ಕರಾವಳಿ ಟಾಪ್ ನ್ಯೂಸ್
ಹಿರಿಯ ಪತ್ರಕರ್ತ, ಬರಹಗಾರ ಟಿ.ರಾಜಶೇಖರ್ ವೈ ಇನ್ನಿಲ್ಲ!
* ಬಂಟ್ವಾಳ: ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ
* ಉಡುಪಿ: ವಿವಾಹ ನಿಶ್ಚಯವಾಗಿದ್ದ, ಯುವತಿ ನೇಣಿಗೆ ಶರಣು
* ಕಡಬ: ವೃದ್ದ ದಂಪತಿಗಳ ಮನೆ ದ್ವಂಸ: ಹೋರಾಟ
NAMMUR EXPRESS NEWS
ಮಂಗಳೂರು: ಹಿರಿಯ ಪತ್ರಕರ್ತ, ಬರಹಗಾರ, ಚಿಂತಕ, ದಲಿತ ವಾಯ್ಸ್ ಪತ್ರಿಕೆಯ ಸ್ಥಾಪಕ ಸಂಪಾದಕ ವಿ.ಟಿ.ರಾಜಶೇಖರ್ ವೈ ನ. 20 ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರಿಗೆ 93 ವರ್ಷ ವಯಸ್ಸಾಗಿದ್ದು, ರಾಜಶೇಖರ್ ಅವರು ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದು, ಇತ್ತೀಚಿನ ತಿಂಗಳುಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.
ವಿ.ಟಿ.ರಾಜಶೇಖರ್ ಅವರು ದಲಿತರ ಹಕ್ಕುಗಳಿಗಾಗಿ ವಾದಿಸಲು 1981ರಲ್ಲಿ ದಲಿತ್ ವಾಯ್ಸ್ ಅನ್ನು ಪ್ರಾರಂಭಿಸಿದರು.ಇದಕ್ಕೂ ಮೊದಲು ದಿ ಇಂಡಿಯನ್ ಎಕ್ಸೆಸ್ ನಲ್ಲಿ ವಿಶಿಷ್ಟ ವೃತ್ತಿಜೀವನವನ್ನು ಹೊಂದಿದ್ದರು. ನಿಯತಕಾಲಿಕದಲ್ಲಿ ಅವರ ಬರಹಗಳು ದೇಶಾದ್ಯಂತ ವ್ಯಾಪಕ ಚರ್ಚೆಗಳನ್ನು ಹುಟ್ಟುಹಾಕಿದವು.
* ಬಂಟ್ವಾಳ: ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ
ಬಂಟ್ವಾಳ : ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕುಂಡಡ್ಕದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಿಟ್ಲ ಸಮೀಪದ ಕುಂಡಡ್ಕ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿ(58) ಎಂದು ಗುರುತಿಸಲಾಗಿದೆ.
ತಿಮ್ಮಪ್ಪ ಅವರು ನ.19ರಂದು ಸಂಜೆ ಮನೆಯಿಂದ ಹೊರ ಹೋದವರು ಬಳಿಕ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಅವರಿಗಾಗಿ ಮನೆಮಂದಿ ಹುಟುಕಾಟ ನಡೆಸಿದಾಗ ಮನೆ ಸಮೀಪದ ಗುಡ್ಡದಲ್ಲಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
* ಉಡುಪಿ: ವಿವಾಹ ನಿಶ್ಚಯವಾಗಿದ್ದ, ಯುವತಿ ನೇಣಿಗೆ ಶರಣು
ಉಡುಪಿ: ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನ.17ರಂದು ಮೃತಪಟ್ಟಿದ್ದಾರೆ.
ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ.
ಮನೆಯ ರೂಮ್ ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು
ನ. 17ರಂದು ಕೊನೆಯುಸಿರೆಳೆದಿದ್ದಾರೆ.
ಕೀರ್ತನಾ ಅವರು ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತಿದ್ದರು. ಇವರಿಗೆ ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದುಬಂದಿದೆ.
ಕಡಬ: ವೃದ್ದ ದಂಪತಿಗಳ ಮನೆ ದ್ವಂಸ: ಹೋರಾಟ
ಕಡಬ: ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಕಾಪಿನ ಬಾಗಿಲು ಎಂಬಲ್ಲಿ ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ನ.20ರ ಬುಧವಾರ ಕಡಬ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ಆರಂಭಗೊಂಡಿದೆ.
ಸಾಮಾಜಿಕ ಹೋರಾಟಗಾರ, ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್ ಟಿ., ನ್ಯಾಯವಾದಿ ಬಿ.ಎಂ.ಭಟ್, ಕೆ.ಆರ್.ಎಸ್. ಪಕ್ಷದ ವೇಣುಗೋಪಾಲ್ ಅವರು ನೇತೃತ್ವ ವಹಿಸಿದ್ದು, ತಹಶೀಲ್ದಾರ್ ಕಚೇರಿ ಪಕ್ಕದ ರಸ್ತೆ ಬದಿ ಅಧಿಕ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ವೃದ್ದ ದಂಪತಿ ನಜ್ಜುಗುಜ್ಜುಗೊಂಡ ಪಾತ್ರೆ ಪರಿಕರಗಳ ಜೊತೆ ಆಗಮಿಸಿ ಉರಿ ಬಿಸಿಲಿನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸಮಾನ ಮನಸ್ಕರು ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ. ಮನೆ ಕಳೆದುಕೊಂಡ ವೃದ್ದ ದಂಪತಿ ನನಗೆ ಜೀವ ಬೇಡ ಎಂದು ನೆಲದಲ್ಲಿ ಒದ್ದಾಡಿದ್ದು, ಅಧಿಕಾರಿಗಳು ಮೂಕಪ್ರೇಕ್ಷಕರಾಗಿ ನೋಡುತ್ತಿದ್ದರು.ಪ್ರತಿಭಟನೆಗೆ ಅನುಮತಿ ಇಲ್ಲ ಎಂದು ಅಧಿಕಾರಿ ಹೇಳಿದ ಹಿನ್ನೆಲೆ ಪ್ರತಿಭಟನಾಕಾರರು ಆಕೋಶಗೊಂಡು ರಸ್ತೆ ಸಮೀಪ ಗುಂಪು ಸೇರಿದ್ದಾರೆ. ಕಡಬ ಠಾಣಾ ಎಸ್.ಐ. ಅಭಿನಂದನ್ ಹಾಗೂ ನೆರೆಯ ಠಾಣೆಗಳ ಪೊಲೀಸರು ಬಂದೋ ಬಸ್ತ್ ಏರ್ಪಡಿಸಿದ್ದಾರೆ. ಹೋರಾಟಗಾರರಾದ ಹಕೀಮ್ ಕೊಕ್ಕಡ, ಈಶ್ವರಿ, ಸಿಮಿ ಉಂಡಿಲ ಸೇರಿದಂತೆ ಹಲವಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.