ಸ್ಕಾರ್ಪಿಯೋ ಕಾರಲ್ಲಿ ಗೋವುಗಳ ಕದ್ದು ಸಾಗಾಟ!
– ಕಾರ್ಕಳದ ಬಜಗೋಳಿಯಲ್ಲಿ ನಡೆದ ಘಟನೆ
– ಸೌಜನ್ಯ ಕೊಲೆ: ಶಿಕ್ಷೆಗೆ ಈಗ ದೇವರ ಮೊರೆ
– ಅಟೋ ರಿಕ್ಷಾದಲ್ಲೇ ಡ್ರಗ್ಸ್ ಮಾರಾಟ: ಓರ್ವ ಅರೆಸ್ಟ್
– ಧರ್ಮಸ್ಥಳದಲ್ಲಿ ಮಹಿಳೆಗೆ ಬಸ್ ಡಿಕ್ಕಿ: ಗಾಯ
– ಮಕ್ಕಳ ಜೊತೆ ಅಸಭ್ಯ ವರ್ತನೆ: ಬಂಧನ
– ಅಬ್ಬಾ.. ಸಭಾಂಗಣದಲ್ಲೇ ಇಸ್ಪೀಟ್: 24 ಮಂದಿ ಅರೆಸ್ಟ್!
NAMMUR EXPRESS NEWS
ಕಾರ್ಕಳ: ಗೋವುಗಳನ್ನು ಕದ್ದು ಪರಾರಿಯಾಗುತ್ತಿದ್ದ ವಾಹನವನ್ನು ಬಜರಂಗದಳದ ಕಾರ್ಯಕರ್ತರು ಬೆನ್ನಟ್ಟಿ ಹಿಡಿದು ಗೋವುಗಳನ್ನು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ ನಡೆದಿದೆ.
ನಾಲ್ಕು ಗೋವುಗಳನ್ನು ಸ್ಕಾರ್ಪಿಯೋ ವಾಹನದಲ್ಲಿ ತುಂಬಿಸಿಕೊಂಡು ಕಾರ್ಕಳ ತಾಲೂಕಿನ ಕೆರ್ವಾಶೆಯಲ್ಲಿ ಸಾಗುತ್ತಿರುವುದು ಬಜರಂಗದಳದ ಕಾರ್ಯಕರ್ತರ ಗಮನಕ್ಕೆ ಬಂದು ತಕ್ಷಣ ಬಂದಾಗ ಬಜಗೋಳಿಯಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೌಜನ್ಯ ಕೊಲೆ: ಆರೋಪಿಗಳ ಶಿಕ್ಷೆಗೆ ಈಗ ದೇವರ ಮೊರೆ
ಪುತ್ತೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಕಸುಮಾವತಿ ಉಪಸ್ಥಿತಿಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆರೋಪಿಗೆ ಶಿಕ್ಷೆಯಾಗುವಂತೆ ಸಾಮೂಹಿಕ ಪ್ರಾರ್ಥನೆ ನಡೆಸಲಾಗಿದೆ. 2011 ರಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪುತ್ತೂರು ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದಿಂದ ಸೋಮವಾರ ಪುತ್ತೂರಿನಲ್ಲಿ ಕಾಲ್ನಡಿಗೆ ಮತ್ತು ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು. ಬೆಳಿಗ್ಗೆ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ನಂತರ ಅಲ್ಲಿಂದ ಕಾಲ್ನಡಿಗೆ ಮೂಲಕ ಮುಖ್ಯರಸ್ತೆಯಾಗಿ ಸಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು. ಸಾಮೂಹಿಕ ಪ್ರಾರ್ಥನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಜೊತೆ ಮಾಜಿ ಶಾಸಕ ಸಂಜೀವ ಮಠಂದೂರು, ಬಜರಂಗದಳ ವಿಭಾಗ ಸಹಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ವಿಹಿಂಪ ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ, ಕಾರ್ಯದರ್ಶಿ ಸತೀಶ್ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಸಹಿತ ನೂರಾರು ಮಂದಿ ಭಾಗವಹಿಸಿದ್ದರು.
ಧರ್ಮಸ್ಥಳದಲ್ಲಿ ಬಸ್ ಡಿಕ್ಕಿ: ಕಾಲಿನ ಮೂಳೆ ಮುರಿತ
ಬೆಂಗಳೂರು ನಿವಾಸಿ ಮಹಿಳೆಯೊಬ್ಬರು ಧರ್ಮಸ್ಥಳ ದೇವಾಲಯದ ವಠಾರದಲ್ಲರುವ ಬಸ್ ನಿಲ್ದಾಣದ ಮುಂಭಾಗದ ರಸ್ತೆ ಬದಿಯಲ್ಲಿ ನಿಂತಿರುವಾಗ ಕೆಎಸ್ಆರ್ಟಿಸಿ ಬಸ್ಸನ್ನು ಚಾಲಕ ಏಕಾಏಕಿ ಹಿಂದಕ್ಕೆ ಚಲಾಯಿಸಿದ ಪರಿಣಾಮ ಮಹಿಳೆಯ ಕಾಲಿನ ಮೇಲೆ ಬಸ್ಸಿನ ಟಯರ್ ಹರಿದು ಮೂಳೆ ಮುರಿತ ಗೊಂಡಿದೆ.
ಗಾಯಾಳುವನ್ನು ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಲ್ಲಿ ಆಟೋದಲ್ಲೇ ಡ್ರಗ್ಸ್ ಮಾರಾಟ!
ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ನನ್ನು ಬಂಧಿಸಿದ್ದಾರೆ.
ಬಂಧಿತನಿಂದ 12 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ ವಸ್ತುವನ್ನು ಮಾರಾಟ ಮಾಡಲು ಉಪಯೋಗಿಸಿದ ಆಟೋರಿಕ್ಷಾವನ್ನು ವಶಕ್ಕೆ ಪಡೆದು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ. 95,000 ಮೌಲ್ಯದ ಒಟ್ಟು ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಮಕ್ಕಳ ಜೊತೆ ಅಸಭ್ಯ ವರ್ತನೆ: ಬಂಧನ
ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಪೊಲೀಸರು ಬಂಧಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಧಿತರನ್ನು ಅಮರ್ ಮತ್ತು ಸೂರಜ್ ಎನ್ನಲಾಗಿದೆ.
ಬಂಧಿತರು ಅತ್ತಾವರದಲ್ಲಿ ನಡೆದುಕೊಂಡು ಹೋಗುವ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸಿದ್ದು, ಮಕ್ಕಳು ಹಾದು ಹೋಗುವಾಗ ಹಿಂಬಾಲಿಸಿ, ಕೆಟ್ಟ ದೃಷ್ಠಿಯಿಂದ ನೋಡುವ ಆರೋಪ ಕೇಳಿಬಂದಿತ್ತು. ಮಂಗಳೂರು ಪೊಲೀಸ್ ಆಯುಕ್ತರ ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಈ ದೂರು ಬಂದಿತ್ತು. ಕಮಿಷನರ್ ಕುಲದೀಪ್ ಕುಮಾರ್ ಜೈನ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದೆ, ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಬ್ಬಾ.. ಸಭಾಂಗಣದಲ್ಲೇ ಇಸ್ಪೀಟ್: 24 ಮಂದಿ ಅರೆಸ್ಟ್!
ಉಡುಪಿ ಜಿಲ್ಲೆ ಕೋಟ ಪೊಲೀಸರು ಜೂಜು ಕೇಂದ್ರದ ಮೇಲೆ ದಾಳಿ ನಡೆಸಿ 24 ಮಂದಿಯನ್ನು ಬಂಧಿಸಿ ಸುಮಾರು 10 ಲಕ್ಷ ರೂ.ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಶನಿವಾರ ಸಂಜೆ ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಗುಡ್ಡೆಯಂಗಡಿ ಕ್ರಾಸ್ ಬಳಿಯ ವಿನಾಯಕ ಸಭಾಂಗಣದಲ್ಲಿ ಜೂಜಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೋಟ ಪಿಎಸ್ಐ ಶಂಬುಲಿಂಗಯ್ಯ ಮತ್ತಿತರರ ತಂಡ ದಾಳಿ ನಡೆಸಿ 24 ಮಂದಿಯನ್ನು ಬಂಧಿಸಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 9,77,250 ರೂ. ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ : ರೈತರಿಗೆ ಖುಷ್: ಕಾಳು ಮೆಣಸು ದರ ಏರಿಕೆ!
HOW TO APPLY : NEET-UG COUNSELLING 2023