ಮಂಗಳೂರಿನ ಸುರತ್ಕಲ್ ಉದ್ವಿಘ್ನ!
– ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ: ಭಾರೀ ಅಲರ್ಟ್
– ಶಾಂತಿ ಭಂಗ ಯತ್ನ: ಸಾಮಾಜಿಕ ಜಾಲ ತಾಣದ ಮೇಲೆ ಕಣ್ಣು
NAMMUR EXPRESS NEWS
ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ.
ಕಾಟಿಪಳ್ಳ 3ನೇ ಬ್ಲಾಕ್ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈಗ ಸ್ಥಳದಲ್ಲಿ ಭಾರೀ ಅಲರ್ಟ್ ಮಾಡಲಾಗಿದೆ.
ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಪ್ರಚೋದನಕಾರಿ ಹೇಳಿಕೆ: ಹಿಂದೂ ಮುಖಂಡರ ವಿರುದ್ದ ಪ್ರಕರಣ
ಪ್ರಚೋದನಕಾರಿ ಹೇಳಿಕೆ ನೀಡಿದ ವಿಚಾರವಾಗಿ ವಿಎಚ್ಪಿ ಹಾಗೂ ಬಜರಂಗದಳ ಮುಖಂಡರಾದ ಶರಣ್ ಪಂಪ್ವೆಲ್ ಮ್ತ ಪುನೀತ್ ತ್ತಾವರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ಹರಿಬಿಟ್ಟಿದ್ದ ಪುನಿತ್ ಅತ್ತಾವರ ವಿರುದ್ಧ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಸಾಮಾಜಿಕ ಜಾಲ ತಾಣದ ಮೇಲೆ ಕಣ್ಣು
ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಈಗಾಗಲೇ ಎಚ್ಚರಿಕೆಯನ್ನೂ ನೀಡಿದ್ದಾರೆ.
ಬಿಸಿ ರೋಡ್ ಚಲೋ: ಪೊಲೀಸ್ ವಾರ್ನಿಂಗ್
ಇಂದು ವಿಎಚ್ಪಿ ಹಾಗೂ ಬಜರಂಗದಳ ಮುಖಂಡರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿ ರೋಡ್ ಚಲೋಗೆ ಕರೆ ಕೊಟ್ಟಿದ್ದಾರೆ. ವಿಎಚ್ಪಿ ಮುಖಂಡ ಶರಣ್ ಪಂಪ್ವೆಲ್ಗೆ ಮುಸ್ಲಿಂ ಮುಖಂಡರು ಸವಾಲು ಹಾಕಿದ್ದ ಕಾರಣ ಈ ಜಾಥಾಕ್ಕೆ ಕರೆ ನೀಡಲಾಗಿದೆ.
ಈ ಮಧ್ಯೆ, ಬಿಸಿ ರೋಡ್ ಚಲೋ ಮಾಡದಂತೆ ಪೊಲೀಸರಿಂದ ಹಿಂದೂ ಮುಖಂಡರಿಗೆ ಸೂಚನೆ ರವಾನೆಯಾಗಿದೆ.