ಕರಾವಳಿಯಲ್ಲಿ ಪರಿಷತ್ ಫೈಟ್!
– ಅ.21ರಂದು ವಿಧಾನ ಪರಿಷತ್ ಸ್ಥಳಿಯಾಡಳಿತ ಉಪ ಚುನಾವಣೆ
– 3 ಅಭ್ಯರ್ಥಿಗಳ ನಾಮಪತ್ರ ಸೇರಿ ಒಟ್ಟು 4 ಮಂದಿ ನಾಮಪತ್ರ
NAMMUR EXPRESS NEWS
ಉಡುಪಿ: ವಿಧಾನ ಪರಿಷತ್ ಸ್ಥಳಿಯಾಡಳಿತ ಕ್ಷೇತ್ರದ ಉಪ ಚುನಾವಣೆ ಅ.21ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಅ. 3ರಂದು ಬಿಜೆಪಿ, ಕಾಂಗ್ರೆಸ್ ಮತ್ತು ಎಸ್ಡಿಪಿಐ ಪಕ್ಷದ ಅಭ್ಯರ್ಥಿಗಳು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದರು.
ಕೋಟಾ ಶ್ರೀನಿವಾಸ್ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಮೇಲೆ ಅವರ ಸ್ಥಾನ ತೆರವಾಗಿತ್ತು. ಇದೀಗ
ಬಿಜೆಪಿಯಿಂದ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್ ನಿಂದ ರಾಜು ಪೂಜಾರಿ ಮತ್ತು ಎಸ್ಡಿಪಿಐ ನಿಂದ ಅನ್ವರ್ ಸಾದತ್ ಬಜತ್ತೂರು ನಾಮಪತ್ರ ಸಲ್ಲಿಸಿದರು.
ಅ. 3ರಂದು ಮೂರು ಅಭ್ಯರ್ಥಿಗಳ ನಾಮಪತ್ರ ಸೇರಿ ಒಟ್ಟು ನಾಲ್ಕು ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ. ಮಂಗಳೂರು ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲನ್ ಮುಹಿಲನ್ ನಾಮಪತ್ರ ಸಲ್ಲಿಸಲಾಗಿದೆ.
ಅಭ್ಯರ್ಥಿಗಳು ಯಾರು ಏನಂದರು?
ನಾಮಪತ್ರ ಸಲ್ಲಿಕೆಗೆ ಮುನ್ನ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ ಸಾಮಾನ್ಯ ಕಾರ್ಯಕರ್ತನಿಗೆ ದೊಡ್ಡ ಜವಾಬ್ದಾರಿ ನೀಡಿದ್ದು, ಜವಾಬ್ದಾರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ, ಗ್ರಾಪಂ, ತಾಪಂ ಸದಸ್ಯನಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಅನುಭವ ಹೊಂದಿದ್ದು,ಸ್ಥಳೀಯ ಸಂಸ್ಥೆಗಳ ಎಲ್ಲಾ ಸಮಸ್ಯೆಗಳ ಅರಿವು ತಿಳಿದಿದೆ. ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತೇನೆ ಎಂದಿದ್ದಾರೆ.