ಸುರತ್ಕಲ್ ಮಸೀದಿಗೆ ಕಲ್ಲು ತೂರಾಟ: ಐವರು ಅರೆಸ್ಟ್!
– ಮಂಗಳೂರು ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್
– ಎರಡೂ ಕಡೆಯವರ ಮೇಲೆ ಪೊಲೀಸ್ ಕೇಸ್
– ಶರಣ್ ಪಂಪ್ವೆಲ್, ಪುನೀತ್ ಅತ್ತಾವರ ವಿರುದ್ಧ ಕೇಸ್
– ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಬಾವುಟ ಹಿಡಿದು ಬೈಕಲ್ಲಿ ಸಂಚಾರ: 6 ಅಪ್ರಾಪ್ತರ ಬಂಧನ
NAMMUR EXPRESS NEWS
ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ಮಸೀದಿಗೆ ಅಪರಿಚಿತರು ಕಲ್ಲು ತೂರಾಟ ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರು ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು, ಮುಂಚೂರು ನಿವಾಸಿ ಸುಜಿತ್ ಎಂದು ತಿಳಿದು ಬಂದಿದೆ. ಆರೋಪಿಗಳು ಜನತಾ ಕಾಲನಿ ಸ್ಮಶಾನದ ಕಡೆಯಿಂದ ಎರಡು ಬೈಕ್ ಗಳಲ್ಲಿ ಬಂದು, ಮಸೀದಿಯ ಹಿಂಭಾಗದ ಕಿಟಕಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದರು ಎಂದು ತಿಳಿದು ಬಂದಿದೆ.
ಭಾರೀ ಪೊಲೀಸ್ ಬಂದೋಬಸ್ತ್
ಕಲ್ಲ ೂರಾಟ ನಡೆಸಿದ ಘಟೆ ಸೆ.15ಕ್ಕೆ ನಡೆದಿದ್ದು ಸುರತ್ಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದುಕೊಂಡು ತೀವ್ರ ತನಿಖೆ ನಡೆಸುತ್ತಿದ್ದಾರೆ. ಈದ್ ಮಿಲಾದ್ ಪ್ರಯುಕ್ತ ಹಲವು ಭಾಗಗಳಲ್ಲಿ ಮೆರವಣಿಗೆ ಇರುವುದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.
ಶರಣ್ ಪಂಪ್ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಶರಣ್ ಪಂಪ್ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಬಜರಂಗದಳ ಮುಖಂಡ ಪುನೀತ್ ಅತ್ತಾವರ ಮಂಡ್ಯದಲ್ಲಿ ಪೊಲೀಸರು ವಶಕ್ಕೆ ಪಡೆದಿದಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರಿನ ಬಂಟ್ವಾಳದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ಮಾಡಿದ್ದ ಭಾಷಣಕ್ಕೆ ವ್ಯಕ್ತಿಯೋರ್ವ ಆಡಿಯೋ ರಿಲೀಸ್ ಮಾಡಿದ್ದು ತಾಕತ್ತಿದ್ದರೆ ಈದ್ ಮಿಲಾದ್ ರ್ಯಾಲಿ ತಡೆಯಿರಿ! ಎಂದು ಸವಾಲೋಡಿದ್ದರು. ಈ ಸವಾಲು ಸ್ವೀಕರಿಸಿದ ಪುನೀತ್ ಅತ್ತಾವರ ಬಿ.ಸಿ ರೋಡ್ ಚಲೋ ಮಾಡುವುದಾಗಿ ಘೋಷಿಸಿದ್ದರು.
ಕೋಮುಪ್ರಚೋದನಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿರುವ ಅವರು ಸಾಮಾಜಿಕ ಜಾಲತಾಣಗಳ ಮೇಲೆಯೂ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುವ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಪುರಸಭಾ ಸದಸ್ಯ ಹಸೈನಾರ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಅದೇರೀತಿ ಶರಣ್ ಪಂಪ್ವೆಲ್, ಪುನೀತ್ ಅತ್ತಾವರ ವಿರುದ್ಧ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ಯಾಲೆಸ್ಟೈನ್ ಬಾವುಟ ಹಿಡಿದು ಬೈಕಲ್ಲಿ ಸಂಚಾರ: 6 ಅಪ್ರಾಪ್ತರ ಬಂಧನ
ಚಿಕ್ಕಮಗಳೂರು: ನಗರದಲ್ಲಿ ಪ್ಯಾಲೆಸ್ಟೈನ್ ಬಾವುಟ ಹಿಡಿದು ಎರಡು ಬೈಕ್ನಲ್ಲಿ ಆರು ಜನ ಅಪ್ರಾಪ್ ುವರು ಸಂಚರಿಸಿದ್ದು, ಸದಯ ಅವರೆಲ್ಲರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಮಾಹಿತಿ ನೀಡಿದ್ದು ನಗರದ ದಂಟರಮಕ್ಕಿ ಕೆರೆ ಏರಿ ಮೇಲಿನ ರಸ್ತೆಯಲ್ಲಿ ಬಾವುಟ ಹಿಡಿದು ಫ್ರೀ ಪ್ಯಾಲೆಸ್ಟೈನ್ ಎಂದು ಘೋಷಣೆ ಕೂಗಿಕೊಂಡು ಬೈಕ್ ಮತ್ತು ಸ್ಕೂಟರ್ನಲ್ಲಿ ಓಡಾಡುತ್ತಿದ್ದ,ಎಲ್ಲರನ್ನೂ ವಶಕ್ಕೆ ಪಡೆಯಲಾಗಿದ್ದು ಬಾವುಟ ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ಟೈನ್ ಧ್ವಜ ಪ್ರದರ್ಶನ ಮಾಡಲು ಯುವಕರಿಗೆ ಯಾರಾದರೂ ಸೂಚನೆ ನೀಡಿರಬಹುದು ಎಂಬ ಅಂಶಗಳ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಪ್ಯಾಲೆಸ್ಟೈನ್ ಧ್ವಜ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.