- ಮೂರು ತಾಲೂಕಲ್ಲಿ ಬಂದ್ ಘೋಷಿಸಿದ ಸಂಘಟನೆಗಳು
- ಹಿಂದೂ ನಾಯಕನ ಸಾವಿನ ತನಿಖೆ ಶುರು
- ಪೊಲೀಸ್ ತಂಡ ರಚನೆ: ಆರಗ ಜ್ಞಾನೇಂದ್ರ
NAMMUR EXPRESS NEWS
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ಎಂಬ ಬಿಜೆಪಿ ಯುವ ಮೋರ್ಚಾ ಮುಖಂಡನ ಹತ್ಯೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು (32) ಕೊಲೆಯಾದ ದುರ್ದೈವಿ. ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದರು. ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿಯನ್ನು ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.
ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದಾರೆ.ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಆರೋಪಿಗಳಿಗಾಗಿ ಬಲೆ ಬೀಸಿರುವ ಪೊಲೀಸರು ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿದ್ದಾರೆ. ನಾಕಾಬಂದಿ ಹಾಕಿ ಕೊಲೆ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿ:
ಪುತ್ತೂರಿನಲ್ಲಿ ಪ್ರವೀಣ್ ಹತ್ಯೆ ಹಿನ್ನಲೆ ಪರಿಸ್ಥಿತಿ ಬಿಗಡಾಯಿಸಿದ್ದು, ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿ ಮಾಡುವಂತೆ ಡಿಜಿ ಐಜಿಪಿ ಪ್ರವೀಣ್ ಸೂದ್ ರಿಂದ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಗೆ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಕಾನೂನು ಸಮಸ್ಯೆ ಆಗದಂತೆ ನೋಡಿಕೊಳ್ಳಲು ಹೇಳಲಾಗಿದೆ. ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಬೇಕಾದರೆ ಪಕ್ಕದ ಜಿಲ್ಲೆ ಅಥವಾ ಮಂಗಳೂರು ನಗರದಿಂದ ನಿಯೋಜನೆ ಮಾಡುವಂತೆ ಡಿಜಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಬೆಳ್ಳಾರೆಯಲ್ಲಿ ಮಸೂದ್ ಎಂಬ ಯುವಕನ ಕೊಲೆಯಾಗಿತ್ತು. ಕ್ಷುಲ್ಲಕ ಕಾರಣಕ್ಕೆ ಕಾಸರಗೋಡು ನಿವಾಸಿ ಮಸೂದ್(18) ಮೇಲೆ ಅಭಿಲಾಶ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ಎಂಬವರು ಹಲ್ಲೆ ನಡೆಸಿದ್ದರು. ಜು.19 ರಂದು ಸುಧೀರ್ ಎಂಬಾತ ಮಸೂದ್ ಕೈ ತಾಗಿದ ಕಾರಣಕ್ಕೆ ಹಲ್ಲೆ ನಡೆಸಿದ್ದ. ಆ ಬಳಿಕ ಸ್ಥಳೀಯ ಹನೀಫ್ ಎಂಬವನ ಮೂಲಕ ಮಸೂದ್ನನ್ನು ರಾಜಿ ಮಾತುಕತೆಗೆ ಕರೆದಿದ್ದಾರೆ. ಹೀಗಾಗಿ ಮಸೂದ್ ಸೂಚಿಸಿದ ಸ್ಥಳಕ್ಕೆ ಬಂದಿದ್ದ ವೇಳೆ ಬಾಟಲಿಯಿಂದ ತಲೆಗೆ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಿಸದೇ ಮಸೂದ್ ಸಾವನ್ನಪ್ಪಿದ್ದ. ಹೀಗಾಗಿ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಬಿಜೆಪಿ ಮುಖಂಡನ ಕೊಲೆ ಶಂಕೆ ವ್ಯಕ್ತವಾಗಿದೆ.
ಪ್ರವೀಣ್ ತಲೆಗೆ ತಲವಾರಿನಿಂದ ಮೂರು ಬಲವಾದ ಏಟು ಬಿದ್ದಿದೆ ಎನ್ನಲಾಗಿದೆ. ಹಂತಕರು ಆತನ ಬೆನ್ನಿಗೆ ಚೂರಿಯಿಂದ ಒಂದು ಬಾರಿ ಇರಿದಿದ್ದಾರೆ. ಸದ್ಯ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಂ ಮುಕ್ತಾಯವಾಗಿದ್ದು, ಬುಧವಾರ ಅಂತ್ಯಕ್ರಿಯೆ ನಡೆಯಲಿದೆ.
ಪ್ರವೀಣ್ ಅಂತಿಮ ಯಾತ್ರೆ ನಡೆಸಲು ಬಿಜೆಪಿ ಕಾರ್ಯಕರ್ತರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ತಯಾರಿ ನಡೆಸಿದ್ದಾರೆ. ಸರಕಾರಿ ಆಸ್ಪತ್ರೆಯಿಂದ ದರ್ಬೆ ಸರ್ಕಲ್ ಮೂಲಕ ಬೆಳ್ಳಾರೆಗೆ ಮೃತದೇಹ ತರಲು ನಿರ್ಧರಿಸಲಾಗಿದೆ. ಪಕ್ಷದ ಕಾರ್ಯಕರ್ತನ ಅಂತಿಮ ಯಾತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಏಳೂ ಶಾಸಕರು ಹಾಗೂ ಸಚಿವರು ಭಾಗಿಯಾಗಬೇಕೆಂದು ಹಿಂದೂ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.
ಹಿಂದೂ ಪರ ಸಂಘಟನೆಗಳು ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿದ್ದು ಇದೀಗ ಮುಂಜಾನೆ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ,ಸುಳ್ಯ ,ಕಡಬ ಉಪ್ಪಿನಂಗಡಿ , ಬೆಳ್ತಂಗಡಿ ನೆಲ್ಯಾಡಿ, ಈ ಭಾಗದಲ್ಲಿ ಸ್ವಯಂ ಬಂದ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ , ಜಾಗರಣ ವೇದಿಕೆ ವತಿಯಿಂದ ಜಂಟಿ ಕರೆ ನೀಡಲಾಗಿದೆ
ಪೊಲೀಸ್ ತಂಡ ರಚನೆ: ಶೀಘ್ರ ದುಷ್ಕರ್ಮಿಗಳ ಬಂಧನ
ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ. ಇಂತಹ ಅಮಾನವೀಯ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು, ಮೃತ ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಓಂ ಶಾಂತಿಃ
ಹಂತಕರನ್ನು ಪತ್ತೆ ಹಚ್ಚಲು ಈಗಾಗಲೇ ಪೊಲೀಸ್ ತಂಡ ಕಾರ್ಯಚರಣೆ ಕೈಗೊಂಡಿದೆ. ಈ ಸಂದರ್ಭದಲ್ಲಿ, ಸಾರ್ವಜನಿಕರು ಶಾಂತಿಯಿಂದ ವರ್ತಿಸಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸಹಕರಿಸಬೇಕೆಂದು ವಿನಂತಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
[9:47 PM, 7/27/2022] Shilpa S: ಕುರ್ಚಿ ಮಾತಿಗೆ ಕಾಂಗ್ರೆಸ್ ಪಕ್ಷದ ವರ್ಚಸ್ಸು ಡೌನ್!
- ಗೆಲ್ಲುವ ಮೊದಲೇ ನಾಯಕರ ಗೊಂದಲದ ಮಾತು
- ಬಿಜೆಪಿ ಸೇರಿ ಪ್ರತಿ ಪಕ್ಷದವರಿಗೆ ಪುಕ್ಕಟ್ಟೆ ಆಹಾರ
- ಕಾಂಗ್ರೆಸ್ ಪಕ್ಷದಲ್ಲಿ ಸರಿ ಇಲ್ಲ: ಕಾರ್ಯಕರ್ತರ ಬೇಸರ
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಹತ್ತಿರ ಬರುತ್ತಿದೆ. ಒಂದು ಕಡೆ ಬಿಜೆಪಿ ಸಂಘಟನೆ ಹಳ್ಳಿ ಹಳ್ಳಿ, ಬೂತ್ ಮಟ್ಟದಲ್ಲಿ ಗಟ್ಟಿಯಾಗಿದೆ. ಆದರೆ ಕಾಂಗ್ರೆಸ್ ನಾಯಕರು ತಮ್ಮ ಕಾಲು ತಾವು ಎಳೆದುಕೊಳ್ಳುತ್ತಲೇ, ಬೇಡದ ಹೇಳಿಕೆ ನೀಡಿ ಪಕ್ಷದ ವರ್ಚಸ್ಸಿಗೆ ಡ್ಯಾಮೇಜ್ ಮಾಡುತ್ತಲೇ ಚುನಾವಣೆಗೆ ಎದುರಾಗುತ್ತಿದ್ದಾರೆ.
ಹೈಕಮಾಂಡ್ ಕೂಡ ಧೈರ್ಯವಾಗಿ ಏನೂ ಹೇಳದ ಪರಿಸ್ಥಿತಿಯಲ್ಲಿದೆ. ಇದು ಸಧ್ಯಕ್ಕೆ ಬಿಜೆಪಿಗೆ ಪ್ಲಸ್ ಆಗಲಿದೆ.
ನಾಯಕರ ಈ ಗೊಂದಲ ಕಾರ್ಯಕರ್ತರು, ಮುಖಂಡರಿಗೆ ಇರುಸು ಮುರುಸು ಆಗಲು ಕಾರಣವಾಗಿದೆ.
ಸಿಎಂ ಕುರ್ಚಿಗೆ ಹಲವರ ಟವೆಲ್
ಬಿಜೆಪಿ ಕಾಲೆಳೆದಿದ್ದು ಹೀಗೆ!: ಕಾಣದ ಸಿಎಂ ಕುರ್ಚಿಗೆ ಕಾಂಗ್ರೆಸ್ ನಾಯಕರ ಮನ ಹಂಬಲಿಸುತ್ತಿದೆ. ಉತ್ಸವ, ವ್ಯಕ್ತಿಯಾರಾಧನೆ, ನಕಲಿ ಗಾಂಧಿ ಕುಟುಂಬದ ಋಣ ಸಂದಾಯದ ಮುಖೇನ ಸಿಎಂ ಕುರ್ಚಿಗೆ ಟವೆಲ್ ಹಾಕಿ ಕಾಯ್ದಿರಿಸುವ ಪ್ರಯತ್ನದಲ್ಲಿದ್ದಾರೆ ‘ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತು ಟ್ವಿಟ್ ಮಾಡಿರುವ ಬಿಜೆಪಿ, ನಾಲ್ಕು ಕಾಲಿನ ಸಿಎಂ ಕುರ್ಚಿಗೆ ಕಾಂಗ್ರೆಸ್ ಪಕ್ಷದ ಅಷ್ಟ ದಿಕ್ಕುಗಳಿಂದ ದಾಳಿಯಾಗುತ್ತಿದೆ ಎಂದು ಲೇವಡಿ ಮಾಡಿದೆ.
‘ಖಾಲಿ ಇರದ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರು ಕದನ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಸಭೆ ಸಮಾರಂಭಗಳ ಕುರ್ಚಿಗಳಷ್ಟೆ ಖಾಲಿ ಬಿದ್ದಿವೆ. ಕಾಂಗ್ರೆಸ್ಸಿಗರೇ, ನಿಮ್ಮೊಳಗೆ ಖಾಲಿ ಕುರ್ಚಿಗಳನ್ನು ಮೊದಲು ಭರ್ತಿ ಮಾಡಿಕೊಳ್ಳಿ’ ಎಂದು ಬಿಜೆಪಿ ಟ್ವಿಟಿಸಿದೆ.
ಕಾಂಗ್ರೆಸ್ ಪಕ್ಷದಲ್ಲಿ ಈಗ ಕುರ್ಚಿ ಕಲಹ ಪರ್ವ ಆರಂಭಗೊಂಡಿದೆ. ಒಂದೆಡೆ ಯುವ ಕಾಂಗ್ರೆಸ್ ಕಾರ್ಯಕರ್ತರು, ಚಿಕ್ಕಮಗಳೂರು ಚಿತ್ರದುರ್ಗದಲ್ಲಿ ಕುರ್ಚಿ ಹಿಡಿದು ಮಾರಾಮಾರಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಹಿರಿಯ ಕಾಂಗ್ರೆಸ್ ನಾಯಕರು, ಎಲ್ಲೆಂದರಲ್ಲಿ, ಮರಿಚೀಕೆ ಸಿಎಂ ಕುರ್ಚಿಗಾಗಿ ಕಾದಾಡುತ್ತಿದ್ದಾರೆ ಬಿಜೆಪಿ ಕುಟುಕಿದೆ.