ಕರಾವಳಿ ಟಾಪ್ ನ್ಯೂಸ್
ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಪ್ರತಿಭಟನೆ!
* ಮಣಿಪಾಲ: ಬೈಕಲ್ಲಿ ಹೋಗುತ್ತಿರುವಾಗ ಹಾರ್ಟ್ ಅಟ್ಯಾಕ್
* ಬಂಟ್ವಾಳ: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಕಳವು!
* ಕುಂದಾಪುರ: ಹೆಮ್ಮಾಡಿ ಬಳಿ ಬಸ್ಸುಗಳ ಡಿಕ್ಕಿ: 8 ಮಂದಿಗೆ ಗಾಯ
NAMMUR EXPRESS NEWS
ಮಂಗಳೂರು : ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲರ್ ಹಾಗೂ ಗ್ರಾಹಕರ ಬೃಹತ್ ಪ್ರತಿಭಟನಾ ಜಾಥಾ ಸೆ. 17ರಂದು ನಗರದಲ್ಲಿ ಜರುಗಿತು.
ಜ್ಯೋತಿ ಸರ್ಕಲ್ನ ಆಪಲ್ನ ಸರ್ವಿಸ್ ಸೆಂಟರ್ ಮ್ಯಾಪಲ್ನ ಎದುರುಗಡೆಯಿಂದ ಕ್ಲಾಕ್ ಟವರ್ ವರಗೆ ಮೆರವಣಿಗೆಯಲ್ಲಿ ಸಾಗಿಬಂದ ಪ್ರತಿಭಟನಾಕಾರರು ಕ್ಲಾಕ್ ಟವರ್ ಬಳಿ ತಮ್ಮ ಬೇಡಿಕೆಗಳನ್ನು ಕೂಡಲೇ ಪೂರೈಸುವಂತೆ ಸಂಸ್ಥೆಯನ್ನು ಆಗ್ರಹಿಸಿದರು.
ಈ ವೇಳೆ ಮಾತಾಡಿದ ಶೈಲೇಂದ್ರ ಸರಳಾಯ ಅವರು, “ನಮ್ಮಲ್ಲಿ ಹಾಗೂ ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ೊಬೈಲ್ ಸ್ಕ್ರೀನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್ನ ಸರ್ವಿಸ್ ಸೆಂಟರ್ ಮ್ಯಾಪಲ್ ಅನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಕೋರಿದಾಗ ಅವರ ಉಡಾಫೆ ಉತ್ತರ ಗ್ರಾಹಕರಿಗೆ ಆಘಾತ ಉಂಟು ಮಾಡಿದೆ. ಗ್ರಾಹಕರ ಹಿತದೃಷ್ಟಿಯಿಂದ, ಆಪಲ್ನ ಮ್ಯಾಪಲ್ ಸರ್ವಿಸ್ ಸೆಂಟರ್ನ ಕಳಪೆ ಸೇವೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದೇವೆ“ ಎಂದರು.
ಸಂಘಟನೆಯ ಚೇರ್ಮೆನ್ ಗುರುದತ್ ಕಾಮತ್, ಅಧ್ಯಕ್ಷ ರಾಜೇಶ್ ಮಾಬಿಯಾನ್, ಕಾರ್ಯದರ್ಶಿ ಇಮ್ರಾನ್, ಸ್ಥಾಪಕ ಅಧ್ಯಕ್ಷ ಸಲೀಮ್, ಉಪಾಧ್ಯಕ್ಷ ಅಝರ್ ಮೊಹಮದ್ ಮತ್ತಿತರರು ಉಪಸ್ಥಿತರಿದ್ದರು.
ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನ: ವ್ಯಕ್ತಿ ಮೃತ್ಯು
ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ರಾಘವೇಂದ್ರ (49) ಸಾವನ್ನಪ್ಪಿದ್ದಾರೆ.
ಸೆ.17ರಂದು ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್ ಅವರೊಂದಿಗೆ ಪುರೋಹಿತ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗಲೇ ಹೃದಯ ಸ್ತಂಭನಗೊಂಡು ವಾಹನ ಸಹಿತ ರಸ್ತೆಗೆ ಬಿದ್ದು ಅಸ್ವಸ್ಥಗೊಂಡರು.
ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಕಳವು!
ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ಸೆ.16 ರಂದು ನಡೆದಿದೆ.
ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ.
ಸೆ.16ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ೆಿದೆ ಎನ್ನಲಾಿದೆ.
ರಾತ್ರಿ 12.45 ಗಂಟೆಗೆ ಮಸೀದಿಯಿಂದ ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿ, ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ.
ಕುಂದಾಪುರ: ಹೆಮ್ಮಾಡಿ ಬಳಿ ಬಸ್ಸುಗಳ ಡಿಕ್ಕಿ: 8 ಮಂದಿಗೆ ಗಾಯ
ಕುಂದಾಪುರ : ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಇನ್ನೊಂದು ಖಾಸಗಿ ಬಸ್ಸು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸುಮಾರು 8 ಕ್ಕೂ ಮಿಕ್ಕಿ ಪ್ರಯಾಣಿಕರು ಗಾಯಗೊಂಡ ಘಟನೆ ಹೆಮ್ಮಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ರಾತ್ರಿ ನಡೆದಿದೆ.
ಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಸನ್ನು ಚಾಲಕ ಹೆಮ್ಮಾಡಿ ಗ್ರಾಮದ ಕಾಶೀ ಮಠದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಲ್ಲಿಸಿದಾಗ ಅದೇ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ಇನ್ನೊಂದು ಖಾಸಗಿ ಬಸ್ ನಿಂತಿದ್ದ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಚಾಲಕ ಕಿರಣ, ಕಂಡಕ್ಟರ್ ರಾಜು, ಪ್ರಯಾಣಿಕರಾದ ರೇವತಿ, ಜಾನು, ಚೇತನಾ, ಪ್ರತ್ಯುಷಾ, ಲಾವಣ್ಯ ಸಿಂಗ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ರಿಕ್ಷಾ ಚಾಲಕರು ಹಾಗೂ ಸಾರ್ವಜನಿಕರು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ