Categories
ಕರಾವಳಿ

ಮಲ್ಪೆ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣ,- ಇಬ್ಬರು ಪೊಲೀಸರ ಅಮಾನತು!

ಕರಾವಳಿ ಟಾಪ್ ನ್ಯೂಸ್

ಮಲ್ಪೆ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣ,- ಇಬ್ಬರು ಪೊಲೀಸರ ಅಮಾನತು!

– ಬೆಳ್ತಂಗಡಿ: ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರ ಸಾವು
– ಧರ್ಮಸ್ಥಳ: ಬೈಕ್‌ ಮತ್ತು ಬಸ್‌ ನಡುವೆ ಭೀಮಾ ಅಪಘಾತ; ಸವಾರ ಗಂಭೀರ ಗಾಯ!

NAMMUR EXPRESS NEWS
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ದಲಿತ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮತ್ತಿಬ್ಬರು ಆರೋಪಿಗಳಾದ ಲೀಲಾ ಮತ್ತು ಪಾರ್ವತಿ ಅವರನ್ನು ಮಲ್ಪೆ ಪೊಲೀಸರು ಬಂಧನ ಮಾಡಿದ್ದಾರೆ.
ಈ ಘಟನೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಡಿ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಸುರೇಶ್‌ ಹಾಗೂ ಕಾನ್‌ಸ್ಟೇಬಲ್‌ ನಾಗರಾಜ್‌ ಅವರನ್ನು ಅಮಾನತು ಮಾಡಲಾಗಿದೆ.
ಈಗಾಗಲೇ ಬಂಧಿತರಾದ ಲಕ್ಷ್ಮೀಬಾಯಿ, ಸುಂದರ್‌, ಮತ್ತು ಶಿಲ್ಪಾ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಐದು ಮಂದಿಯನ್ನು ಈ ಪ್ರಕರಣದಲ್ಲಿ ಬಂಧನ ಮಾಡಲಾಗಿದೆ.
ಈ ಪ್ರಕರಣವನ್ನು ರಾಜೀ ಸಂಧಾನದಲ್ಲಿ ಮುಗಿಸಲು ಪ್ರಯತ್ನ ನಡೆಯುತ್ತಿರುವ ಕುರಿತು ವರದಿಯಾಗಿದೆ. ಆದರೆ ಇದನ್ನು ಕಾನೂನಿನ ಚೌಕಟ್ಟಿನಲ್ಲಿ ಮಾತ್ರ ಮಾಡಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಈ ಘಟನೆ ಸಂಬಂಧ ಮಹಿಳಾ ಆಯೋಗ ಕೂಡಾ ಎಂಟ್ರಿ ನೀಡಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಲು ಸೂಚನೆ ನೀಡಲಾಗಿರುವ ಕುರಿತು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವರದಿ ಸಲ್ಲಿಸಲು ತಿಳಿಸಿದೆ.

– ಬೆಳ್ತಂಗಡಿ: ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರ ಸಾವು

ಬೆಳ್ತಂಗಡಿ: ಬೈಕಿನಲ್ಲಿ ಹೋಗುವಾಗ ಮರದ ಕೊಂಬೆ ಒಂದು ಯುವಕನ ಮೇಲೆ ಮುರಿದು ಬಿದ್ದು ಆತ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್‌ (25) ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್‌ ಪ್ರವೀಣ್ ಮೃತಪಟ್ಟ ಘಟನೆ ಫೆ. 20ರಂದು ರಾತ್ರಿಯ ವೇಳೆ ಸಂಭವಿಸಿದೆ.
ಮಂಗಳೂರಿನ ಖಾಸಗಿ ಬ್ಯಾಂಕ್‌ ಒಂದರಲ್ಲಿ ಲೋನ್ ಸೆಕ್ಷನಿನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್‌ ಅವರು ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

– ಧರ್ಮಸ್ಥಳ: ಬೈಕ್‌ ಮತ್ತು ಬಸ್‌ ನಡುವೆ ಭೀಮಾ ಅಪಘಾತ; ಸವಾರ ಗಂಭೀರ ಗಾಯ!

ಧರ್ಮಸ್ಥಳ: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮಾ.19 ರಂದು ಮಧ್ಯರಾತ್ರಿ ನಡೆದಿದೆ. ಕನ್ಯಾಡಿ ಸೇವಾ ಭಾರತಿ ಸಂಸ್ಥೆಯ ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಧಾವಿಸಿದ ಉಜಿರೆ ಧನ್ವಿ ಆಂಬುಲೆನ್ಸ್, ಸಹಾಯದ ಮೂಲಕ ಪ್ರಥಮ ಚಿಕಿತ್ಸೆಗೆಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಹಾಸನಕ್ಕೆ ಜನಪ್ರಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಹಾಸನದಿಂದ ಉಜಿರೆಗೆ ಪ್ರಯಾಣ ಮಾಡುತ್ತಿರುವ ಪಲ್ಸರ್ ಬೈಕ್ ಸವಾರ ಮಂಜುನಾಥ್ ಹಾಗೂ ಉಜಿರೆ ಕಡೆಯಿಂದ ಬೆಂಗಳೂರಿಗೆ ಪ್ರಯಾಣ ವಿಜಯಾನಂದ ಬಸ್ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್ ಸಂಪೂರ್ಣ ಹಾನಿ, ಜೊತೆಗೆ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.