ವಿಧಾನ ಪರಿಷತ್ ಫಲಿತಾಂಶ: ಕಿಶೋರ್ ಕುಮಾರ್ ಗೆಲುವು!
– ಕಿಶೋರ್ ಕುಮಾರ್ 3654, ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ 1757 ಮತ
– 1697 ಮತಗಳ ಅಂತರದಿಂದ ಗೆದ್ದು ಪರಿಷತ್ ಸದಸ್ಯರಾಗಿ ಆಯ್ಕೆ
– ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರ ಅಭಿನಂದನೆ
NAMMUR EXPRESS NEWS
ಉಡುಪಿ/ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಅತ್ಯಧಿಕ ಮತಗಳನ್ನು ಪಡೆದು ಗೆಲುವುಸಾಧಿಸಿದ್ದಾರೆ. ಗುರುವಾರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು 3654 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು 1757 ಮತ ಪಡೆದಿದ್ದಾರೆ. SDPI 195, ಪಕ್ಷೇತರ ಅಭ್ಯರ್ಥಿ 9 ಮತ ಗಳಿಸಿದ್ದಾರೆ. ಆ ಮೂಲಕ ಕಿಶೋರ್ ಕುಮಾರ್ 1697 ಮತಗಳ ಅಂತರದಿಂದ ಗೆದ್ದು ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಕೋಟಾ ಶ್ರೀನಿವಾಸ್ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಸಂಸದರಾದ ಬಳಿಕ ಅವರ ಸ್ಥಾನ ತೆರವಾಗಿತ್ತು. ಕಿಶೋರ್ ಕುಮಾರ್ ಅವರಿಗೆ ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರ ಅಭಿನಂದನೆ ಸಲ್ಲಿಸಿದ್ದಾರೆ.
ಕಿಶೋರ್ ಕುಮಾರ್ ಯಾರು?
ಎಂ.ಎ. ಸ್ನಾತಕೋತ್ತರ ಪದವೀಧರ ಕಿಶೋರ್, ವಿದ್ಯಾರ್ಥಿ ದೆಸೆಯಿಂದ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ವಿದ್ಯಾರ್ಥಿ ಜೀವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾದ ದ.ಕ. ಜಿಲ್ಲಾಧ್ಯಕ್ಷ, ಯುವ ಮೋರ್ಚಾದ ಕರ್ನಾಟಕ ರಾಜ್ಯ ಉಪಾಧ್ಯಕ್ಷ, ಮೆಸ್ಕಾಂ ನಾಮನಿರ್ದೇಶಿತ ಸದಸ್ಯರಾಗಿದ್ದ ಅವರು ಬಿಜೆಪಿ ದ.ಕ.ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರಿಗೆ ಶುಭಾಶಯಗಳು
ನಮ್ಮೂರ್ ಎಕ್ಸ್ ಪ್ರೆಸ್ ಮೀಡಿಯಾ
ಕರಾವಳಿ