ಕಟೀಲ್.. ಸತ್ಯಜಿತ್.. ಚೌಟ.. ಪುತ್ತಿಲ ಯಾರಿಗೆ ಟಿಕೆಟ್?
– ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?
– ಬಿಜೆಪಿ ವಲಯದಲ್ಲಿ ಭಾರೀ ಚರ್ಚೆ
– ವಿಜಯೇಂದ್ರ ಬಳಿ ಬಿಜೆಪಿ ನಾಯಕರ ಮಹತ್ವದ ಸಭೆ
NAMMUR EXPRESS NEWS
ಮಂಗಳೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಿಜೆಪಿಯ ಅಭ್ಯರ್ಥಿಗಳ್ಯಾರು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಮೂರು ಬಾರಿ ಬಿಜೆಪಿಯಿಂದ ಗೆದ್ದ ನಳಿನ್ ಕುಮಾರ್ ಕಟೀಲ್ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗುತ್ತಾರಾ ಅಥವಾ ಹೊಸ ಅಭ್ಯರ್ಥಿ ಹಾಕುತ್ತಾರಾ ಎಂಬ ಕುತೂಹಲ ಮನೆ ಮಾಡಿದೆ. ನಳಿನ್ ಜತೆಗೆ ಇನ್ನು ಎರಡು ಮೂರು ಹೆಸರು ಓಡಾಡುತ್ತಿದೆ. ಬ್ರಿಜೇಶ್ ಚೌಟ, ಸತ್ಯಜಿತ್ ಸುರತ್ಕಲ್, ಅರುಣ್ ಕುಮಾರ್ ಪುತ್ತಿಲ ಹೆಸರುಗಳು ಕೇಳಿ ಬರುತ್ತಿವೆ.
ನಳಿನ್ ಕುಮಾರ್ ಕಟೀಲ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಆಕ್ರೋಶ ಹೆಚ್ಚಿರುವುದು, ರಾಜ್ಯಾಧ್ಯಕ್ಷರಾಗಿದ್ದ ವೇಳೆ ಪಕ್ಷ ವನ್ನು ಮತ್ತೆ ಅಧಿಕಾರಕ್ಕೆ ತರಲು ವಿಫಲವಾಗಿರುವುದು ಅವರ ಬಗ್ಗೆ ಇರುವ ಮೈನಸ್ ಪಾಯಿಂಟ್. ಮೂಲಗಳ ಪ್ರಕಾರ ಬ್ರಜೇಶ್ ಚೌಟ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬ್ರಿಜೆಶ್ ಚೌಟ ಅವರು ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿದ್ದು ಅವರಿಗೆ ಟಿಕೆಟ್ ಕೊಡಲು ಹೈಕಮಾಂಡ್ ಉತ್ಸುಕವಾಗಿದೆ ಎಂದು ತಿಳಿದುಬಂದಿದೆ. ಈ ವಿಚಾರ ತಿಳಿದ ಕರಾವಳಿ ಬಿಜೆಪಿ ಶಾಸಕರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿಯಾಗಿ ಬ್ರಜೇಶ್ ಚೌಟ ಬದಲು ಬಿಲ್ಲವ ಅಭ್ಯರ್ಥಿ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಇನ್ನು ಜನ ಮೆಚ್ಚುಗೆ ನಾಯಕರಾದ ಸತ್ಯಜಿತ್ ಸುರತ್ಕಲ್ ಅವರ ಹೆಸರು ಚಾಲ್ತಿಯಲ್ಲಿದೆ.