ಕರಾವಳಿ ಆಗ್ತಿದೆ ಡ್ರಗ್ಸ್ ಸೆಂಟರ್!?
– ಗಾಂಜಾ, ಡ್ರಗ್ಸ್ ಜಾಲ: ನಾಲ್ವರು ಅರೆಸ್ಟ್
– ಹಿಂದೂ ಹುಡುಗಿ ಆಟೋದಲ್ಲಿ ಕೂರಿಸಿದ್ದಕ್ಕೆ ಹಲ್ಲೆ!
NAMMUR EXPRESS NEWS
ಮಂಗಳೂರು/ಉಡುಪಿ: ಕರಾವಳಿ ಆಗ್ತಿದೆಯಾ ಡ್ರಗ್ಸ್ ಸೆಂಟರ್!. ಹೌದು. ದಿನೇ ದಿನೇ ಹೆಚ್ಚಾಗುತ್ತಿದೆ ಗಾಂಜಾ, ಡ್ರಗ್ಸ್ ಜಾಲ. ಕರಾವಳಿಯ ಪ್ರತಿ ತಾಲೂಕಲ್ಲೂ ಈ ಜಾಲ ಕೆಲಸ ಮಾಡುತ್ತಿದೆ. ಕರಾವಳಿಯಲ್ಲಿ ವಿವಿಧ ದೇಶ, ರಾಜ್ಯಗಳಿಂದ ವಿದ್ಯಾರ್ಥಿಗಳು ಕರಾವಳಿಗೆ ಆಗಮಿಸುತ್ತಾರೆ. ಈ ಹಿನ್ನೆಲೆ ಅವರನ್ನು ಸೆಳೆಯುವ ಯತ್ನ ನಡೆಯುತ್ತಿದೆ.
ಕಾರಲ್ಲಿ ಚರಸ್ ಸಾಗಾಟ: ಆರೋಪಿ ಅರೆಸ್ಟ್
ಕಾರಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ. ಅಬ್ದುಲ್ ಅಝೀಝ್(34), ಬಂಧಿತ ವ್ಯಕ್ತಿ. ಈತನಿಂದ 230.4 ಗ್ರಾಂ ತೂಕದ ಚರಸ್ ಹಾಗೂ ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ನಿಂಗ್ ಸ್ಟಾರ್ ಶಾಲೆಯ ಬಳಿ ಆ.1ರಂದು ಮುಂಜಾವ 3:15ರ ಸುಮಾರಿಗೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ಬರುತ್ತಿದ್ದ ಕಾರನ್ನು ಪೊಲೀಸರು ನಿಲ್ಲಿಸುವಂತೆ ಸೂಚಿಸಿದ್ದಾರೆ. ಈ ವೇಳೆ ಅದರ ಚಾಲಕ ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದಾನೆ.
ಬಳಿಕ ಕಾರನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲಿಸಿದಾಗ 230.4 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತು ಚರಸ್ ಪತ್ತೆಯಾಗಿದೆ. ಕಾರು ಹಾಗೂ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರಿನಲ್ಲಿದ್ದ ಇನ್ನಿತರ ಆರೋಪಿತರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಮಂಗಳೂರಲ್ಲಿ ಡ್ರಗ್ ಪಡ್ಲೆರ್ಗಳ ಅರೆಸ್ಟ್!
ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತು ‘ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.ಮೂಲತಃ ಸಜಿಪ ಮುನ್ನೂರು ಗ್ರಾಮದ ಪ್ರಸ್ತುತ ಉಳ್ಳಾಲದ ಹಫೀಝ್ ಯಾನೆ ಅಪ್ಪಿ(35), ಸಜಿಪ ಮುನ್ನೂರಿನ ಅಮೀರ್ ಯಾನೆ ಅಮ್ಮಿ(34), ಸಜಿಪ ಮುನ್ನೂರಿನ ಜಾಕಿರ್ ಹುಸೇನ್ ಯಾನೆ ತಾಚ್ಚಿ (28) ಬಂಧಿತ ಆರೋಪಿಗಳು. ಉಳ್ಳಾಲ ತಾಲೂಕಿನ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಕಾರಿನಲ್ಲಿ ಮೂವರು ಮಾದಕ ವಸ್ತುವಾದ ಎಂಡಿಎಂಎಯನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದರಲ್ಲದೆ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 3 ಮೊಬೈಲ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ 15,70,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಉಳ್ಳಾಲಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಹಫೀಝ್ ಯಾನೆ ಅಪ್ಪಿ ಎಂಬಾತನ ವಿರುದ್ಧ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಹಾಗೂ ಇತರ 3 ದರೋಡೆ ಪ್ರಕರಣಗಳು, ಬಜ್ಜೆಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ, ಪಾಂಡೇಶ್ವರ ಠಾಣೆಯಲ್ಲಿ 2 ಬೈಕ್ ಕಳವು ಪ್ರಕರಣಗಳು, ಉಡುಪಿ ಜಿಲ್ಲೆಯ ಶಿರ್ವಾ ಹಾಗೂ ಪಡುಬಿದ್ರಿ ಠಾಣೆಯಲ್ಲಿ ಕಳವು ಪ್ರಕರಣಗಳ ಸಹಿತ 8 ಪ್ರಕರಣಗಳು ದಾಖಲಾಗಿವೆ.
ಇಸ್ಪೇಟ್ ಅಡ್ಡೆ ಮೇಲೆ ದಾಳಿ: ಬಂಧನ
ಮೂಡುಬಿದಿರೆ ಠಾಣಾ ವ್ಯಾಪ್ತಿಯ ಅಲಂಗಾರ್, ಕಾನ ಗುಡ್ಡೆ ಎಂಬಲ್ಲಿ ಬುಧವಾರ ರಾತ್ರಿ 10.30ರವೇಳೆಗೆ ಜೂಜಾಟ ನಡೆಸುತ್ತಿದ್ದ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 18,340 ರೂ. ಮತ್ತು ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹಿಂದೂ ಹುಡುಗಿ ಆಟೋದಲ್ಲಿ ಕೂರಿಸಿದ್ದಕ್ಕೆ ಹಲ್ಲೆ!
ಆಟೋದಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡಿದ್ದ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಥಳಿಸಿದ ಘಟನೆ ಧರ್ಮಸ್ಥಳ ದ್ವಾರದ ಬಳಿ ನಡೆದಿದೆ. ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಹಲ್ಲೆಗೊಳಗಾದ ಚಾಲಕನಾಗಿದ್ದು, ಉಜಿರೆಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿ ಬೆಂಗಳೂರಿಗೆ ತೆರಳುವ ಸಂದರ್ಭ ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥನಾಗಿದ್ದ ಆಟೋ ಚಾಲಕನಿಗೆ ಕರೆ ಮಾಡಿದ್ದು, ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡ ಥಳಿಸಿದ್ದಾರೆ ಎನ್ನಲಾಗಿದೆ. ಯುವಕ ಸದ್ಯ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಖರ್ಗೆ ಮೈಬಣ್ಣದ ವಿವಾದ: ಜ್ಞಾನೇಂದ್ರ ಕ್ಷಮೆಗೆ ಕಾಂಗ್ರೆಸ್ ಪಟ್ಟು!
HOW TO APPLY : NEET-UG COUNSELLING 2023