ಮೋದಿ ಪ್ರಮಾಣ: ಮಂಗಳೂರಲ್ಲಿ ವಿಜಯೋತ್ಸವ
– ಸಮಸ್ತ ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಸ್ವಾಗತ
– ದಕ್ಷಿಣ ಕನ್ನಡ ಬಿಜೆಪಿ ಕಚೇರಿಯಲ್ಲಿ ಸಂಭ್ರಮಕ್ಕೆ ಸಜ್ಜು
NAMMUR EXPRES NEWS
ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಜೂನ್ 9 ಭಾನುವಾರ ಸಂಜೆ 6.00 ಘಂಟೆಗೆ ಬಿಜೆಪಿ ಜಿಲ್ಲಾ ಕಾರ್ಯಾಲಯ ಪಿ. ವಿ.ಎಸ್ ಬಳಿ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ.
ಪಕ್ಷದ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಮೋರ್ಚಾಗಳ ಪದಾಧಿಕಾರಿಗಳು, ಸದಸ್ಯರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಪ್ರಮುಖರು, ಪ್ರಕೋಷ್ಠಗಳ ಪ್ರಮುಖರು, ಬೂತ್ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತ ಬಂಧುಗಳು, ಹಿತೈಷಿಗಳು, ಅಭಿಮಾನಿಗಳು ನಮ್ಮ ನೆಚ್ಚಿನ ನಾಯಕ ನರೇಂದ್ರ ಮೋದಿಯವರು ತೃತೀಯ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಐತಿಹಾಸಿಕ ಕ್ಷಣದ ವಿಜಯೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ ಮಾಡಲಾಗಿದೆ.