ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಷತ್ ಮತದಾನ ಯಶಸ್ವಿ
– ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಸಹಾಯಕ ಆಯುಕ್ತರಾದ ಹರ್ಷವರ್ಧನ ಮತದಾನ
– ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿರುವ ಬ್ರಿಜೇಶ್ ಚೌಟ ಮತ
NAMMUR EXPRESS NEWS
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾನ ಸೋಮವಾರ ಬೆಳಗ್ಗೆ ಆರಂಭಗೊಂಡಿದ್ದು, ಬಿರುಸಿನಿಂದ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಸಹಾಯಕ ಆಯುಕ್ತರಾದ ಹರ್ಷವರ್ಧನ ಅವರು ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಮತ ಚಲಾಯಿಸಿದ್ದಾರೆ. ಅದೇ ರೀತಿ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿರುವ ಬ್ರಿಜೇಶ್ ಚೌಟ ಅವರು ಕೂಡ ಮಂಗಳೂರು ವಿವಿ ಕಾಲೇಜಿನಲ್ಲಿರುವ ಮತಗಟ್ಟೆಗೆ ತೆರಳಿ ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತಮ್ಮ ಹಕ್ಕು ಚಲಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಪದವೀಧರ ಕ್ಷೇತ್ರದಲ್ಲಿ ಒಟ್ಟು 19,971 ಮತದಾರರು ಇದ್ದು ಅವರ ಪೈಕಿ 11,596 ಮಂದಿ ಮಹಿಳೆಯರು ಹಾಗೂ 8,375 ಮಂದಿ ಪುರುಷ ಮತದಾರರು ಇದ್ದಾರೆ.
ಅದೇರೀತಿ ಶಿಕ್ಷಕ ಕ್ಷೇತ್ರದಲ್ಲಿ ಒಟ್ಟು 8,189 ಮಂದಿ ಮತದಾರರು ಇದ್ದು ಅವರ ಪೈಕಿ 5539 ಮಂದಿ ಪುರುಷ ಹಾಗೂ 2650 ಮಂದಿ ಮಹಿಳಾ ಮತದಾರರು ಇದ್ದಾರೆ. . ಶಿಕ್ಷಕರ ಕೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಸ್.ಎಲ್.ಭೋಜೆಗೌಡ, ಕಾಂಗ್ರೆಸ್ನಿಂದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಸ್ಪರ್ಧೆ ಮಾಡಿದ್ದಾರೆ ಮ್ ಅದೇರೀತಿ ಪದವೀಧರರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ, ಬಿಜೆಪಿಯಿಂದ ಡಾ.ಧನಂಜಯ ಸರ್ಜಿ ಹಾಗೂ ಪಕ್ಷೇತರರಾಗಿ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರು ಸ್ಪರ್ಧೆ ಮಾಡಿದ್ದಾರೆ.