8 ನೇ ವರ್ಷದ ಅದ್ದೂರಿ ಮಂಗಳೂರು ಕಂಬಳ..
– ರಾಮ ಲಕ್ಷ್ಮಣ ಜೋಡುಕೆರೆಯಲ್ಲಿ ಪಂದ್ಯಾಟ ಆಯೋಜನೆ
– ಸಂಸದ ಬ್ರಿಜೇಶ್ ಚೌಟಾ ಸಾರಥ್ಯದಲ್ಲಿ ನಡೆವ ಕಂಬಳ
NAMMUR EXPRESS NEWS
ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ.ಬ್ರಿಜೇಶ್ ಚೌಟ ಸಾರಥ್ಯದ ಬಂಗ್ರಕೂಳೂರಿನ ಗೋಲ್ಡಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ 8ನೇ ವರ್ಷದ ಮಂಗಳೂರು ಕಂಬಳಕ್ಕೆ ಶನಿವಾರ ಚಾಲನೆ ದೊರೆತಿದೆ. ಕಂಬಳಕ್ಕೆ ಕಾಶ್ಮೀರದ ರಚೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾ.ಎಂ.ವಿ. ಪ್ರಾಂಜಲ್ ಅವರ ತಂದೆ ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರು ಚಾಲನೆ ನೀಡಿದ್ದಾರೆ.