ದಕ್ಷಿಣ ಕನ್ನಡ ನಿರ್ಮಾಣಕ್ಕೆ ದೇವರ ಆಶೀರ್ವಾದ ಪಡೆದ ಸಂಸದ ಚೌಟ
– ದೇವರ ಆಶೀರ್ವಾದ ಪಡೆದು ಅಭಿವೃದ್ಧಿ ಕೆಲಸಕ್ಕೆ ಪ್ಲಾನ್
– ದಾರಿಯುದ್ಧಕ್ಕೂ ಕಾರ್ಯಕರ್ತರಿಂದ ಚೌಟರವರಿಗೆ ಜೈಕಾರ
NAMMUR EXPRESS NEWS
ದೇಶದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ವಿವಿಧ ಖಾತೆಗಳನ್ನು ಪಡೆದಿರುವ ಸಚಿವರು ಕೂಡ ಅಧಿಕಾರ ವಹಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಇದೀಗ ಮೋದಿ ಸಚಿವ ಸಂಪುಟದ ಪ್ರಮಾಣ ವಚನದಲ್ಲಿ ಭಾಗವಹಿಸಿದ್ದ ದಕ್ಷಿಣ ಕನ್ನಡದ ಸಂಸದ ಬಿಜೇಶ್ ಚೌಟ ಅವರು ಕ್ಷೇತ್ರಕ್ಕೆ ವಾಪಾಸ್ ಆಗಿದ್ದು, ಮಂಗಳವಾರ ಮಂಗಳೂರು ನಗರದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಹತೋಭಾರ ಮಂಗಳಾದೇವಿ ದೇವಸ್ಥಾನ, ಉರ್ವ ಶ್ರೀ ಮಹಾಗಣಪತಿ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ, ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ, ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದಾರೆ.
ದಾರಿಯುದ್ಧಕ್ಕೂ ಸ್ಥಳೀಯ ಕಾರ್ಯಕರ್ತರು ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ ಜೈಕಾರ ಹಾಕುವ ಮೂಲಕ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪಾರ್ಟಿಯ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.