ಹೊಡೆದ ಕಾರನ್ನೇ 2 ಕಿ.ಮೀ ಎಳೆದೊಯ್ದ ಟಿಪ್ಪರ್!
ಉಡುಪಿ ಜಿಲ್ಲೆಯ ಪಡುಬಿದ್ರಿ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ವಾಹನ ನಿಲ್ಲಿಸಿದ 2 ಕಿ.ಮೀ ಲಾರಿ ಚಾಲಕರನ್ನು ಎಳೆದೊಯ್ದ ವಿಲಕ್ಷಣ ನಡೆದಿದ್ದು, ಸ್ಥಳೀಯರೊಬ್ಬರ ಕ್ಯಾಮರಾದಲ್ಲಿ ಘಟನೆ ಸೆರೆಯಾಗಿದೆ.
ಜುಲೈ 17 ಸೋಮವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಟಿಪ್ಪರ್ ಲಾರಿಯ ಚಾಲಕ ಕಾರನ್ನು ಸುಮಾರು 2 ಕಿಮೀ ದೂರದ ತನಕ ಎಳೆದುಕೊಂಡು ಹೋಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಾಗರದಿಂದ ಮಂಗಳೂರಿನತ್ತ ಸಾಗುತ್ತಿದ್ದ ಸ್ಯಾಂಟೋ ಕಾರು ಹಾಗೂ ಬೆಳಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ.
ಬಸ್ಸಿನಲ್ಲೇ ಬಟ್ಟೆ ಒಣಗಲು ಹಾಕಿದ ಪ್ರಯಾಣಿಕರು!
ರಾಜ್ಯ ಸರ್ಕಾರದ ಫ್ರೀ ಬಸ್ ಯೋಜನೆ ಬಳಸಿಕೊಂಡು ವಾರಾಂತ್ಯದ ದಿನಗಳಲ್ಲಿ ಮಹಿಳೆಯರು ಗುಂಪು ಗುಂಪಾಗಿ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ, ದೇವರ ದರ್ಶನ ಪಡೆಯುತ್ತಿದ್ದಾರೆ. ವಾಯವ್ಯ ಕರ್ನಾಟಕ ಸಾರಿಗೆ ಬಸ್ನಲ್ಲಿ ಮಹಿಳೆಯರು ಬಟ್ಟೆ ಒಣಗಲು ಹಾಕಿದ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ನಾಡಿನ ಸುಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಾರವಾರ ನಡುವೆ ಸಂಚರಿಸುತ್ತಿದ್ದ ಬಸ್ನ ಕಿಟಕಿಗಳಿಗೆ ಮಹಿಳೆಯರು ಬಟ್ಟೆಗಳನ್ನು ಒಣಗಲು ಹಾಕಿದ್ದಾರೆ. ಇದು ಸಾರ್ವಜನಿಕವಾಗಿ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ : ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ತಯಾರಿ!
HOW TO APPLY : NEET-UG COUNSELLING 2023