Categories
ಕರಾವಳಿ

ಹೊತ್ತಿ ಉರಿದ ಏಳು ಬೋಟು: ಕೋಟಿ ಕೋಟಿ ನಷ್ಟ!

ಹೊತ್ತಿ ಉರಿದ ಏಳು ಬೋಟು: ಕೋಟಿ ಕೋಟಿ ನಷ್ಟ!
– ಕುಂದಾಪುರ: ಬೆಂಕಿ ನಂದಿಸಲು ಹರ ಸಾಹಸ
– ಹಾಸ್ಟೆಲ್ 6 ನೇ ಮಹಡಿಯಿಂದ ಜಿಗಿದ ಯುವತಿ
– ಎಂಬಿಬಿಎಸ್ ವಿದ್ಯಾರ್ಥಿನಿ ಸಾವಿಗೆ ಶರಣು

NAMMUR EXPRESS NEWS
ಕುಂದಾಪುರ: ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಏಳು ಮೀನುಗಾರಿಕಾ ಬೋಟುಗಳಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಸುಟ್ಟು ಕರಕಲಾಗಿದೆ‌. ಈ ದುರ್ಘಟನೆಯಿಂದ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ವರದಿಯಾಗಿಲ್ಲ. ಅಗ್ನಿ ಅವಘಡಕ್ಕೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಅಗ್ನಿ ಶಾಮಕ ದಳ, ಪೊಲೀಸರು, ಸಾರ್ವಜನಿಕರು ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಎಂಬಿಬಿಎಸ್ ವಿದ್ಯಾರ್ಥಿನಿ ಸಾವಿಗೆ ಶರಣು

ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿ ಲೇಡೀಸ್ ಹಾಸ್ಟೆಲ್ ನ 6 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಎಜೆ ಆಸ್ಪತ್ರೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಎಜೆ ಲೇಡೀಸ್ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಈಕೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ಹತಾಶ ಜೀವನ ಕಾರಣ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.