ಕರಾವಳಿ ಟಾಪ್ ನ್ಯೂಸ್
ಮಂಗಳೂರು: ರಸ್ತೆಯಲ್ಲೇ ಹೊತ್ತಿ ಉರಿದ ಕಾರು!
– ಶಿವಮೊಗ್ಗದಿಂದ ಮಂಗಳೂರಿಗೆ ಗೋ ಸಾಗಾಟ
– ಅರ್ಜುನ್ ಮೃತದೇಹಕ್ಕೆ ಕರಾವಳಿ ಜನರ ನಮನ
NAMMUR EXPRESS NEWS
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಇದ್ದಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಸಂಭವಿಸಿದೆ.
ಶನಿವಾರ ಮಧ್ಯಾಹ್ನದ ಹೊತ್ತಿಗೆ ಘಟನೆ ಸಂಭವಿಸಿದ್ದು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾರು ಚಾಲಕ ಕಾರನ್ನು ನಿಲ್ಲಿಸಿದ್ದು ಕೂಡಲೇ ಕಾರಿನಲ್ಲಿದ್ದವರು ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ.ಬೆಂಕಿ ಅವಘಡದಿಂದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ
ಶಿವಮೊಗ್ಗದಿಂದ ಮಂಗಳೂರಿಗೆ ಗೋಸಾಗಾಟ!
ಮಂಗಳೂರು: ಶಿವಮೊಗ್ಗದಿಂದ ಮಂಗಳೂರಿಗೆ ಸಾಗಿಸುತ್ತಿದ್ದ 30 ಕ್ಕೂ ಹೆಚ್ಚು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ರಕ್ಷಣೆ ಮಾಡಿದ ಘಟನೆ ಶುಕ್ರವಾರ ರಾತ್ರಿ ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಬಳಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಿಂದ ಕ್ಯಾಂಟರ್ ಮೂಲಕ ಒಂದೇ ವಾಹನದಲ್ಲಿ 30 ಕ್ಕೂ ಹೆಚ್ಚು ಜಾನುವಾರುಗಳು ಸಾಗಾಟವಾಗುತ್ತಿತ್ತು. ಎಮ್ಮೆ, ಎತ್ತು, ಹೋರಿ ಸೇರಿದಂತೆ 30 ಕ್ಕೂ ಹೆಚ್ಚು ಜಾನುವಾರುಗಳು ಕ್ಯಾಂಟರ್ ನಲ್ಲಿದ್ದವು. ಈ ವೇಳೆ ದಾಳಿ ಮಾಡಿ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕ್ಯಾಂಟರ್ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು ಶುಕ್ರವಾರ ರಾತ್ರಿ ಶಿವಮೊಗ್ಗ ಜಯನಗರ ಪೊಲೀಸ್ ಠಾಣೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಕ್ಷಣೆ ಮಾಡಿದ ಗೋವುಗಳನ್ನು ಮಹಾವೀರ ಗೋಶಾಲೆಗೆ ರವಾನೆ ಮಾಡಲಾಗಿದೆ.
ಅರ್ಜುನ್ ಮೃತದೇಹಕ್ಕೆ ಕರಾವಳಿ ಜನರ ನಮನ
ಉಳ್ಳಾಲ: ಶಿರೂರು ದುರಂತದಲ್ಲಿ ಮೃತಪಟ್ಟ ಕೇರಳ ಕಲ್ಲಿಕೋಟೆ ಮೂಲದ ಅರ್ಜುನ್ ಮೃತದೇಹ 73 ದಿನಗಳ ಪತ್ತೆಯಾಗಿದ್ದು l. ಡಿಎನ್ಎ ವರದಿ ಸಾಬೀತಾಗಿ ಶುಕ್ರವಾರ ತಡರಾತ್ರಿ ಅವರ ಮೃತದೇಹ ಕೇರಳದ ಕಲ್ಲಿಕೋಟೆಯ ಮನೆಗೆ ರವಾನೆಯಾಗುತ್ತಿರುವ ಸಂದರ್ಭ ಗಡಿಭಾಗ ತಲಪಾಡಿಯಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನಸ್ತೋಮ ಸೇರಿ ಮೃತದೇಹದ ಅಂತಿಮ ದರ್ಶನ ಪಡೆದುಕೊಂಡರು. ಶುಕ್ರವಾರ ಸಂಜೆ ಅಂಕೋಲಾದಿಂದ ಫ್ರೀಝರ್ ಆ್ಯಂಬುಲೆನ್ಸ್ನಲ್ಲಿ ಅರ್ಜುನ್ ಅಂತಿಮ ಯಾತ್ರೆ ನಡೆದಿದೆ. ಕರ್ನಾಟಕ ಕೇರಳದ ತಲಪಾಡಿಯ ಗಡಿಭಾಗ ತಲುಪುವಾಗ ತಡರಾತ್ರಿ 2ಗಂಟೆಯಾಗಿತ್ತು. ಈ ವೇಳೆ ಮಂಜೇಶ್ವರ ಮತ್ತು ಕಾಸರಗೋಡು ವಿಧಾನಸಭಾ ಕ್ಷೇತ್ರದ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಸದಸ್ಯರನ್ನು ಒಳಗೊಂಡಂತೆ ಹೆಚ್ಚಿನ ಸಂಖ್ಯೆಯಲ್ಲಿ ಕೇರಳ ನಿವಾಸಿಗಳು ಜಮಾಯಿಸಿದ್ದರು. ಟೋಲ್ ಬೂತ್ ದಾಟಿದ ಬಳಿಕ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು. ಎಲ್ಲರೂ ಅಂತಿಮ ದರ್ಶನ ಪಡೆದುಕೊಂಡು ಗೌರವ ಸಲ್ಲಿಸಿದರು.
ಇದೇ ವೇಳೆ ಆ್ಯಂಬುಲೆನ್ಸ್ ನಲ್ಲಿದ್ದ ಸಮಾಜಸೇವಕ, ಅರ್ಜುನನಿಗಾಗಿ ಜೀವದ ಹಂಗು ತೊರೆದು ನದಿಯಾಳಕ್ಕೆ ಮುಳುಗಿ ಮೃತದೇಹವನ್ನು ಹುಡುಕಾಡಿದ ಆಪದ್ಬಾಂಧವ ಈಶ್ವರ್ ಮಲ್ಪೆ ಅವರಿಗೂ ಗಡಿಭಾಗದ ಜನತೆ ಕೃತಜ್ಞತೆಗಳನ್ನು ಸಲ್ಲಿಸಿದರು.