ಕರಾವಳಿ ಟಾಪ್ ನ್ಯೂಸ್
ಕಾರ್ಕಳದ ಬೈಲೂರು ಸುತ್ತಮುತ್ತ ಚಿರತೆ ಕಾಟ!
* ಗುಂಡ್ಯ ಸಮೀಪ ಬೆಳ್ಳಂಬೆಳಗ್ಗೆ ಸರಣಿ ಅಪಘಾತ
* ಉಳ್ಳಾಲ: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ!
* ಮoಗಳೂರು: ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಜೈಲು
NAMMUR EXPRESS NEWS
ಮಂಗಳೂರು: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.
ಬೆಳಗಿನ ಜಾವ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ನಂತರ ಖಾಸಗಿ ಟೂರಿಸ್ಟ್ ಬಸ್ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ ಎನ್ನಲಾಗಿದೆ.
ಬೆಂಗಳೂರು ಕಾಲೇಜು ಖಾಸಗಿ ಬಸ್ ವಿದ್ಯಾರ್ಥಿಗಳಿದ್ದ ಚಾಲಕನ ನಿಯಂತ್ರಣ ಕೆಎಸ್ಆರ್ಟಿಸಿ ಬಸ್ಗೆ ಗುದ್ದಿದೆ.
ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆಗೆ ಉರುಳಿದೆ. ಗಾಯಾಳುಗಳಿಗೆ ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
* ಉಳ್ಳಾಲ : 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ
ಉಳ್ಳಾಲ: ಉಳ್ಳಾಲ ತಾಲೂಕಿನ ಬಾಳೆಪುಣಿ ಬಳಿಯ ಅಡಿಕೆ ಅಂಗಡಿಯೊಂದರ ಬಳಿ ಆಟವಾಡುತ್ತಿದ್ದ ಮೂರರ ಹರೆಯದ ಬಾಲಕಿಯೊಬ್ಬಳ ಮೇಲೆ 70ರ ಹರೆಯದ ವೃದ್ಧ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮೂಲತಃ ಪುತ್ತೂರು ನಿವಾಸಿ, ಪ್ರಸ್ತುತ ಮುದುಂಗಾರುಕಟ್ಟೆಯಲ್ಲಿ ವಾಸವಾಗಿರುವ ಅಬ್ದುಲ್ಲಾ (70) ಆರೋಪಿ. ಮಗುವು ಆಟವಾಡುತ್ತಿದ್ದಾಗ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದು, ಅಸ್ವಸ್ಥಗೊಂಡ ಮಗುವನ್ನು ಗಮನಿಸಿ ವೈದ್ಯಕೀಯ ತಪಾಸಣೆ ನಡೆಸಿದಾಗ ವಿಷಯ ಬಹಿರಂಗವಾಗಿದೆ ಎಂದು ಬಾಲಕಿಯ ತಾಯಿ ಕೊಣಾಜೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
* ಮoಗಳೂರು: ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ
ಮoಗಳೂರು: ಮನೆಗೆ ಟಿವಿ ನೋಡಲು ಬರುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬoಧಿಸಿದoತೆ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ಶಿಕ್ಷೆಗೊಳಗಾದ ಅಪರಾಧಿಯನ್ನು ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆಯ ಕೆ. ಸುಧೀರ್(27) ಎಂದು ಗುರುತಿಸಲಾಗಿದೆ.
ಈ 13 ವರ್ಷದ ಬಾಲಕಿಯು ಆರೋಪಿ ಸುಧೀರ್ನ ಮನೆಗೆ ರಜಾ ದಿನಗಳಲ್ಲಿ ಹಾಗೆಯೇ ಇತರ ದಿನಗಳಲ್ಲಿ ಟಿ.ವಿ. ನೋಡಲು ಬರುತ್ತಿದ್ದಳು. ಕೆಲವೊಂದು ಬಾರಿ ಸುಧೀರ್ ಮಾತ್ರ ಮನೆಯಲ್ಲಿರುತ್ತಿದ್ದ. ಹಾಗೆಯೇ 2021ನೇ ಡಿಸೆಂಬರ್ ನಲ್ಲಿ ಆರೋಪಿ ಮಾತ್ರ ಇದ್ದಾಗ ಬಾಲಕಿ ಟಿವಿ ನೋಡಲು ಬಂದಿದ್ದ ವೇಳೆ ಅಂಗಡಿಗೆ ಹೋಗಿ ಬರೋಣವೆಂದು ಹೇಳಿ, ಅಂಗಡಿಗೆ ಕರೆದುಕೊಂಡು ಹೋಗದೆ ಮನೆಯಿಂದ ಸ್ವಲ್ಪ ದೂರದಲ್ಲಿರುವ ಸುಧೀರ್ನ ಅಜ್ಜಿಯ ಯಾರೂ ವಾಸವಿಲ್ಲದ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಮತ್ತು ಸತ್ಯನಾರಾಯಣ ಕೆ. ಅವರು ತನಿಖೆ ಪೂರ್ಣಗೊಳಿಸಿ ಆರೋಪಿತರ ವಿರುದ್ಧ ಚಾರ್ಜ್ ಶೀಟ್ ಅನ್ನು ಕೋರ್ಟ್ ಗೆ ಸಲ್ಲಿಸಿದ್ದರು. ಸದ್ಯ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ಕಾರ್ಕಳದ ಬೈಲೂರು ಸುತ್ತಮುತ್ತ ಚಿರತೆ ಕಾಟ!
ಕಾರ್ಕಳ: ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈಲೂರು ಸಮೀಪದ ಪಳ್ಳಿ, ಕಣಂಜಾರ್, ರಂಗನಪಲ್ಕೆ ಎಲಿಯಾಲ್, ನಿಂಜೂರ್ ಪರಿಸರದಲ್ಲಿ ಚಿರತೆ ಹಾವಳಿಯಿಂದ ಜನರು ಭಯಭೀತರಾಗಿದ್ದಾರೆ. ಪಳ್ಳಿ ಮಾರುತಿನಗರ ಪರಿಸರದಲ್ಲಿ ಹಾಡಹಗಲೇ ಚಿರತೆ ಓಡಾಟ ನಡೆಸುತ್ತಿದ್ದು ಜನರು ಮನೆಯಿಂದ ಹೊರಬರಲು ಭಯ ಪಡುವಂತಾಗಿದೆ.
ಸಾಕು ನಾಯಿಗಳು ಚಿರತೆಗೆ ಆಹಾರವಾಗುತ್ತಿದ್ದು ಮೇಯಲು ಬಿಟ್ಟ ದನಗಳ ಮೇಲೂ ದಾಳಿ ನಡೆಸುತ್ತಿದೆ. ಇಷ್ಟೆಲ್ಲ ಆದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಹಿಡಿಯಲು ಮನಸ್ಸು ಮಾಡುತ್ತಿಲ್ಲ ಎಂದು ನಾಗರಿಕರು ಅಸಮಾಧಾನ ಹೊರಹಾಕಿದ್ದಾರೆ.
ಪಳ್ಳಿ, ಮಾರುತಿನಗರ, ಮಂಗಲ್ಲಿ ಮಠ ಪರಿಸರದಲ್ಲಿ ಚಿರತೆ . ಹಗಲಲ್ಲೇ ಜೋರಾಗಿ ಕೂಗುತ್ತ ಓಡಾಡುತ್ತಿರುವ ಕಾರಣ ಮಕ್ಕಳು ಮನೆಯಿಂದ ಹೊರ ಬಾರದಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಲು ಜನತೆ ಅಗ್ರಹಿಸಿದ್ದು ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.