ಹೆಬ್ರಿ ಅಮೃತ ಭಾರತಿಯಲ್ಲಿ ರಾಜ್ಯೋತ್ಸವ ಸಂಭ್ರಮ
– ಪುಟಾಣಿಗಳಿಂದ ಕನ್ನಡ ನಾಡು ನುಡಿಯ ನೃತ್ಯ ಪ್ರದರ್ಶನ
– ಶಿಕ್ಷಕರು, ಮಕ್ಕಳಿಂದ ಕನ್ನದಾಂಬೆಗೆ ನಮನ
NAMMUR EXPRESS NEWS
ಹೆಬ್ರಿ: ಹೆಬ್ರಿ ಪಾಂಡುರಂಗ ರಮಣ ನಾಯಕ್ ಸೇವಾಸಂಗಮ ಅಮೃತಭಾರತಿ ಶಿಶುಮಂದಿರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಅಮೃತಭಾರತಿ ವಿದ್ಯಾಲಯದ ಕನ್ನಡ ಶಿಕ್ಷಕ ಮಹೇಶ್ ಹೈಕಾಡಿ ಮಾತನಾಡಿ ಕನ್ನಡ ಭಾಷೆ, ಸಾಹಿತ್ಯ , ಸಂಸ್ಕೃತಿ , ಕಲೆಯೊಂದಿಗೆ ಸಮೃದ್ಧವಾಗಿದೆ ಎಂದು ನುಡಿದರು. ಅಮೃತ ಭಾರತಿ ಸೇವಾಸಂಗಮ ಶಿಶುಮಂದಿರದ ಸಭಾಗೃಹದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾರತಮಾತೆ ಮತ್ತು ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ಶಿಶು ಮಂದಿರದ ಮುಖ್ಯ ಶಿಕ್ಷಕಿ ಪ್ರತಿಮಾ ಹಾಗೂ 41 ಪುಟಾಣಿಗಳು ಉಪಸ್ಥಿತರಿದ್ದರು. ಪುಟಾಣಿಗಳಿಂದ ಕನ್ನಡ ನಾಡು ನುಡಿಯ ಕುರಿತಾದ ನೃತ್ಯ ಪ್ರದರ್ಶನ ನಡೆಯಿತು. ಮಾತಾಜಿಯವರಾದ ಅನಿತಾ ಸ್ವಾಗತಿಸಿ, ಮಲ್ಲಿಕಾ ವಂದಿಸಿದರು.