ಟಾಪ್ 5 ನ್ಯೂಸ್ ಕರಾವಳಿ
ಕಾರ್ಕಳ ರೇಪ್ ಕೇಸ್: 3ನೇ ಆರೋಪಿ ಬಿಜೆಪಿ ಕಾರ್ಯಕರ್ತ!
– ಕಡಬ: ಶಾಲಾ ಕಟ್ಟಡ ಕುಸಿದು ವಿದ್ಯಾರ್ಥಿಗಳಿಗೆ ಗಾಯ!
– ಮಣಿಪಾಲ: ಈಜಲು ಹೋಗಿ ವಿದ್ಯಾರ್ಥಿ ನೀರು ಪಾಲು!
– ಉಡುಪಿ: ಕೆರೆಗೆ ಬಿದ್ದು ವಿದ್ಯಾರ್ಥಿ ಸಾವು
– ಉಡುಪಿ : ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ
NAMMUR EXPRESS NEWS
ಉಡುಪಿ: ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್ ಈ ಸಂಬಂಧ ಆತನ ಫೋಟೋಗಳನ್ನು ಬಿಡುಗಡೆ ಮಾಡಿದೆ. ಕಾರ್ಕಳ ಮತ್ತು ಉಡುಪಿ ಯುವ ಕಾಂಗ್ರೆಸ್ ನಾಯಕರು ಫೋಟೋ ಬಿಡುಗಡೆಗೊಳಿಸಿದ್ದು, ಬಿಜೆಪಿಯ ದ್ವಂದ್ವ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಮೊದಲ ಆರೋಪಿ ಅಲ್ತಾಫ್ ಬಂಧನ ನಡೆದಾಗ ಬಿಜೆಪಿ ಪಟಾಲಂ ಅಬ್ಬರಿಸಿ ಬೊಬ್ಬಿರಿಯಿತು. ಸಂತ್ರಸ್ತ ಹುಡುಗಿ ಹಿಂದುವಾಗಿ ಕಂಡಳು. ಅತ್ಯಾಚಾರ ಪ್ರಕರಣವನ್ನು “ಜಿಹಾದಿ” ಕೃತ್ಯವಾಗಿ ಚಿತ್ರಿಸಾಯಿತು. ಸರಣಿ ಪ್ರತಭಟನೆ, ಪತ್ರಿಕಾ ಹೇಳಿಕೆಗಳು ಹೊರಟವು. ಎನ್ ಐಎ ತನಿಖೆ ನಡೆಯಬೇಕೆಂಬ ಆಗ್ರಹಗಳು ಕೇಳಿ ಬಂದವು. ಆದರೆ ಬಂಧನಕ್ಕೊಳಗಾಗಿದ್ದ ಮೂರನೇ ಆರೋಪಿ ಅಭಯ್, ಬಿಜೆಪಿ ಕಾರ್ಯಕರ್ತ ಎಂದು ಗೊತ್ತಾದ ಬಳಿಕ ಬಿಜೆಪಿ ಮೌನಕ್ಕೆ ಶರಣಾಗಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ. ಹಿಂದೂ ಯುವತಿಯ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಮಾಜಿ ಸಚಿವ ಸುನಿಲ್ ಆಪ್ತನಾಗಿದ್ದು ಫೇಸ್ ಬುಕ್ ಪ್ರೊಫೈಲ್ ನಲ್ಲೂ ಸುನಿಲ್ ಕುಮಾರ್ ಫೋಟೋ ಹಾಕಿಕೊಂಡಿದ್ದಾನೆ. ಈತ ಕಾರ್ಕಳ ಬಿಜೆಪಿಯಲ್ಲಿ ಸಕ್ರಿಯ ಸದಸ್ಯನಾಗಿದ್ದಾನೆ. ಇದು ಗೊತ್ತಾಗುತ್ತಿದ್ದಂತೆ ಬಿಜೆಪಿ ನಾಯಕರು ಹೋರಾಟವನ್ನು ಕೈಬಿಟ್ಟಿದ್ದಾರೆ. ಅತ್ಯಾಚಾರದಂತಹ ಪ್ರಕರಣದಲ್ಲಿ ಯಾವುದೇ ಧರ್ಮ, ಪಕ್ಷದವರಿದ್ದರೂ ಅದನ್ನು ಖಂಡಿಸುವ ಬದಲು ಧರ್ಮಾಧಾರಿತವಾಗಿ ಅದನ್ನು ಬಿಜೆಪಿ ನೋಡುತ್ತಿದೆ ಎಂದು ಕೈ ಮುಖಂಡರು ಆಕ್ರೋಶ ಹೊರಹಾಕಿದರು.
ಕಡಬ: ಶಾಲಾ ಕಟ್ಟಡ ಕುಸಿದು ವಿದ್ಯಾರ್ಥಿಗಳಿಗೆ ಗಾಯ!
ಕಡಬ: ಕಡಬ ತಾಲೂಕಿನ ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಭಾಗ ಕುಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಆದೇಶದ ಮೇರೆಗೆ ಜಿಲ್ಲಾಧಿಕಾರಿಗಳು ಅಮಾನತುಗೊಳಿಸಿದ್ದಾರೆ.
ಶಾಲಾ ಕಟ್ಟಡದ ಒಂದು ಭಾಗ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟವಶಾತ್, ಹೆಚ್ಚಿನ ವಿದ್ಯಾರ್ಥಿಗಳು ಆ ಸಮಯದಲ್ಲಿ ಶಾಲಾ ಮೈದಾನದಲ್ಲಿ ಇದ್ದುದರಿಂದ ಅನಾಹುತ ತಪ್ಪಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಏಳನೇ ತರಗತಿಯ ರಶ್ಮಿ, ದೀಕ್ಷಾ, ಫಾತಿಮಾ ಸುಹಾನಾ ಮತ್ತು ಯಶಿತಾ ಎಂದು ಗುರುತಿಸಲಾಗಿದೆ.
ಶಾಲಾ ಕಟ್ಟಡದ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅಗೆಯುವ ಯಂತ್ರ ಬಳಸಿ ಟ್ರೆಂಚ ೋಡುತ್ತಿದ್ದ ವೇಳೆ ಕುಸಿತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು, ಆದರೆ ಸ್ಥಳೀಯರು ಕೂಡಲೇ ರಕ್ಷಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಪುತ್ತೂರಿನ ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ, ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಸಿದ ಕಟ್ಟಡವು ಸರಿಸುಮಾರು 50 ವರ್ಷಗಳಷ್ಟು ಹಳೆಯದಾಗಿದೆ ಮತ್ತು ಸರಿಯಾದ ಅಡಿಪಾಯವನ್ನು ಹೊಂದಿಲ್ಲ, ಇದು ಕುಸಿತಕ್ಕೆ ಕಾರಣವಾಗಿರಬಹುದು.ಕಟ್ಟಡದ ದುಸ್ಥಿತಿಯ ಅರಿವಿದ್ದರೂ ತರಾತುರಿಯಲ್ಲಿ ಕಾಮಗಾರಿ ಆರಂಭಿಸಿರುವುದು ಸ್ಥಳೀಯರು ಹಾಗೂ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.
– ಮಣಿಪಾಲ: ಈಜಾಡಲು ಹೋಗಿ ವಿದ್ಯಾರ್ಥಿ ನೀರು ಪಾಲು!
ಮಣಿಪಾಲ: ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಾಡಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ವೇಳೆ ಕೊನೆಯುಸಿರೆಳೆದಿದ್ದಾನೆ. ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಇನ್ನೋರ್ವ ಕೋಲ್ಕತ್ತಾದ ಮಾಧವ್(18) ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರೆದಿದೆ. ಘಟನೆ ನಡೆದ ವೇಳೆ ಇಬ್ಬರು ವಿದ್ಯಾರ್ಥಿಗಳು ಪಾರಾಗಿದ್ದು, ನೀರಿನಲ್ಲಿ ಮುಳುಗಡೆಯಾಗಿದ್ದವರನ್ನು ಸ್ಥಳೀಯರು ತುರ್ತು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
– ಉಡುಪಿ: ಕೆರೆಗೆ ಬಿದ್ದು ವಿದ್ಯಾರ್ಥಿ ಸಿದ್ಧಾರ್ಥ್ ಶೆಟ್ಟಿ ಮೃತ್ಯು ಪ್ರಕರಣ
ಉಡುಪಿ : ನಿವಾಸಿ ಸಿದ್ಧಾರ್ಥ್ ಶೆಟ್ಟಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಹಲವಾರು ರೀತಿಯ ಅನುಮಾನಗಳು ಹುಟ್ಟುಕೊಂಡಿದ್ದು, ಆತನೊಂದಿಗಿದ್ದ ಸ್ನೇಹಿತರೇ ಈ ಕೃತ್ಯ ಎಸಗಿದ್ದಾರೆಯೇ ಎಂ ಪ್ರ್ನೆಗಳು ಹುಟ್ಟತೊಡಗಿವೆ. ಮಣಿಪಾಲದ ಆಟೋಮೊಬೈಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡಿಕೊಂಡಿದ್ದ ಸಿದ್ಧಾರ್ಥ್ ಶೆಟ್ಟಿ. ಇಲ್ಲಿ ವ್ಯಾಸಂಗ ಮುಗಿಸಿ ಜರ್ಮನಿಯಲ್ಲಿ ಆಟೋಮೊಬೈಲ್ನಲ್ಲಿ ಸ್ವಾತಕೋತ್ತರ ಮುಂದುವರಿಸಬೇಕೆಂಬ ಕನಸು ಕಂಡಿದ್ದು ಮಾತ್ರವಲ್ಲದೇ ಕಾರುಗಳ ವಿನ್ಯಾಸ ಕ್ಷೇತ್ರದಲ್ಲಿ ವೃತ್ತಿ ಆರಂಭಿಸುವ ಆಸೆಯನ್ನು ಹೊಂದಿದ್ದ. ಇಲ್ಲಿಗೆ ವ್ಯಾಸಂಗಕ್ಕೆ ಬಂದಿರುವ ಮಹಾರಾಷ್ಟ್ರ ಸಹಿತ ಉತ್ತರ ಭಾರತದ ವಿದ್ಯಾರ್ಥಿಗಳಿಗೆ ಸಿದ್ಧಾರ್ಥ ಕನ್ನಡಿಗನಾಗಿ ಇಂಗ್ಲಿಷ್, ಹಿಂದಿ ಭಾಷೆಯಲ್ಲಿ ಹಲವು ವಿಷಯಗಳಲ್ಲಿ ಸಮನ್ವಯ ಸಾಧಿಸುತ್ತಿದ್ದ. ಹೀಗಾಗಿಯೇ ಕಾಲೇಜಿನಲ್ಲಿ ಸ್ನೇಹ ಜೀವಿಯಾಗಿದ್ದ. ಸಿದ್ಧಾರ್ಥ ಗೆ ಈಜು ಬರುವುದಿಲ್ಲ ಎಂಬುದು ಶಾಶ್ವತ್ ಶೆಟ್ಟಿಗೆ ಸ್ಪಷ್ಟವಾಗಿ ತಿಳಿದಿದ್ದರೂ, ಈಜಲು ಕರೆದುಕೊಂಡು ಹೋಗಿದ್ದಾರೆ. ಸಂಜೆ 6 ಗಂಟೆಯ ಮೇಲೆ ಈ ಘಟನೆ ನಡೆದಿದೆಯಾದರೂ ಅವರ ಸ್ನೇಹಿತರು ರಕ್ಷಿಸುವ ಕೆಲಸವನ್ನೂ ಮಾಡಿಲ್ಲ. ಹೀಗಾಗಿಯೇ ಈ ಪ್ರಕರಣದಲ್ಲಿ ಶಾಶ್ವತ್ ಶೆಟ್ಟಿ ಕೈವಾಡದ ಶಂಕೆಯನ್ನು ಕುಟುಂಬದ ಸದಸ್ಯರು ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪೊಲೀಸ್ ಠಾಣೆಗೂ ಮಾಹಿತಿ ನೀಡಿದ್ದಾರೆ. ಆದ್ದರಿಂದ ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
– ಉಡುಪಿ : ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ
ಉಡುಪಿ: ಮನೆಗೆ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ಉಡುಪಿಯ ಪುತ್ತೂರಿನಲ್ಲಿ ನಡೆದಿದೆ. ಟೈಲರಿಂಗ್ ಕೆಲಸ ಮಾಡಿಕೊಂಡಿರುವ ಅಂಬಿಕಾ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಕೆಲಸದ ನಿಮಿತ್ತ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದಲ್ಲಿರುವ ಟೈಲರಿಂಗ್ ಶಾಪ್ಗೆ ಹೋಗಿದ್ದ ಅವರು ಕೆಲಸ ಮುಗಿಸಿ ಸಂಜೆ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಕಳ್ಳರು ಕಪಾಟನ್ನು ಕೀಯಿಂದ ತೆಗೆದು ಅದರಲ್ಲಿದ್ದ 1 ಪವನ್ ತೂಕದ ಚಿನ್ನದ ಚೈನ್ ಾಗೂ 1 ಪವನ್ ತೂಕದ ಒಂದು ಜತೆ ಚಿನ್ನದ ಕಿವಿ ಓಲೆ ಕಳವು ಮಾಡಿಕೊಂಡು ಹೋಗಿದ್ದಾರೆ ಎಂಬುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.