Categories
ಕರಾವಳಿ

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ಸಾಲ

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ಸಾಲ
– 2,11,89,800 ರೂ. ಸಾಲ ಪಡೆದು, ಮೋಸ
– ಸಿದ್ದಿಕ್, ಬ್ಯಾಂಕ್ ಆಡಳಿತ ಮಂಡಳಿ, ನೌಕರರ ವಿರುದ್ಧ ಪ್ರಕರಣ

NAMMUR EXPRESS NEWS
ಮಂಗಳೂರು: 500ಕ್ಕೂ ಅಧಿಕ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಒಬ್ಬ ವ್ಯಕ್ತಿ ಮಂಗಳೂರು ಸಮಾಜ ಸೇವಾ ಸಹಕಾರಿ ಸಂಘದಿಂದ 2 ಕೋಟಿ ಅಧಿಕ ಸಾಲ ಪಡೆದ ಘಟನೆ ನಡೆದಿದ್ದು, ಇದೀಗ ವಂಚನೆ ಬೆಳಕಿಗೆ ಬಂದಿರುವ ಆರೋಪಿ ಪರಾರಿಯಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್ ಸಿದ್ದಿಕ್, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರು ಸೆನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜ ಸೇವಾ ಸಹಕಾರಿ ಸಂಘ ಜಿಲ್ಲೆಯಲ್ಲಿ ಹಲವು ಶಾಖೆಗಳನ್ನು ಹೊಂದಿದೆ. ಈ ಅವ್ಯವಹಾರದ ಆರೋಪ ಕೇಳಿ ಬಂದಿರುವುದು ಮಂಗಳೂರು ಪಡೀಲ್ನ ಶಾಖೆಯಲ್ಲಿ ಚಿನ್ನ ಪರೀಕ್ಷೆ ನಡೆಸುವ ಸರಪ, ಬ್ಯಾಂಕ್ ಅಧ್ಯಕ್ಷ, ನಿರ್ದೇಶಕರು ಮ್ಯಾನೇಜರ್, ಸಿಬ್ಬಂದಿ ಸಹಕಾರದಿಂದ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಈ ಬಗ್ಗೆ ಬ್ಯಾಂಕ್‌ ಸದಸ್ಯರು, ಮಾಜಿ ನಿರ್ದೇಶಕ ಡಿ.ಲೋಕನಾಥ್ ದೂರಿನ 28 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಬ್ಯಾಂಕ್ ಸಂಬಂಧದ ಸರಪ ವಿವೇಕ್ಆ ಚಾರ್ಯನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ಅಬೂಬಕ್ಕರ್ ಸಿದ್ದಿಕ್ಕಾಗಿ ಹುಡುಕಾಟ ಮುಂದುವರೆದಿದೆ. ತನಿಖೆ ನಡೆಯುತ್ತಿದೆ. ಇನ್ನು ಈ ಪ್ರಕರಣಕ್ಕೆ ಬ್ಯಾಂಕ್ ಸ್ಪಷ್ಟನೆ ನೀಡಿದ್ದು, ನಮ್ಮ ಸಂಘದಲ್ಲಿ ಇಂತಹ ಘಟನೆ ಸುಳ್ಳು ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಘಟನೆಯ ಬಗ್ಗೆ ನಾವು ಕಾನೂನು ರೀತಿಯಲ್ಲಿ ಎಲ್ಲಾ ಕ್ರಮಕೈಗೊಂಡಿದ್ದೇವೆ. ಯಾರ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕು ಅದನ್ನು ಕೂಡ ನಮ್ಮ ಸಂಘದ ಆಡಳಿತ ಮಂಡಳಿಯ ಸಭೆ ಕರೆದು ತೀರ್ಮಾನಿಸಲಾಗಿದೆ. ಮುಂದೆ ನಡೆಯುವ ಚುನಾವಣೆಯ ದೃಷ್ಟಿಯಿಂದ ಇಂತಹ ಕೃತ್ಯಗಳನ್ನು ಮಾಡಲಾಗುತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.