Categories
ಕರಾವಳಿ

ಜನವರಿ 22ಕ್ಕೆ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋಗೆ ಚಾಲನೆ

ಸಿರಿಧಾನ್ಯದ ಬಳಕೆಯಿಂದ ಯಾವ ರೀತಿಯ ಉತ್ತಮ ಆರೋಗ್ಯವನ್ನು ಹೊಂದಬಹುದು?
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ್ ಅವರಿಂದ ಮಾಹಿತಿ!

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜನವರಿ 22ರಂದು ನಡೆದ ಜಿಲ್ಲಾ ಮಟ್ಟದ ಸಿರಿಧಾನ್ಯ ಶೋ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಮಲ್ಪೆ ಪೊಲೀಸ್ ಠಾಣೆಯ ಬಳಿ ಚಾಲನೆ ನೀಡಿದರು.
ಇದೇ ಸಂಧರ್ಭದಲ್ಲಿ ಮಾತನಾಡಿದ ಅವರು, ಸಿರಿಧಾನ್ಯದ ಬಳಕೆಯಿಂದ ಯಾವ ರೀತಿಯ ಉತ್ತಮ ಆರೋಗ್ಯವನ್ನು ಹೊಂದಬಹುದು, ಅವುಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳಬೇಕು. ಸಿರಿಧಾನ್ಯಗಳು ಉತ್ತಮ ಪೋಷಕಾಂಶವುಳ್ಳ ಆಹಾರವಾಗಿರುವುದರಿಂದ ಇದರ ಸೇವನೆಯ ಜೊತೆಗೆ ಸಿರಿಧಾನ್ಯಗಳನ್ನು ಬೆಳೆಯಲು ರೈತರು ಮುಂದಾಗಬೇಕು ಎಂಬುಹುದರ ಬಗ್ಗೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ವಿಜಯ್ ಕೊಡವೂರು, ಅಪರ ಜಿಲ್ಲಾಧಿಕಾರಿ ನಾಗರಾಜ ವಿ ನಾಯಕ್, ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ, ಉಪ ಕೃಷಿ ನಿರ್ದೇಶಕ ಚಂದ್ರಶೇಖರ ನಾಯಕ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಲಿ, ಮಲ್ಪೆ ಪೊಲೀಸ್ ಠಾಣೆಯ ಪಿ.ಎಸ್.ಐ ರವಿ, ಕೆ.ವಿ.ಕೆ ಮುಖ್ಯಸ್ಥ ಧನಂಜಯ, ಕೃಷಿಕ ಸಂಘದ ರಾಜ್ಯ ಪ್ರತಿನಿಧಿ ಪ್ರದೀಪ್ ಹೆಬ್ಬಾರ, ಬೈಂದೂರು ತಾಲೂಕು ಕೃಷಿಕ ಸಮಾಜ ವೆಂಕಟೇಶ ಹೆಬ್ಬಾರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.