ಟಾಪ್ 4 ನ್ಯೂಸ್
ಮಂಗಳೂರು ವಿವಿ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
– ಕುಂದಾಪುರದಲ್ಲಿ ಎಬಿವಿಪಿ ಹೋರಾಟ
– ಕಾಂಗ್ರೆಸ್ ಸರ್ಕಾರದ ವಿರುದ್ಧ ಪುತ್ತೂರು ಬಿಜೆಪಿ ಪ್ರತಿಭಟನೆ
– ಕಾಪು ಪುರಸಭಾ ಸದಸ್ಯೆ ಸರಿತಾ ಬಿಜೆಪಿ ಸೇರ್ಪಡೆ
– ಐವನ್ ಡಿಸೋಜಾ ಹೇಳಿಕೆ: ಬಿಸಿ ರೋಡಿನಲ್ಲಿ ಬೃಹತ್ ಪ್ರತಿಭಟನೆ
NAMMUR EXPRESS NEWS
ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಯುವಮೋರ್ಚ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟಾ ರಾಜ್ಯ ಸರಕಾರ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತಾನಾಡಿದ ಕಾಂಗ್ರೆಸ್ ನಾಯಕರ ವಿರುದ್ದ ಪ್ರತಿಭಟನೆ ದರ್ಬೆ ವೃತ್ತ ಬಳಿ ನಡೆಯಿತು.
ಯುವ ಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕೃಷ್ಣ ಹೆಮ್ಮಾರ್ ಪ್ರಾಸ್ತಾವಿಕ ಮಾತಾನಾಡಿ ಹಗರಣದಲ್ಲಿ ತೊಡಗಿಸಿಕೊಂಡ ಸರಕಾರ ಸಿದ್ದರಾಮಯ್ಯ ಸರಕಾರ, ಜನರನ್ನು ಬೀದಿಗೆ ತಂದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ, ಕಣ್ಣಿಗೆ ಮಣ್ಣೆರೆಚುವ ವ್ಯವ್ಥೆಯೇ ಈ ಸುಳ್ಳು ಗ್ಯಾರಂಟಿಗಳಾಗಿವೆ ಈ ಗ್ಯಾರಂಟಿಯಿಂದ ಸರಕಾರದ ಖಜಾನೆ ಖಾಲಿಯಾಗಿದೆ , ನಾಲ್ಕು ಸಾವಿರ ಕೋಟಿ ದೋಚಿದ್ದು ಕಾಂಗ್ರೆಸ್ ತಕ್ಷಣ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ತಿಳಿಸಿದರು.
ಕಾಪು ಪುರಸಭಾ ಸದಸ್ಯೆ ಸರಿತಾ ಬಿಜೆಪಿ ಸೇರ್ಪಡೆ
ಕಾಪು:ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿ, ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಎಸ್.ಡಿ.ಪಿ.ಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಹಾಗೂ ಅವರ ಪತಿ ಶಿವಾನಂದ್ ಬಿಜೆಪಿಗೆ ಸೇರ್ಪಡೆಯಾದರು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರು ಭಾರತೀಯ ಜನತಾ ಪಾರ್ಟಿಯ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕೋಶಾಧಿಕಾರಿಗಳಾದ ಮನೋಹರ್ ಕಲ್ಮಾಡಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಜಿಲ್ಲಾ ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಪುರಸಭೆಯ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಗಳೂರು ವಿವಿ ಅವ್ಯವಸ್ಥೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ, ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಕುಂದಾಪುರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿತ್ ಪ್ರತಿಭಟನೆ ನಡೆಸಿತು.
ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ 188 ಕಾಲೇಜುಗಳಲ್ಲಿ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಿದ್ದು, ವಿಶ್ವವಿದ್ಯಾನಿಲಯವು ಇಂದು ಸಮಸ್ಯೆಗಳ ಗೂಡಾಗಿದೆ. ಈಗಾಗಲೇ ರಾಜ್ಯದೆಲ್ಲೆಡೆ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದಿವೆ. ಪದವಿ ವಿದ್ಯಾರ್ಥಿಗಳಿಗೂ ಸಹ ಈಗಾಗಲೇ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಗಿದು ತರಗತಿಗಳು ಪ್ರಾರಂಭವಾಗಿವೆ. ಆದರೆ ಹಾಸ್ಟೆಲ್ ಪ್ರವೇಶಾತಿಗಳು ಪ್ರಾರಂಭವಾಗದೇ ಇರುವುದರಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಕೂಡಲೇ ಹಾಸ್ಟೆಲ್ ಪ್ರವೇಶಾತಿಯನ್ನು ಆರಂಭಿಸಬೇಕು ಮತ್ತು ಹಾಸ್ಟೇಲ್ ಸೀಟುಗಳನ್ನು ಹೆಚ್ಚಿಸಬೇಕು. ಪ್ರತಿ ವರ್ಷ ಪದವಿ ವಿದ್ಯಾರ್ಥಿಗಳಿಗೆ ಸೂಕ್ತವಾಗಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಅವರ ತರಗತಿಗಳು ಸಂಪೂರ್ಣವಾಗದೇ ಪರೀಕ್ಷೆಗಳಿಗೆ ಹಾಜರಾಗುವ ಪರಿಸ್ಥಿತಿ ಇದೆ. ಸರ್ಕಾರ ತಡ ಮಾಡದೆ ಕೂಡಲೇ ಉಪನ್ಯಾಸಕರ ಸಂಪೂರ್ಣ ನೇಮಕಾತಿಯನ್ನು ಮಾಡಬೇಕೆಂದು ಉಡುಪಿ ಜಿಲ್ಲಾ ಎಬಿವಿಪಿ ಸಹ ಸಂಚಾಲಕ ದರ್ಶನ್ ಆಗ್ರಹಿಸಿದರು.
ಉಡುಪಿ ಜಿಲ್ಲಾ ಎಬಿವಿಪಿ ಸಂಚಾಲಕ ಕಾರ್ತಿಕ್ , ಶೆಟ್ಟಿ, ತಾಲೂಕು ಸಂಚಾಲಕ್ ಆಕಾಶ್, ಪ್ರಮುಖ ಕಾರ್ಯಕರ್ತರಾದ ಪ್ರಥಮ್, ರಕ್ಷನ್, ಶಶಿ, ವಿಘ್ನೇಶ್ವರ, ಧ್ವನಿ, ಸಿಂಚನ, ವೈಷ್ಣವಿ ಉಪಸ್ಥಿತರಿದ್ದರು.
ಐವನ್ ಡಿಸೋಜಾ ಹೇಳಿಕೆ: ಬಿಸಿ ರೋಡಿನಲ್ಲಿ ಬೃಹತ್ ಪ್ರತಿಭಟನೆ!
ಮಂಗಳೂರು : ಐವನ್ ಡಿಸೋಜಾ ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರೂ ಎಫ್ಐಆರ್ ದಾಖಲಾಗಿಲ್ಲ.ಹೀಗಾಗಿ ಸದ್ಯ ಬಿಜೆಪಿ ಜನಪ್ರತಿನಿಧಿಗಳ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ. ಈ ಮಧ್ಯೆ ಐವನ್ ಡಿಸೋಜಾ ಅವರ ಮನೆ ಮೇಲೆ ಕಲ್ಲುತೂರಾಟ ಪ್ರಕರಣ ನಡೆದಿದ್ದು, ಇಬ್ಬರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 28ರಂದು ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಭರತ್ ಅಲಿಯಾಸ್ ಯಕ್ಷಿತ್, ಿೇಶ್ ಕುರ್ತಮೊಗೆರು ಬಂಧಿತರು. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ಐವನ್ ಡಿಸೋಜಾ ಹೇಳಿಕೆಯಿಂದ ಸಿಟ್ಟಾಗಿ ಕಲ್ಲೆಸೆದಿದ್ದಾಗಿ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.
ಐವನ್ ಡಿಸೋಜ ಅವರ ದೇಶದ್ರೋಹದ ಹೇಳಿಕೆ ನೀಡಿದ್ದು, ಯುವ ಮೋರ್ಚಾವು ಠಾಣೆಗೆ ದೂರೂ ನೀಡಿದ್ದರೂ ಪ್ರಯೋಜನವಾಗಿಲ್ಲ!! ಆದ್ದರಿಂದ ಬಿಸಿ ರೋಡಿನಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಬೃಹತ್ ಪ್ರತಿಭಟನೆ ನಡೆದಿದೆ.