ಕರಾವಳಿ ಟಾಪ್ ನ್ಯೂಸ್
ಮಂಗಳೂರು: ತನ್ನ ಮರ್ಮಾಂಗವನ್ನು ತಾನೇ ಕೊಯ್ದು ವ್ಯಕ್ತಿ ಸಾವು!
– ಮಂಗಳೂರು: ಫೇಸ್‌ಬುಕ್ ಗೆಳೆಯನ ಗಿಫ್ಟ್ ಆಸೆಗೆ 7.10 ಲಕ್ಷ ರೂ. ಕಳೆದುಕೊಂಡ ಮಹಿಳೆ!
– ಉಳ್ಳಾಲದಲ್ಲಿ ಸರಣಿ ಅಪಘಾತ- ಐದು ವಾಹನಗಳಿಗೆ ಡಿಕ್ಕಿ ಹೊಡೆದ ಕಾಲೇಜು ಬಸ್
NAMMUR EXPRESS NEWS
ಮಂಗಳೂರು: ಕುಡಿದ ಮತ್ತಿನಲ್ಲಿ ತನ್ನ ಮರ್ಮಾಂಗವನ್ನು ತಾನೇ ಕೊಯ್ದುಕೊಂಡು ಸಾವನ್ನಪ್ಪಿದ ವಿಚಿತ್ರ ಘಟನೆ ಬ್ರಹ್ಮಾವರ ತಾಲ್ಲೂಕಿನ ಬಾರ್ಕೂರಿನ ಕಚ್ಚೂರಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬಾರ್ಕೂರಿನ ಕಚ್ಚೂರು ಗ್ರಾಮದ ಸಂತೋಷ್ (42) ಎಂದು ಗುರುತಿಸಲಾಗಿದೆ.
ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದ ಸಂತೋಷ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು.ಆದ್ದರಿಂದ ಕೆಲಸಕ್ಕೂ ಹೋಗದೆ ಮನೆಯಲ್ಲೇ ಇರುತ್ತಿದ್ದರು.
ಮನೆಯ ಬಾತ್ ರೂಮಿನಲ್ಲಿ ರಕ್ತ ಸಿಕ್ತರಾಗಿ ಬಿದ್ದುಕೊಂಡಿದ್ದ ಸಂತೋಷ್ ಮರ್ಮಾಂಗದಿಂದ ರಕ್ತ ಸುರಿಯುತ್ತಿತ್ತು. ಕೂಡಲೇ ಚಿಕಿತ್ಸೆಗೆ ಬ್ರಹ್ಮಾವರದ ಸರಕಾರಿ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಸಂತೋಷ ಅವರು ಮೃತಪಟ್ಟಿರುವುದಾಗಿ ತಿಳಿಸಿದರು.
ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
– ಮಂಗಳೂರು: ಫೇಸ್‌ಬುಕ್ ಗೆಳೆಯನ ಗಿಫ್ಟ್ ಆಸೆಗೆ 7.10 ಲಕ್ಷ ರೂ. ಕಳೆದುಕೊಂಡ ಮಹಿಳೆ!
ಮಂಗಳೂರು: ಫೇಸ್‌ಬುಕ್ ಖಾತೆಯೊಂದರಿಂದ ಬಂದ ಮೆಸೇಜ್ ನಂಬಿ ಮಹಿಳೆಯೊಬ್ಬರು 7.10 ಲಕ್ಷ ರೂ. ಕಳೆದುಕೊಂಡು ಮೋಸ ಹೋಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರೆಗೆ ಡಾ| ತುಷಾರ್ ಪಾಟೀಲ್ ಎನ್ನುವ ಹೆಸರಿನ ಫೇಸ್‌ಬುಕ್ ಖಾತೆಯಿಂದ ಹಾಯ್ ಎನ್ನುವ ಮೆಸೇಜ್ ಬಂದಿದ್ದು, ತಾನು ಯು ಹೆಲ್ತ್ ಮಿಯಾಮಿ ಫ್ಲೋರಿಡಾದಲ್ಲಿ ನ್ಯೂರೋರಜಿಸ್ಟ್ ಆಗಿದ್ದೇನೆ. ಮದುವೆ ಅಗಿ ವಿಚ್ಛೇದನವಾಗಿದ್ದು, ಒಂದು ಮಗುವಿದೆ ಎಂದು ತಿಳಿಸಿದ್ದ. ಬಳಿಕ ವಾಟ್ಸಾಪ್ ಸಂಖ್ಯೆ ಪಡೆದು ಅದಕ್ಕೆ ಮೆಸೇಜ್ ಮಾಡಿ, ನಿಮ್ಮ ಸ್ನೇಹಕ್ಕಾಗಿ ಗಿಫ್ಟ್ ಆಗಿ ಪ್ಲಾಟಿನಂ ವಾಚ್, ಡೈಮಂಡ್, ಲ್ಯಾಪ್‌ಟಾಪ್, ಐಫೋನ್, 90 ಸಾವಿರ ಯುಎಸ್ ಡಾಲರ್ ಹಾಗೂ ಬಂಗಾರ ಕಳುಹಿಸಿಕೊಡುತ್ತೇನೆ. ವಿಮಾನ ನಿಲ್ದಾಣದಿಂದ ಕರೆ ಬರಲಿದೆ ಎಂದು ತಿಳಿಸಿದ್ದಾನೆ.
ಅದರಂತೆ ಮರುದಿನ ಕರೆ ಬಂದಿದ್ದು, ಕರೆ ಮಾಡಿದವರು ಡಾ| ತುಷಾರ್ ಪಾಟೀಲ್ ಅವರಿಂದ ಗಿಫ್ಟ್ ಬಂದಿದೆ. ಸೆಕ್ಯೂರಿಟಿ ಡಿಪಾಸಿಟ್ ಹಾಗೂ ಲಾಂಡರಿಂಗ್ ಕ್ಲಿಯರೆನ್ಸ್‌ಗಾಗಿ ಹಣ ಕಳುಹಿಸುವಂತೆ ತಿಳಿಸಿದ್ದಾರೆ. ಇದನ್ನು ನಂಬಿ ವಿವಿಧ ಖಾತೆಗಳಿಗೆ 7.10 ಲಕ್ಷ ರೂ. ವರ್ಗಾಯಿಸಿದ್ದಾರೆ. ಆದರೆ ಗಿಫ್ಟ್ ನೀಡದೆ ವಂಚನೆ ಮಾಡಿದ್ದಾರೆ ಎಂದು ಪಾಂಡೇಶ್ವರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
– ಉಳ್ಳಾಲದಲ್ಲಿ ಸರಣಿ ಅಪಘಾತ- ಐದು ವಾಹನಗಳಿಗೆ ಡಿಕ್ಕಿ ಹೊಡೆದ ಕಾಲೇಜು ಬಸ್
ಮಂಗಳೂರು: ಮಾ. 17ರಂದು ಸಂಜೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ತಿಬ್ಲಪದವು ಎಂಬಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾಲೇಜು ಬಸ್ ಒಂದು ಕಾರು ಮತ್ತು ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಇನೋಲಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬಸ್, ತಿಬ್ಲಪದವು ಬಳಿ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್, ಆ ಸಮಯದಲ್ಲಿ ನಿಲ್ಲಿಸಿದ್ದ ವಾಹನಗಳಲ್ಲಿ ಯಾರೂ ಇರಲಿಲ್ಲ, ಇದರಿಂದಾಗಿ ಸಾವುನೋವುಗಳು ತಪ್ಪಿದವು.
ಇದಕ್ಕೂ ಮೊದಲು, ತಿಬ್ಲಪದವು ಬಳಿ ಬೈಕ್ ಸ್ಕಿಡ್ ಆಗಿ, ಸವಾರ ಗಾಯಗೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತದ ಸ್ಥಳದಲ್ಲಿ ಜನರು ಜಮಾಯಿಸಿ, ರಸ್ತೆಬದಿಯಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿದಾಗ, ಬಸ್ ನಿಯಂತ್ರಣ ತಪ್ಪಿ, ಒಂದು ಕಾರು ಮತ್ತು ಎರಡು ಮೋಟಾರ್ ಸೈಕಲ್‌ಗಳ ನಡುವೆ ಸರಣಿ ಡಿಕ್ಕಿ ಹೊಡೆದಿದೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.