ಅಯ್ಯೋ ದೇವ್ರೇ ಮಳೆ ಮಳೆ: ಅಡಿಕೆ ಬೆಳೆ ನಷ್ಟ!
– ಮಲೆನಾಡು, ಕರಾವಳಿ, ಮಧ್ಯ ಕರ್ನಾಟಕ ರೈತರಿಗೆ ಎಫೆಕ್ಟ್
– ಕೊಳೆ ಜಾಸ್ತಿಯಾಗಿ ಉದುರುತ್ತಿರುವ ಅಡಿಕೆ
NAMMUR EXPRESS NEWS
ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ನಡುವೆ ಮಲೆನಾಡು ಮತ್ತು ಕರಾವಳಿ, ಚಿತ್ರದುರ್ಗ, ದಾವಣಗೆರೆ ಭಾಗದಲ್ಲಿ ಅಡಿಕೆ ಮೇಲೆ ಮಳೆ ಪರಿಣಾಮ ಬೀರಲಿದೆ. ಈಗಾಗಲೇ ಅಡಿಕೆ ಕೊಳೆ ಹೆಚ್ಚಾಗಿದ್ದು ರೋಗದಿಂದ ಉದುರುತ್ತಿದೆ. ಹಾಗಾಗಿ ರೈತ ಮಳೆ ಬೇಡಪ್ಪ ಅನ್ನುವ ಸ್ಥಿತಿಗೆ ಬಂದಿದ್ದಾನೆ.
ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡು ಭಾಗದ ಹಾಸನ, ಕೊಡಗು ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಗುಡುಗು ಜೋರು ಮಳೆ!
ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ.
ರೆಡ್ ಅಲರ್ಟ್ ಘೋಷಣೆ!
ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ನೀಡಲಾಗಿದೆ.