ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು!
– ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷ ಗಡಿಪಾರು
– ವಿವಿಧ ಪೊಲೀಸ್ ಠಾಣೆಯಲ್ಲಿ 32 ಕೇಸ್
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಮಂಗಳೂರು: ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳ ವಿರುದ್ಧ ಹೋರಾಟಕ್ಕೆ ಇಳಿದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ, ಸುಮಾರು 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದಕ್ಕೆ ಸಂಬಂಧಿಸಿದಂತೆ, ಆತನನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಆದೇಶವನ್ನು ಹೊರಡಿಸಲಾಗಿದೆ.
ಬೆಳ್ತಂಗಡಿ ಪೊಲೀಸರು ಈತನ ಪ್ರಕರಣಗಳ ಬಗ್ಗೆ ವರದಿ ನೀಡಿರುವ ಆಧಾರದ ಮೇಲೆ, ಪರಿಶೀಲನೆಯನ್ನು ನಡೆಸಿರುವ ಪುತ್ತೂರು ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್ ಅವರು ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಒಂದು ವರ್ಷಗಳ ಅವಧಿಗೆ ಗಡಿಪಾರು ಮಾಡಲು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಉಪವಿಭಾಗದ ಡಿವೈಎಸ್ ಪಿ ಅವರಿಗೆ ಆದೇಶ ಪ್ರತಿ ತಲುಪಿದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎನ್ನುವ ಸಂಗತಿ ತಿಳಿದುಬಂದಿದೆ.








