ಅಮೇರಿಕದಲ್ಲಿ ಉಡುಪಿ ಅರ್ಚಕರ ಸಂಸ್ಕೃತ ಪ್ರಾರ್ಥನೆ!
– ಕಮಲಾ ಹ್ಯಾರಿಸ್ ಪಕ್ಷದ ಭಾರಿ ಕಾರ್ಯಕ್ರಮದಲ್ಲಿ ಅಮೆರಿಕನ್ನರ ಮನ ಗೆದ್ದ ಉಡುಪಿಯ ಪುರೋಹಿತರು
– ವಿದೇಶದಲ್ಲಿ ಮೊಳಗಿದ ಭಾರತದ ಶಾಂತಿ ಮಂತ್ರ
NAMMUR EXPRESS NEWS
ಉಡುಪಿ: ಅಮೇರಿಕದ ಡೆಮೊಕ್ರಾಟಿಕ್ ಪಕ್ಷದ ಭಾರಿ ಸಭೆಯಲ್ಲಿ ಸಂಸ್ಕೃತ ಪ್ರಾರ್ಥನೆ ಮಾಡಿದ ರಾಕೇಶ್ ಭಟ್ ಇದೀಗ ಗಮನ ಸೆಳೆದಿದ್ದು, ಅವರು ಮೂಲತಃ ಕರ್ನಾಟಕದ ಉಡುಪಿಯವರು ಎನ್ನುವುದು ವಿಶೇಷ. ಇವರು ತಮ್ಮ ಗುರುಗಳಾದ ಉಡುಪಿ ಅಷ್ಟಮಠದ ಪೇಜಾವರ ಸ್ವಾಮೀಜಿಯವರ ಬಳಿ ಋಗ್ವದ ಮತ್ತು ತಂತ್ರಸಾರ (ಮಾಧ್ವ) ಆಗಮದಲ್ಲಿ ತರಬೇತಿ ಪಡೆದಿದ್ದಾರೆ.
ಅಮೆರಿಕದ ಚಿಕಾಗೋದಲ್ಲಿ ಕಮಲಾ ಹ್ಯಾರಿಸ್ ಅವರ ಡೆಮಾಕ್ರಟಿಕ್ ಪಕ್ಷದ 3ನೇ ದಿನದಂದು ಕರ್ನಾಟಕದ ಉಡುಪಿ ಮೂಲದ ಅರ್ಚಕರೊಬ್ಬರು ಸಂಸ್ಕೃತ ಪ್ರಾರ್ಥನೆಯ ಮೂಲಕ ಕಲಾಪವನ್ನು ಪ್ರಾರಂಭಿಸಿದರು. ವೈದಿಕ ಪ್ರಾರ್ಥನೆ ಹಾಗೂ ಅದರ ಅರ್ಥವನ್ನು ಅವರು ವಿವರಿಸಿದ ಬಳಿಕ, ಸಭಾಂಗಣದಾದ್ಯಂತ “ಓಂ ಶಾಂತಿ ಶಾಂತಿ” ಘೋಷಣೆಗಳು ಪ್ರತಿಧ್ವನಸಿದವು.
ಮೇರಿ್ಯಾಂಡ್ನ ಶ್ರೀ ಶಿವ ವಿಷ್ಣು ದೇವಸ್ಥಾನದ ಅರ್ಚಕ ರಾಕೇಶ್ ಭಟ್ ಅವರು ಅಖಂಡ ದೇಶಕ್ಕಾಗಿ ದೇವರ ಆಶೀರ್ವಾದ ಕೋರಿ ವೈದಿಕ ಪ್ರಾರ್ಥನೆ ಮಾಡಿದರು. “ನಮ್ಮಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ರಾಷ್ಟ್ರದ ವಿಷಯಕ್ಕೆ ಬಂದಾಗ ನಾವು ಒಗ್ಗಟ್ಟಾಗಿರಬೇಕು” ಎಂದು ಭಟ್ ಹೇಳಿದರು