ಮಿಯ್ಯಾರು ಲವ-ಕುಶ ಕಂಬಳ
– ಜೋಡುಕರೆ ಕಂಬಳಕ್ಕೆ ಕ್ಷಣಗಣನೆ
– ಅದ್ಧೂರಿ ಕಂಬಳದ ವಿವರ ಇಲ್ಲಿದೆ
NAMMUR EXPRESS NEWS
ಕಾರ್ಕಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದೊಡ್ಡ ಕಂಬಳ ಎಂಬ ಹೆಗ್ಗಳಿಕೆ ಹೊಂದಿದ ಕಾರ್ಕಳ ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ ಇದೇ ಶನಿವಾರ ಹಾಗೂ ಭಾನುವಾರ ಅದ್ಧೂರಿಯಾಗಿ ಜರುಗಲಿದೆ. ರಾಜ್ಯದಲ್ಲೆ ಸುಸಜ್ಜಿತವಾಗಿ ನಡೆಯುವ ಮಿಯ್ಯಾರು ಕಂಬಳಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು ಕಂಬಳವನ್ನು ನೋಡಲು ಬರುವ ಪ್ರೇಕ್ಷಕರಿಗೆ ಯೋಗ್ಯವಾದ ಗ್ಯಾಲರಿಗಳು, ಚಾವಡಿಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಅಷ್ಟೇ ಅಲ್ಲದೆ ಕಂಬಳವನ್ನು 24 ಗಂಟೆಯ ಒಳಗೆ ಮುಗಿಯುವಂತೆ ಮಾಡಲು ಪ್ರಯತ್ನ ಮಾಡಲಾಗಿದೆ.
ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳದ ಕಾರ್ಯಕ್ರಮದ ವಿವರ ಇಲ್ಲಿದೆ:
ಉದ್ಘಾಟನೆ : ಬೆಳಗ್ಗೆ 8 ಗಂಟೆಗೆ ಶಾಸಕ, ಕಂಬಳ ಸಮಿತಿ ಅಧ್ಯಕ್ಷ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರಿದಾಸ್ ಭಟ್, ಮಿಯ್ಯಾರು ಚರ್ಚ್ ಧರ್ಮಗುರು ಪಾವುಲ್ ರೇಗೋ, ಮಿಯ್ಯಾರು ಜಾಮೀಯಾ ಮಸೀದಿ ಧರ್ಮಗುರು ಮೌಲಾನಾ ರಾಜಿಕ್ ಅಹಮದ್ ಹಾಗೂ ಮಿಯ್ಯಾರು ಗ್ರಾ. ಪಂ. ಅಧ್ಯಕ್ಷೆ ಸನ್ಮತಿ ನಾಯಕ್ ಉಪಸ್ಥಿತರಿರುತ್ತಾರೆ.
ಸಭಾ ಕಾರ್ಯಕ್ರಮ:
ಸಂಜೆ 7ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಎಸ್. ಎಲ್.ಭೋಜೇಗೌಡ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಗಳ ಇಲಾಖೆಯ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಂಡಲದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸೇರಿದಂತೆ ಜನಪ್ರತಿನಿಧಿಗಳು, ಇಲಾಖಾ ಅಧಿಕಾರಿಗಳು, ಉದ್ಯಮಿಗಳು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ.
ಬಹುಮಾನ ವಿತರಣೆ:
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಬೆಂಗಳೂರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಬಹುಮಾನ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಸುನಿಲ್ ಕುಮಾರ್, ಮಿಯ್ಯಾರು ಕಂಬಳ ಸಮಿತಿ ಕಾರ್ಯಾಧ್ಯಕ್ಷ ಜೀವನದಾಸ್ ಅಡ್ಯಂತಾಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್ ಉಪಸ್ಥಿತರಿರುವರು.
ಕೋಣಗಳನ್ನು ಗದ್ದೆಗೆ ಇಳಿಸುವ ಸಮಯ :
ನೇಗಿಲು ಕಿರಿಯ – ಬೆಳಿಗ್ಗೆ 8 ಗಂಟೆ
ನೇಗಿಲು ಹಿರಿಯ- ಮಧ್ಯಾಹ್ನ 12.30ಕ್ಕೆ
ಹಗ್ಗ ಹಿರಿಯ ಮತ್ತು ಕಿರಿಯ – ಮಧ್ಯಾಹ್ನ 3ಗಂಟೆಗೆ
ಕನೆ ಹಲಗೆ ಮತ್ತು ಅಡ್ಡ ಹಲಗೆ – ಸಂಜೆ 4.30ಕ್ಕೆ.